ETV Bharat / state

ಸಿಇಟಿ 2023ರ ದಿನಾಂಕ ಪ್ರಕಟ: ಯಾವತ್ತು ಯಾವ ಪರೀಕ್ಷೆ?! - informative news

ಮೇ 20 ಮತ್ತು 21ರಂದು ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ - ಮಾರ್ಚ್​ 2ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭ - ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್​ 5.

cet-2023-date-announced-by-karnataka-examination-authority
ಸಿಇಟಿ 2023ರ ದಿನಾಂಕ ಪ್ರಕಟ: ಯಾವತ್ತು ಯಾವ ಪರೀಕ್ಷೆ?!
author img

By

Published : Mar 1, 2023, 7:47 PM IST

ಬೆಂಗಳೂರು: ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯು ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆ ದಿನಾಂಕ ಪ್ರಕಟಿಸಿದೆ. ಸರ್ಕಾರದ ನಿರ್ದೇಶನದಂತೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ 2023ನ್ನು ಮೇ 20 ಮತ್ತು 21ರಂದು ಹಾಗೂ ಕನ್ನಡ ಭಾಷಾ ಪರೀಕ್ಷೆಯನ್ನು ಮೇ 22 ರಂದು ನಡೆಸಲಿದೆ.

ಸಿಇಟಿ-2023ಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್​ 2ರಂದು ಬೆಳಗ್ಗೆ 11 ರಿಂದ ಅವಕಾಶ ಕಲ್ಪಿಸಲಾಗುವುದು. ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್​ 5 ಮತ್ತು ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ ಅದೇ ತಿಂಗಳ 7 ಕಡೆಯ ದಿನವಾಗಿದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸಿಇಟಿ 2023ರ ದಿನಾಂಕ ಪ್ರಕಟ
ಸಿಇಟಿ 2023ರ ದಿನಾಂಕ ಪ್ರಕಟ

ಆನ್‌ಲೈನ್ ಅರ್ಜಿಯಲ್ಲಿ ಅಭ್ಯರ್ಥಿಯು ನಮೂದಿಸುವ ಜಾತಿ/ಆದಾಯ ಪ್ರಮಾಣ ಪತ್ರದ ಆರ್‌ಡಿ ಸಂಖ್ಯೆಯನ್ನು ಮತ್ತು 371(ಜೆ) ಆರ್‌ಡಿ ಸಂಖ್ಯೆಯನ್ನು ಆಧರಿಸಿ ಅಭ್ಯರ್ಥಿಯ ಜಾತಿ, ಆದಾಯ ಮತ್ತು 371(ಜೆ)ಗೆ ಸಂಬಂಧಿಸಿದ ಮಾಹಿತಿಯನ್ನು ವೆಬ್‌ಸೇವೆಯ ಮೂಲಕ ಪರಿಶೀಲಿಸಲಾಗುವುದು. ಅಭ್ಯರ್ಥಿಗಳು ಎಚ್ಚರದಿಂದ ಸರಿಯಾದ ಆರ್‌ಡಿ ಸಂಖ್ಯೆಯನ್ನು ಆನ್‌ಲೈನ್ ಅರ್ಜಿಯಲ್ಲಿ ದಾಖಲಿಸಲು ಸೂಚಿಸಿದೆ. ಒಂದು ವೇಳೆ ಅಭ್ಯರ್ಥಿಯು ದಾಖಲಿಸುವ ಆರ್‌ಡಿ ಸಂಖ್ಯೆ ತಾಳೆಯಾಗದಿದ್ದಲ್ಲಿ, ಜೂನ್ 2023ರ ಮಾಹೆಯಲ್ಲಿ ಪ್ರಾಧಿಕಾರವು ನೀಡುವ ವೇಳಾಪಟ್ಟಿಯಂತೆ ಖುದ್ದಾಗಿ ಪರಿಶೀಲನೆಗೆ ಹಾಜರಾಗಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಯ ಹೆಸರು, ತಂದೆಯ ಹೆಸರು, ತಾಯಿಯ ಹೆಸರು ಮತ್ತು ಜನ್ಮ ದಿನಾಂಕವನ್ನು ಕರ್ನಾಟಕ ಎಸ್​ಎಸ್​ಎಲ್​ಸಿ ಮಂಡಳಿಯಿಂದ ನೊಂದಣಿ ಸಂಖ್ಯೆಯನ್ನು ಆಧರಿಸಿ ಎಸ್​ಎಟಿಎಸ್ ಮೂಲಕ ಪಡೆಯಲಾಗುತ್ತದೆ. ಕರ್ನಾಟಕದಲ್ಲಿ ಎಸ್​ಎಸ್​ಎಲ್​ಸಿ ಮಂಡಳಿಯಿಂದ ತೇರ್ಗಡೆಯಾದ ಅಭ್ಯರ್ಥಿಗಳು ಎಸ್​ಎಸ್​ಎಲ್​ಸಿ ರಿಜಿಸ್ಟರ್ ನಂಬರ್ ಅನ್ನು ದಾಖಲಿಸಲು ಸೂಚಿಸಿದೆ. ಆನ್‌ಲೈನ್ ಅಪ್ಲಿಕೇಶನ್ ಟ್ರ್ಯಾಕಿಂಗ್ ವ್ಯವಸ್ಥೆಯನ್ನು ಕಲ್ಪಿಸಲಾಗಿರುತ್ತದೆ. ಅಭ್ಯರ್ಥಿಗಳು ತಮ್ಮ ಆನ್‌ಲೈನ್ ಅರ್ಜಿಯ ಸ್ಥಿತಿಯನ್ನು ಟ್ರ್ಯಾಕಿಂಗ್ ಮಾಡಬಹುದಾಗಿದೆ.

ಅಭ್ಯರ್ಥಿಗಳು ಆನ್‌ಲೈನ್ ಅರ್ಜಿಯನ್ನು ಭರ್ತಿ ಮಾಡುವ ಬಗ್ಗೆ ಸಂದೇಹಗಳಿದ್ದಲ್ಲಿ, ಪ್ರಾಧಿಕಾರದ ಇಮೇಲ್ keaugcet2023@gmail.comಗೆ ಮೇಲ್ ಮಾಡುವ ಮೂಲಕ ಸಂದೇಹಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ. ಆನ್‌ಲೈನ್ ಅರ್ಜಿಗಳನ್ನು ಗೂಗಲ್ ಕ್ರೋಮ್, ಮೈಕ್ರೋಸಾಫ್ಟ್ ಎಡ್ಜ್, ಫೈರ್ಫಾಕ್ಸ್​ಗಳ ವರ್ಷನ್ 110 ಅಥವಾ ಇನ್ನೂ ಹೆಚ್ಚಿನ ವರ್ಷನ್‌ಗಳ ಮೂಲಕ ಉತ್ತಮವಾಗಿ ವೀಕ್ಷಿಸಬಹುದಾಗಿದೆ.

ಮೊಬೈಲ್ ಮೂಲಕ ಆನ್‌ಲೈನ್ ಅರ್ಜಿಗಳನ್ನು ಭರ್ತಿ ಮಾಡಬಹುದು ಆದರೆ ಪರದೆಯ ಮೇಲೆ ಸ್ಪಷ್ಟವಾಗಿ ಎಲ್ಲಾ ವಿವರಗಳನ್ನು ನೋಡುವುದಕ್ಕಾಗಿ ಡೆಸ್ಕ್​ಟಾಪ್​ ಗಳನ್ನು ಉಪಯೋಗಿಸಲು ಸಲಹೆ ನೀಡಲಾಗಿದೆ. ಸಿಇಟಿ-2023ರ ಪ್ರಶ್ನೆ ಪತ್ರಿಕೆಗಳು ಕರ್ನಾಟಕ ರಾಜ್ಯದ ಪದವಿ ಪೂರ್ವ ಶಿಕ್ಷಣ ಇಲಾಖೆ, ಬೆಂಗಳೂರು ಇವರು ನಿರ್ಧರಿಸುವ ಮೊದಲನೇ ಮತ್ತು ಎರಡನೇ ಪಿಯುಸಿ ಪಠ್ಯಕ್ರಮವನ್ನು ಅವಲಂಬಿಸಿರುತ್ತದೆ.

ಸಾಮಾನ್ಯ ಪ್ರವೇಶ ಪರೀಕ್ಷೆ 2023ರ ವೇಳಾಪಟ್ಟಿ

ದಿನಾಂಕ ಮೇ 20ರಂದು ಬೆಳಿಗ್ಗೆ 10.30 ರಿಂದ 11.50 ರವರೆಗೆ ಜೀವಶಾಸ್ತ್ರ ಪರೀಕ್ಷೆ 60 ಅಂಕಕ್ಕೆ ನಡೆಯಲಿದೆ.

ಅಂದು ಮಧ್ಯಾಹ್ನ 2.30 ರಿಂದ 3.50 ರವರೆಗೆ ಗಣಿತಶಾಸ್ತ್ರ ಪರೀಕ್ಷೆ 60 ಅಂಕಕ್ಕೆ ನಡೆಯಲಿದೆ.

ದಿನಾಂಕ ಮೇ 21ರಂದು ಬೆಳಿಗ್ಗೆ 10.30ರಿಂದ 11.50 ರವರೆಗೆ ಭೌತಶಾಸ್ತ್ರ ಪರೀಕ್ಷೆ 60 ಅಂಕಕ್ಕೆ ನಡೆಯಲಿದೆ.

ಅಂದು ಮಧ್ಯಾಹ್ನ ಮಧ್ಯಾಹ್ನ 2.30 ರಿಂದ 3.50 ರವರೆಗೆ ರಸಾಯನಶಾಸ್ತ್ರ ಪರೀಕ್ಷೆ 60 ಅಂಕಕ್ಕೆ ನಡೆಯಲಿದೆ.

ಕನ್ನಡ ಭಾಷಾ ಪರೀಕ್ಷೆ : ಬೆಂಗಳೂರು, ಬೀದರ, ಬೆಳಗಾವಿ, ಬಳ್ಳಾರಿ, ವಿಜಯಪುರ, ಮಂಗಳೂರು ಜಿಲ್ಲಾ ಕೇಂದ್ರಗಳಲ್ಲಿ ಮಾತ್ರ ನಡೆಯಲಿದೆ. ಮೇ 22 ರಂದು ಬೆಳಿಗ್ಗೆ 11.30 ರಿಂದ 12.30 ರವರೆಗೆ ಹೊರನಾಡು ಮತ್ತು ಗಡಿನಾಡು ಕನ್ನಡ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ.

ಇದನ್ನೂ ಓದಿ: 3 ವರ್ಷಗಳಲ್ಲಿ 4,120 ಪ್ರಕರಣ ಇತ್ಯರ್ಥಗೊಳಿಸಿದ ಮಹಿಳಾ ಆಯೋಗ: ಪ್ರಮೀಳಾ ನಾಯ್ಡು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.