ETV Bharat / state

10 ವರ್ಷದ ಹಿಂದೆ ಜಗತ್ತಿನ ದುರ್ಬಲ ರಾಷ್ಟ್ರ, ಇಂದು 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿದೆ ಭಾರತ: ಸಚಿವ ಜೋಶಿ - ಯುಪಿಎ ಅವಧಿ

'ವಿಕಸಿತ ಭಾರತ ಸಂಕಲ್ಪ ಯಾತ್ರೆ'ಯಡಿ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿ ನೀಡುವ 'ಆರ್‍ಸಿ ಡಿಜಿಟಲ್ ವಾಹನ'ವು ಇಂದು ಬೆಂಗಳೂರಿನ ಶಿವಾಜಿನಗರ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಿತು.

RC Digital Vehicle
ಆರ್‍ಸಿ ಡಿಜಿಟಲ್ ವಾಹನ ವೀಕ್ಷಿಸುತ್ತಿರುವ ಸಾರ್ವಜನಿಕರು
author img

By ETV Bharat Karnataka Team

Published : Dec 17, 2023, 10:00 PM IST

ಬೆಂಗಳೂರು: 10 ವರ್ಷಗಳ ಹಿಂದೆ ಭಾರತವನ್ನು ಜಗತ್ತಿನ ದುರ್ಬಲ ಆರ್ಥಿಕ ರಾಷ್ಟ್ರ ಎನ್ನಲಾಗುತ್ತಿತ್ತು. ಆದರೆ ಇಂದು ಜಗತ್ತಿನ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ದೇಶ ಹೊರಹೊಮ್ಮಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮೆಚ್ಚುಗೆ ವ್ಯಕ್ತಪಡಿಸಿದರು.

ವಿಕಸಿತ ಭಾರತ ಸಂಕಲ್ಪ ಯಾತ್ರೆಯಡಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಯೋಜನೆಗಳ ಮಾಹಿತಿಯ ಆರ್‍ಸಿ ಡಿಜಿಟಲ್ ವಾಹನ ಇಂದು ಶಿವಾಜಿನಗರ ವಿಧಾನಸಭಾ ಕ್ಷೇತ್ರದ ವಸಂತನಗರ ವಾರ್ಡ್​ಗೆ ಆಗಮಿಸಿದ ವೇಳೆ ಸಚಿವರು ಮಾತನಾಡಿದರು.

ಸಂಪದ್ಭರಿತ ರಾಷ್ಟ್ರ ಮತ್ತು ಅಗಾಧ ಮಾನವ ಸಂಪನ್ಮೂಲವಿರುವ ಭಾರತವನ್ನು ಸ್ವಾತಂತ್ರ್ಯಾ ನಂತರದ 75 ವರ್ಷಗಳ ಬಳಿಕವೂ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ ಎಂದು ಕರೆಯಲಾಗುತ್ತಿದೆ. 10 ವರ್ಷಗಳಿಂದ ಮೋದಿಯವರ ನೇತೃತ್ವದಲ್ಲಿ ಅಭಿವೃದ್ಧಿ ಹೊಂದುವತ್ತ ದೊಡ್ಡ ಹೆಜ್ಜೆ ಇಡಲಾಗಿದೆ. ವಿಕಸಿತ ಭಾರತ ಸಂಕಲ್ಪ ಯಾತ್ರೆಯಲ್ಲಿ ಎರಡು ಕಲ್ಪನೆಗಳನ್ನು ಇಟ್ಟುಕೊಂಡಿದ್ದೇವೆ. ಈಗಾಗಲೇ ನಮ್ಮ ದೇಶ ಜಗತ್ತಿನ 5ನೇ ಆರ್ಥಿಕ ಶಕ್ತಿಯಾಗಿ ಭಾರತ ಹೊರಹೊಮ್ಮಿದೆ ಎಂದರು.

10, 11 ವರ್ಷಗಳ ಹಿಂದೆ 2009-14ರ ನಡುವಿನ ಅವಧಿಯಲ್ಲಿ ನಾವು ವಿರೋಧ ಪಕ್ಷದಲ್ಲಿದ್ದೆವು. ಆಗ ಸಂಸತ್ತಿನಲ್ಲಿ ಭಾರತದ ಆರ್ಥಿಕ ಸ್ಥಿತಿಗತಿಯ ಗಂಭೀರ ಸ್ವರೂಪ, ಭಾರತದ ಬ್ಯಾಂಕ್‍ಗಳ ಎನ್‍ಪಿಎ ಪರಿಣಾಮದ ಚರ್ಚೆ ನಡೆದಿತ್ತು. ಭಾರತವು ಜಗತ್ತಿನ ದುರ್ಬಲ ಆರ್ಥಿಕ ರಾಷ್ಟ್ರ ಎಂದು ಬಿಂಬಿತವಾಗಿತ್ತು.

ಆದರೆ ಈಗ ಇಂಗ್ಲೆಂಡನ್ನೂ ನಾವು ಹಿಂದಿಕ್ಕೆ ಐದನೇ ಸ್ಥಾನ ಪಡೆದಿದ್ದೇವೆ. ಮುಂದಿನ 3 ವರ್ಷಗಳಲ್ಲಿ ಜಗತ್ತಿನ 3ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಬೇಕೆಂದು ಪ್ರಧಾನಿ ಮೋದಿ ಸಂಕಲ್ಪ ಮಾಡಿದ್ದಾರೆ. ಅಮೆರಿಕ, ಚೀನಾದ ಬಳಿಕ ನಮ್ಮ ಸ್ಥಾನ ಇರಲಿದೆ. ಮುಂದಿನ ವರ್ಷ ಈ ಹೊತ್ತಿಗೆ ನಾವು ಜಗತ್ತಿನ ನಾಲ್ಕನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲಿದ್ದೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಯುಪಿಎ ಅವಧಿಯಲ್ಲಿ ಹಣದ ಕೊರತೆ ಕುರಿತು ಸ್ವತಃ ಸಚಿವರೊಬ್ಬರು ನನ್ನಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಇವತ್ತು ಪ್ರತಿ ಸಂಪುಟ ಸಭೆಯಲ್ಲಿ ಪ್ರಧಾನಿಯವರು ವಿವಿಧ ಯೋಜನೆಗಳು, ಮಂಜೂರಾದ ಮೊತ್ತ, ಯೋಜನೆಯ ಪ್ರಗತಿ, ಸ್ಥಿತಿಗತಿ, ಖರ್ಚಾದ ಮೊತ್ತದ ಮಾಹಿತಿ ಪಡೆಯುತ್ತಾರೆ. ಹೆಚ್ಚು ಹಣ ಬೇಕಿದ್ದರೆ ಕೇಳಿ ಎನ್ನುತ್ತಾರೆ. 140 ಕೋಟಿ ಜನಸಂಖ್ಯೆ ನಮ್ಮದು. ಎಲ್ಲರ ತಲೆ ಮೇಲೊಂದು ಸೂರು (ಮನೆ) ನಮ್ಮ ಆಶಯ ಎಂದರು.

4 ಕೋಟಿ ಮನೆ ನಿರ್ಮಾಣ: 1960-2014ರವರೆಗೆ ಸುಮಾರು 54-55 ವರ್ಷಗಳಲ್ಲಿ 3.58 ಕೋಟಿ ಮನೆ ನಿರ್ಮಿಸಿದ್ದರು. ಮೋದಿಯವರ 10 ವರ್ಷ ಆಡಳಿತ ಮುಗಿಯುವ ಮೊದಲೇ 4 ಕೋಟಿ ಮನೆಗಳನ್ನು ಕಟ್ಟಿದ್ದೇವೆ. 2025-26ರಲ್ಲಿ ಮನೆ ಇಲ್ಲದ ಎಲ್ಲರಿಗೂ ಮನೆ ಕೊಡುವ ಗುರಿ ಇದೆ. ಯೋಜನೆಯ ಪ್ರಯೋಜನ ಪಡೆದವರ ಯಶೋಗಾಥೆಯನ್ನು ತಿಳಿಸಲಾಗುತ್ತಿದೆ. ಆ ಮೂಲಕ ವಿಶ್ವಾಸ ಬೆಳೆಸುವುದು, ಯೋಜನೆಯ ಪ್ರಯೋಜನ ಸಿಗದವರಿಗೆ ಅದನ್ನು ತಲುಪಿಸುವ ಉದ್ದೇಶ ಈ ವಾಹನದ್ದು ಎಂದು ಮಾಹಿತಿ ನೀಡಿದರು.

ಇದು ಮೋದಿ ಗ್ಯಾರಂಟಿ ವಾಹನ: 25 ಲಕ್ಷಕ್ಕಿಂತ ಕಡಿಮೆ ಮೊತ್ತದಲ್ಲಿ ಮನೆ ನಿರ್ಮಿಸುವ ಮಧ್ಯಮ ವರ್ಗದವರಿಗೆ ಶೇ 4 ಬಡ್ಡಿದರದಲ್ಲಿ ಸಾಲ ಸಿಗುತ್ತಿದೆ. ಎಲ್ಲರಿಗೂ ವಿವಿಧ ಯೋಜನೆಗಳ ಲಾಭ ಸಿಗಲು ಈ ವಾಹನಗಳು ದೇಶದಲ್ಲಿ ಓಡಾಡುತ್ತಿವೆ. ಇದನ್ನು ಜನರು ಮೋದಿ ಗ್ಯಾರಂಟಿ ವಾಹನ ಎನ್ನಲಾಗುತ್ತಿದೆ ಎಂದರು.

ಸಂಸದ ಪಿ.ಸಿ.ಮೋಹನ್, ಬೆಂಗಳೂರು ಕೇಂದ್ರ ಅಧ್ಯಕ್ಷ ಮಂಜುನಾಥ್, ಪ್ರಮುಖರಾದ ಎಂ.ಚಂದ್ರು, ಸಂಪತ್ ಕುಮಾರ್, ಎಂ.ಗೋಪಿ, ಗುಣಶೇಖರ್, ಮಂಡಲ ಅಧ್ಯಕ್ಷ ಬಾಲಾಜಿ ಮಣಿ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಇದನ್ನೂಓದಿ: ಸಾಮಾಜಿಕ ಮಾಧ್ಯಮದಿಂದ ದೂರವಿದ್ದಷ್ಟೂ ಮಾನಸಿಕ ಆರೋಗ್ಯ ಸುಧಾರಣೆ: ಸಂಶೋಧನಾ ವರದಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.