ಬೆಂಗಳೂರು: ಕಲಬುರಗಿ ಪ್ರವಾಸದಿಂದ ವಾಪಸ್ಸಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಈಶ ಫೌಂಡೇಶನ್ ಸಂಸ್ಥಾಪಕ ಸದ್ಗುರು ಹಾಗು ಕೇಂದ್ರ ಸಚಿವ ಪಿಯೂಶ್ ಗೋಯಲ್ ಆಗಮಿಸಿ ಮಾತುಕತೆ ನಡೆಸಿದರು.
ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ಅಧಿಕೃತ ನಿವಾಸ ರೇಸ್ ವ್ಯೂ ಕಾಟೇಜ್ಗೆ ಕೊಯಮತ್ತೂರಿನ ಈಶ ಫೌಂಡೇಶನ್ ಸಂಸ್ಥಾಪಕ ಸದ್ಗುರುಭೇಟಿ ನೀಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಕೆಲಕಾಲ ಮಾತುಕತೆ ನಡೆಸಿದರು. ನಮ್ಮ ನಂದಿ ಹಾಗೂ ಹಸಿರು ಬೆಂಗಳೂರು ಯೋಜನೆಯಡಿ ದೊಡ್ಡ ಪ್ರಮಾಣದಲ್ಲಿ ಸಸಿ ನೆಡುವ ಕಾರ್ಯಕ್ರಮದ ಬಗ್ಗೆ ಸಿಎಂ ಜತೆ ಮಹತ್ವದ ಸಮಾಲೋಚನೆ ನಡೆಸಿದರು.
ನಂತರ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಹಾಗೂ ಜವಳಿ ಖಾತೆ ಸಚಿವ ಪಿಯೂಶ್ ಗೋಯಲ್ ಅವರು ಸಿಎಂ ನಿವಾಸಕ್ಕೆ ಭೇಟಿ ನೀಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ರಾಜ್ಯಕ್ಕೆ ಸಂಬಂಧಿಸಿದ ಹಲವಾರು ಯೋಜನೆಗಳ ಕುರಿತು ಮಾತುಕತೆ ನಡೆಸಿದ್ದಾರೆ.
ಇದನ್ನು ಓದಿ:ಬೊಮ್ಮಾಯಿ ಉತ್ತಮ ಆಡಳಿತ ನೀಡುತ್ತಿದ್ದಾರೆ: ಬಿ.ಎಸ್.ಯಡಿಯೂರಪ್ಪ ಗುಣಗಾನ