ETV Bharat / state

ಸಿಇಟಿ ಪರೀಕ್ಷೆ ಫಲಿತಾಂಶ ದಿನಾಂಕ ದಿಢೀರ್​ ಬದಲಾವಣೆ... ರಿಸಲ್ಟ್​ ಯಾವಾಗ ಗೊತ್ತಾ? - CET exam result-2020

ತಾಂತ್ರಿಕ ದೋಷದಿಂದಾಗಿ ಸಿಇಟಿ ಪರೀಕ್ಷಾ ಫಲಿತಾಂಶ ದಿನಾಂಕ ಬದಲಾಗಿದ್ದು, ಇದೇ ಶುಕ್ರವಾರದಂದು ಸಿಇಟಿ ರಿಸಲ್ಟ್​ ಪ್ರಕಟಗೊಳ್ಳಲಿದೆ ಎಂದು ಡಿಸಿಎಂ ತಿಳಿಸಿದ್ದಾರೆ.

CET exam result date change, CET exam result date change for technical issue, CET exam result date change news, CET exam result, CET exam result 2020, CET exam result 2020 news, ಸಿಇಟಿ ಪರೀಕ್ಷೆ ಫಲಿತಾಂಶ ದಿನಾಂಕ ಬದಲಾವಣೆ, ಸಿಇಟಿ ಪರೀಕ್ಷೆ ಫಲಿತಾಂಶ ದಿನಾಂಕ ಬದಲಾವಣೆ ಸುದ್ದಿ, ಸಿಇಟಿ ಪರೀಕ್ಷೆ ಫಲಿತಾಂಶ, ಸಿಇಟಿ ಪರೀಕ್ಷೆ ಫಲಿತಾಂಶ 2020, ಸಿಇಟಿ ಪರೀಕ್ಷೆ ಫಲಿತಾಂಶ 2020 ಸುದ್ದಿ,
ಸಂಗ್ರಹ ಚಿತ್ರ
author img

By

Published : Aug 19, 2020, 7:24 PM IST

ಬೆಂಗಳೂರು: ತಾಂತ್ರಿಕ ಕಾರಣಗಳಿಂದಾಗಿ‌ ಗುರುವಾರ ಪ್ರಕಟವಾಗಬೇಕಾಗಿದ್ದ ಸಿಇಟಿ ಪರೀಕ್ಷೆಯ ಫಲಿತಾಂಶವನ್ನು ಶುಕ್ರವಾರ (ಆಗಸ್ಟ್ 21) ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ದಲ್ಲಿ ಮಧ್ಯಾಹ್ನ 12.30ಕ್ಕೆ ಸಿಇಟಿ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ. ಈ ಕೆಳಗಿನ‌ ಲಿಂಕ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ. http://karresults.nic.in

ಕೋವಿಡ್‌ ಕಾರಣದಿಂದಾಗಿ ಎದುರಾಗಿದ್ದ ಸಂಕಷ್ಟದ ಸಂದರ್ಭದಲ್ಲಿಯೂ ಸಿಇಟಿ ಪರೀಕ್ಷೆ ಯಶಸ್ವಿಯಾಗಿ ನಡೆದಿತ್ತು. ನಿಗದಿಯಂತೆ ನಾಳೆ ಪ್ರಕಟವಾಗಬೇಕಿದ್ದ ಫಲಿತಾಂಶವನ್ನ ಶುಕ್ರವಾರ ಪ್ರಕಟವಾಗಲಿದೆ. ಈ ಬಾರಿ ಒಟ್ಟು 1,94,419 ವಿದ್ಯಾರ್ಥಿಗಳು ಸಿಇಟಿಗೆ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 1,75,428 ಮಂದಿ ಪರೀಕ್ಷೆ ತೆಗೆದುಕೊಂಡಿದ್ದು, ಈ ಸಲ ಸಿಇಟಿ ನಡೆಯುವ ವೇಳೆಗೆ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಕೂಡ ಬಂದಿತ್ತು. ಈ ಕಾರಣಕ್ಕೆ ಅರ್ಹರಾಗಿಲ್ಲದ ಕೆಲವರು ಸಿಇಟಿಯಿಂದ ಹಿಂದೆ ಸರಿದರು.

ಜುಲೈ 30-31 ಮತ್ತು ಆಗಸ್ಟ್‌ 1ರಂದು ಸಿಇಟಿ ಪರೀಕ್ಷೆ ನಡೆದಿತ್ತು. ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಪರೀಕ್ಷೆ ನಡೆದ ಕೇವಲ 20 ದಿನಗಳಲ್ಲಿ ಸಿಇಟಿ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.