ETV Bharat / state

ಮೂವರು ಹಾಲಿ ನ್ಯಾಯಮೂರ್ತಿಗಳ ಸೇವೆ ಖಾಯಂಗೊಳಿಸಿದ ಕೇಂದ್ರ ಸರ್ಕಾರ - ಈಟಿವಿ ಭಾರತ ಕನ್ನಡ

ಮೂವರು ಹಾಲಿ ಹೆಚ್ಚುವರಿ ನ್ಯಾಯಮೂರ್ತಿಗಳ ಸೇವೆಯನ್ನು ಖಾಯಂಗೊಳಿಸಿ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ ಆದೇಶ ಹೊರಡಿಸಿದೆ.

KN_BNG
high court
author img

By

Published : Sep 24, 2022, 7:03 AM IST

ಬೆಂಗಳೂರು: ಹೈಕೋರ್ಟ್‌ನಲ್ಲಿ ಹಾಲಿ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸುತ್ತಿರುವ ಎಂ.ಜಿ.ಎಸ್. ಕಮಲ್, ರಾಜೇಂದ್ರ ಬಾದಾಮಿಕರ್ ಮತ್ತು ಖಾಜಿ ಜೈಬುನ್ನೀಸಾ ಮೊಹಿದ್ದೀನ್ ಅವರ ಸೇವೆಯನ್ನು ಖಾಯಂಗೊಳಿಸಲಾಗಿದೆ.

ಮುಖ್ಯನ್ಯಾಯಮೂರ್ತಿ ಯು.ಯು. ಲಲಿತ್ ಅಧ್ಯಕ್ಷತೆಯಲ್ಲಿ ಸೆ.7ರಂದು ಸುಪ್ರೀಂಕೋರ್ಟ್‌ನ ಕೊಲಿಜಿಯಂ ನಡೆಸಿದ ಸಭೆಯಲ್ಲಿ ಈ ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳ ಸೇವೆ ಖಾಯಂಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿತ್ತು. ಅದರಂತೆ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ ಮೂವರು ನ್ಯಾಯಮೂರ್ತಿಗಳ ಸೇವೆ ಖಾಯಂಗೊಳಿಸಿ ಆದೇಶ ಹೊರಡಿಸಿದೆ.

ನ್ಯಾಯಮೂರ್ತಿ ಎಂ.ಜೆ.ಎಸ್. ಕಮಲ್ 2021 ಮಾ.17, ನ್ಯಾಯಮೂರ್ತಿಗಳಾದ ರಾಜೇಂದ್ರ ಬಾದಾಮಿಕರ್ ಮತ್ತು ಖಾಜಿ ಜೈಬುನ್ನೀಸಾ ಮೊಹಿದ್ದೀನ್ 2021ರ ಮಾ.25ರಂದು ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದರು. ಜಿಲ್ಲಾ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ ನಂತರ ಮೂವರಿಗೆ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಭಡ್ತಿ ನೀಡಲಾಗಿತ್ತು.

ಇದನ್ನೂ ಓದಿ: ಬ್ರಿಟಿಷರ ಕಾಲದ ಪದ್ದತಿಗಳ ಬದಲಾವಣೆ, ಕಂದಾಯ ಇಲಾಖೆ ಸೇವೆ ಸರಳೀಕರಣ: ಅಶೋಕ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.