ನವದೆಹಲಿ: ಮೂರು ದಿನಗಳ ಒಳಗಾಗಿ ಅಗತ್ಯ ಆಕ್ಸಿಜನ್ ಪೂರೈಸಿ ಎಂಬ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಕೇಂದ್ರ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ.
ಈ ಸಂಬಂಧ ಅದು ಸುಪ್ರೀಂಕೋರ್ಟ್ ಕದ ತಟ್ಟಿದೆ. ಕೋವಿಡ್-19 ರೋಗಿಗಳಿಗಾಗಿ ಪ್ರಸ್ತುತ ನೀಡುತ್ತಿರುವ ಮೆಡಿಕಲ್ ಆಮ್ಲಜನಕ ಪ್ರಮಾಣವನ್ನು 965 ಮೆಟ್ರಿಕ್ ಟನ್ ನಿಂದ 1200 ಮೆಟ್ರಿಕ್ ಟನ್ ಗಳಿಗೆ ಹೆಚ್ಚಿಸಬೇಕೆಂದು ಕರ್ನಾಟಕ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ತಾಕೀತು ಮಾಡಿತ್ತು. ಈ ಆದೇಶದ ವಿರುದ್ಧ ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.
ಪ್ರಸ್ತುತ ಕರ್ನಾಟಕಕ್ಕೆ 965 ಮೆಟ್ರಿಕ್ ಟನ್ ದ್ರವೀಕೃತ ವೈದ್ಯಕೀಯ ಆಮ್ಲಜನಕವನ್ನು ಪೂರೈಸಲಾಗುತ್ತಿದೆ. ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶವನ್ನು ತುರ್ತಾಗಿ ತಡೆಹಿಡಿಯುವ ಅಗತ್ಯವಿದೆ ಎಂದು ಸಾಲಿಸಿಟಿರ್ ಜನರಲ್ ತುಷಾರ್ ಮೆಹ್ತಾ, ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠಕ್ಕೆ ಮನವಿ ಸಲ್ಲಿಸಿದ್ದಾರೆ.
ಇದನ್ನೂ ಓದಿ: ರಾಜ್ಯಕ್ಕೆ 3 ದಿನಗಳಲ್ಲಿ ಕೋವಿಡ್ ಲಸಿಕೆ ಪೂರೈಸಿ.. ಕೇಂದ್ರಕ್ಕೆ ಹೈಕೋರ್ಟ್ ತಾಕೀತು
ಮೆಹ್ತಾ ಅವರ ಅರ್ಜಿಯನ್ನು ಮಾನ್ಯ ಮಾಡಿರುವ ಪೀಠ ಯಾವುದೇ ಆದೇಶ ನೀಡುವುದರ ಮುನ್ನ ಕೋರ್ಟ್ ಎಲ್ಲ ವಿಚಾರಗಳನ್ನ ಕೂಲಂಕಷವಾಗಿ ಪರಿಶೀಲನೆ ಮಾಡಬೇಕಾಗುತ್ತದೆ ಎಂದು ಪೀಠ ಹೇಳಿದೆ.