ETV Bharat / state

ಮೇಕೆದಾಟು ಯೋಜನೆ ಜಾರಿ ಸಂಬಂಧ ಕೇಂದ್ರ ನಮಗೆ ನ್ಯಾಯ ಒದಗಿಸುತ್ತದೆ: ಬೊಮ್ಮಾಯಿ - ಕೇಂದ್ರ ಸರ್ಕಾರ

ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆ ವಿರೋಧಿಸಿ ನಿರ್ಣಯ ಕೈಗೊಂಡಿರಬಹುದು. ಆದರೆ ಇದು‌ ನಮ್ಮ ರಾಜ್ಯದ ಹಕ್ಕು. ಯೋಜನೆ ಜಾರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನ್ಯಾಯ ಒದಗಿಸುತ್ತದೆ ಎಂಬ ವಿಶ್ವಾಸ ಇದೆ ಎಂದು ಬೊಮ್ಮಾಯಿ ಹೇಳಿದರು.

ಬಸವರಾಜ ಬೊಮ್ಮಾಯಿ
Basavaraja Bommai
author img

By

Published : Jul 12, 2021, 8:42 PM IST

Updated : Jul 12, 2021, 8:47 PM IST

ಬೆಂಗಳೂರು: ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆ ವಿರೋಧಿಸಿ ನಿರ್ಣಯ ಕೈಗೊಂಡಿರಬಹುದು. ಆದರೆ ಇದು‌ ನಮ್ಮ ರಾಜ್ಯದ ಹಕ್ಕು. ಮೇಕೆದಾಟು ಯೋಜನೆ ಜಾರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನ್ಯಾಯ ಒದಗಿಸುತ್ತದೆ ಎಂಬ ವಿಶ್ವಾಸ ನನಗಿದೆ. ಈ ಯೋಜನೆಯನ್ನು ಶೇಕಡಾ ನೂರಕ್ಕೆ ನೂರರಷ್ಟು ಜಾರಿ ಮಾಡುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಗೃಹ ಸಚಿವ ಬಸವರಾಜ ಬೊಮ್ಮಾಯಿ

ಆರ್.​​​ಟಿ ನಗರದಲ್ಲಿನ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಉದ್ದೇಶದೊಂದಿಗೆ ರೂಪುಗೊಂಡಿರುವ ಯೋಜನೆಯನ್ನ ನಿಲ್ಲಿಸುವುದಿಲ್ಲ. ರಾಜ್ಯದ ಜನರ ಹಿತವನ್ನು ರಕ್ಷಿಸಲು ಯೋಜನೆಯನ್ನು ಶೇ. 100ರಷ್ಟು ಜಾರಿಗೊಳಿಸಲಾಗುತ್ತದೆ. ರಾಜ್ಯ ಸರ್ಕಾರದ ಈ ಮನವಿಯನ್ನು ನಿಯಮಗಳ ಪ್ರಕಾರ ಕೇಂದ್ರ ಸರ್ಕಾರ ಪರಿಗಣಿಸಬೇಕು. ಮೇಕೆದಾಟು ಯೋಜನೆಗೆ ಸಂಬಂಧಪಟ್ಟಂತೆ ಈಗಾಗಲೇ ಸಿದ್ಧವಾಗಿರುವ ಸಮಗ್ರ ಯೋಜನಾ ವರದಿಯನ್ನು ಕೇಂದ್ರ ಜಲ ಆಯೋಗಕ್ಕೆ ಸಲ್ಲಿಸಲಾಗಿದೆ ಎಂದರು.

‌ಇದು ಹೆಚ್ಚುವರಿ ಕಾವೇರಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಬಳಕೆ ಮಾಡುವ ಯೋಜನೆ. ಈ ಯೋಜನೆಯನ್ನು ಜಾರಿಗೊಳಿಸುವ ಎಲ್ಲಾ ಹಕ್ಕುಗಳು ಕರ್ನಾಟಕಕ್ಕೆ ಇವೆ. ಇದನ್ನು ನಿಲ್ಲಿಸಲು ಕರ್ನಾಟಕಕ್ಕೆ ಯಾವುದೇ ಸಕಾರಣಗಳು ಇಲ್ಲ. ಯೋಜನೆಯನ್ನು ನಾವು ಖಂಡಿತವಾಗಿಯೂ ಜಾರಿ ಮಾಡುತ್ತೇವೆ. ಇದಕ್ಕಾಗಿ ಬೇಕಾಗುವ ಎಲ್ಲಾ ಒಪ್ಪಿಗೆ ಗಳನ್ನು ಕೇಂದ್ರದಿಂದ ಪಡೆಯಲು ಶಕ್ತಿ ಮೀರಿ ಪ್ರಯತ್ನಿಸುತ್ತೇವೆ‌ ಎಂದರು.

ಇದನ್ನೂ ಓದಿ: ಮೇಕೆದಾಟುವಿನಲ್ಲಿ ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕಕ್ಕೆ ಅವಕಾಶ ಬೇಡ : ತಮಿಳುನಾಡು ಸರ್ವಪಕ್ಷಗಳಿಂದ ಕೇಂದ್ರಕ್ಕೆ ಒತ್ತಾಯ

ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಪಟ್ಟಂತೆ ಈಗಾಗಲೇ ತೀರ್ಪು ಬಂದಿದೆ. ಅದರ ಪ್ರಕಾರ ತಮಿಳುನಾಡಿಗೆ ಯಾವ ಸಮಯಕ್ಕೆ ಎಷ್ಟು ನೀರು ಬಿಡಬೇಕು ಎಂಬುದರ ಕುರಿತು ಕಾವೇರಿ ಮಂಡಳಿ ಗಮನಿಸುತ್ತದೆ. ಸಂಕಷ್ಟ ಸಂದರ್ಭದಲ್ಲಿ ಹೆಚ್ಚುವರಿ ನೀರನ್ನು ಹಂಚಿಕೆ ಮಾಡಿಕೊಳ್ಳುವುದರಿಂದ ಎರಡು ರಾಜ್ಯಗಳಿಗೆ ಅನುಕೂಲವಾಗುತ್ತದೆ ಎಂಬುದನ್ನು ತಮಿಳುನಾಡು ಸರ್ಕಾರ ಅರಿತುಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.

Last Updated : Jul 12, 2021, 8:47 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.