ETV Bharat / state

ನಾಳೆಯಿಂದ ಕೇಂದ್ರ ತಂಡದಿಂದ ಬರ ಪರಿಸ್ಥಿತಿ ಅಧ್ಯಯನ, ವಿವಿಧ ಜಿಲ್ಲೆಗಳಲ್ಲಿ ಪ್ರವಾಸ - ರಾಜ್ಯ ಪೃಕೃತಿ ವಿಕೋಪ ನಿರ್ವಹಣಾ ಕೇಂದ್ರ

ಬರ ಪರಿಸ್ಥಿತಿ ಅಧ್ಯಯನಕ್ಕೆ ಕೇಂದ್ರ ಸರ್ಕಾರ, ಕರ್ನಾಟಕಕ್ಕೆ ತಜ್ಞರ ತಂಡಗಳನ್ನು ಕಳುಹಿಸುತ್ತಿದ್ದು, ನಾಳೆಯಿಂದ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಲಿದೆ.

Agriculture Minister N Chaluvaraya swamy briefed the media.
ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಮಾಧ್ಯಮದವರಿಗೆ ಮಾಹಿತಿ ನೀಡಿದರು.
author img

By ETV Bharat Karnataka Team

Published : Oct 4, 2023, 6:38 PM IST

ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಕೇಂದ್ರದ ಮೂರು ತಂಡಗಳು ರಾಜ್ಯಕ್ಕೆ ಆಗಮಿಸುತ್ತಿದ್ದು, ಅಕ್ಟೋಬರ್ 5ರಿಂದ ನಾಲ್ಕು ದಿನಗಳ ಕಾಲ ರಾಜ್ಯದ ವಿವಿಧೆಡೆ ಜಿಲ್ಲಾ ಪ್ರವಾಸ ಕೈಗೊಂಡು ಪರಿಶೀಲನೆ ನಡೆಸಲಿವೆ. ಕೇಂದ್ರ ತಂಡ ಹತ್ತು ಸದಸ್ಯರನ್ನೊಳಗೊಂಡಿದ್ದು, ರಾಜ್ಯದ ಸ್ಥಳೀಯ ಅಧಿಕಾರಿಗಳೊಂದಿಗೆ ಕೃಷಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ಟೋಬರ್ 5ರಂದು ಮೂರು ತಂಡಗಳು ಬೆಳಗ್ಗೆ 9:30 ರಿಂದ 10:30ರ ಗಂಟೆವರೆಗೆ ಕರ್ನಾಟಕ ರಾಜ್ಯ ಪೃಕೃತಿ ವಿಕೋಪ ನಿರ್ವಹಣಾ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಲಿವೆ. ಮಧ್ಯಾಹ್ನ 12:00 ಗಂಟೆಗೆ ವಿಧಾನಸೌಧ ಕೊಠಡಿಯಲ್ಲಿ ಬರ ಪರಿಸ್ಥಿತಿಯ ಸಂಕ್ಷಿಪ್ತ ವಿವರ ಪಡೆದು ಜಿಲ್ಲೆಗಳಿಗೆ ತೆರಳಲಿವೆ ಎಂದು ಹೇಳಿದರು.

ಮೊದಲ‌ ತಂಡ: ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ನೇತೃತ್ವದಲ್ಲಿ ಎಣ್ಣೆ ಬೀಜಗಳ ಅಭಿವೃದ್ದಿ ಇಲಾಖೆ ನಿರ್ದೇಶಕ ಡಾ.ಜೆ.ಪೊನ್ನುಸ್ವಾಮಿ, ವೆಚ್ಚ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕ ಮಹೇಂದ್ರ ಚಂಡೇಲಿಯ, ನೀತಿ ಆಯೋಗದ ಸಂಶೋಧನಾಧಿಕಾರಿ ಶಿವಚರಣ್ ಮೀನಾ, ರಾಜ್ಯ ಕೃಷಿ ಆಯುಕ್ತ ಎಸ್.ಪಾಟೀಲ್ ಇದ್ದಾರೆ.

ಎರಡನೇ ತಂಡ: ಕೇಂದ್ರ ಕುಡಿಯುವ ನೀರು ಹಾಗೂ ಸ್ವಚ್ಛತಾ ಸಚಿವಾಲಯದ ಹೆಚ್ಚುವರಿ ಸಲಹೆಗಾರ ಡಿ. ರಾಜಶೇಖರ್ ನೇತೃತ್ವದಲ್ಲಿ, ಪಶುಸಂಗೋಪನೆ ಇಲಾಖೆ ‌ನಿರ್ದೇಶಕ ಆರ್.ಥಾಕರೆ, ಗ್ರಾಮೀಣಾಭಿವೃದ್ಧಿ ಇಲಾಖೆಯ ಸಹಾಯಕ ಆಯುಕ್ತ ಮೋತಿರಾಂ, ರಾಜ್ಯದ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರದ ನಿರ್ದೇಶಕ ಕರೀಗೌಡ ಇದ್ದಾರೆ.

ಮೂರನೇ ತಂಡ: ಕೇಂದ್ರ ಜಲ ಆಯೋಗದ ನಿರ್ದೇಶಕ ಅಶೋಕ್ ಕುಮಾರ್​.ವಿ ನೇತೃತ್ವದಲ್ಲಿ ಎಂ.ಎನ್.ಸಿ.ಎಫ್.ಸಿ ಉಪ‌ ನಿರ್ದೇಶಕ ಕರಣ್ ಚೌಧರಿ, ಆಹಾರ ಮತ್ತು ನಾಗರೀಕ‌ ಸರಬರಾಜು ಇಲಾಖೆ ಉಪಕಾರ್ಯದರ್ಶಿ ಸಂಗೀತ್ ಕುಮಾರ್ ಹಾಗೂ ರಾಜ್ಯದ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರದ ಹಿರಿಯ ಸಲಹೆಗಾರ ಡಾ.ಶ್ರೀನಿವಾಸ ರೆಡ್ಡಿ ಇರಲಿದ್ದಾರೆ.

ತಂಡಗಳ ಪ್ರವಾಸದ ವಿವರ- ಮೊದಲ ತಂಡ: ಅಕ್ಟೋಬರ್ 5 ರಂದು ಬೆಳಗಾವಿಗೆ ಆಗಮನ. ಅಕ್ಟೋಬರ್ 6 ರಂದು ಬೆಳಗಾವಿ ಹಾಗೂ ವಿಜಾಪುರ ಜಿಲ್ಲೆಗಳಲ್ಲಿ ಬರ ಪರಿಶೀಲನೆ. ಅಕ್ಟೋಬರ್ 7 ರಂದು ಬಾಗಲಕೋಟೆ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಬರ ಪರಿಶೀಲನೆ. ಅಕ್ಟೋಬರ್ 8 ರಂದು ಬೆಂಗಳೂರು ಪ್ರಯಾಣ.

ಎರಡನೇ ತಂಡ: ಗದಗ್ ಕೊಪ್ಪಳ, ಬಳ್ಳಾರಿ ವಿಜಯನಗರ ಜಿಲ್ಲಾ ಪ್ರವಾಸ ಬರ ಅಧ್ಯಯನ. ಅಕ್ಟೋಬರ್ 5ರಂದು ಬೆಂಗಳೂರಿನಿಂದ ಹುಬ್ಬಳಿಗೆ ಪ್ರಯಾಣ ವಾಸ್ತವ್ಯ. ಅಕ್ಟೋಬರ್ 6 ರಂದು ಗದಗ ಹಾಗೂ ಕೊಪ್ಪಳ ‌ಜಿಲ್ಲೆಗಳ ಬರ ಪರಿಸ್ಥಿತಿ ಅಧ್ಯಯನ. ಅಕ್ಟೋಬರ್ 7ರಂದು ವಿಜಯನಗರ, ಬಳ್ಳಾರಿ ಜಿಲ್ಲೆಗಳ ಬರ ಅಧ್ಯಯನ. ಅಕ್ಟೋಬರ್ 8 ರಂದು ಬೆಂಗಳೂರಿಗೆ ಪ್ರಯಾಣ.

ಮೂರನೇ ತಂಡ: ಅಕ್ಟೋಬರ್ 6 ರಂದು ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಪ್ರವಾಸ ನಡೆಸಿ ಚಿತ್ರದುರ್ಗ ವಾಸ್ತವ್ಯ. ಅಕ್ಟೋಬರ್ 7ರಂದು ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆ ಪ್ರವಾಸ ನಡೆಸಿ ಬೆಂಗಳೂರು ಆಗಮನ. ಅಕ್ಟೋಬರ್ 8 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬರ ಪರಿಸ್ಥಿತಿ ಅಧ್ಯಯನ.

ಮೂರು ತಂಡಗಳು ಅಕ್ಟೋಬರ್ 8ರಂದು ಬೆಂಗಳೂರು ಆಗಮಿಸಿ ಅಕ್ಟೋಬರ್ 9ರಂದು ಬೆಂಗಳೂರಿನಲ್ಲಿ ಮತ್ತೊಮ್ಮೆ ಸ್ಥಳೀಯ ಅಧಿಕಾರಿಗಳಿಂದ ಸಂಕ್ಷಿಪ್ತ ವಿವರಣೆ ಪಡೆದು ದೆಹಲಿಗೆ ತೆರಳಲಿದೆ.

ಅಧಿಕಾರಿಗಳಿಗೆ ಕೃಷಿ ಸಚಿವರ ಸೂಚನೆ: ಕೇಂದ್ರ ತಂಡ ಜಿಲ್ಲೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಈ ಸಾಲಿನ ಮಳೆಯ ವಾಸ್ತವ ಪರಿಸ್ಥಿತಿ ಮನವರಿಕೆ ಮಾಡಿಕೊಡಬೇಕು. ಹಲವು ಕಡೆ ಸಂಪೂರ್ಣ ಬೆಳೆ ಹಾನಿಯಾಗಿದ್ದು ಕೆಲವೆಡೆ ಬೆಳೆ ಇದ್ದರೂ ಉಂಟಾಗಲಿರುವ ತೀವ್ರ ಇಳುವರಿ ಕುಸಿತದ ಬಗ್ಗೆ ಪರಿಣಾಮಕಾರಿಯಾಗಿ ವಿವರಿಸಿ ಅರ್ಥ ಮಾಡಿಕೊಡಬೇಕು ಎಂದು ಕೃಷಿ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂಓದಿ: ಮೈಸೂರಲ್ಲಿ ಮಹಿಷ ದಸರಾ ಆಚರಣೆಗೆ ಸಂಸದ ಪ್ರತಾಪ್ ಸಿಂಹ ಆಕ್ಷೇಪ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.