ETV Bharat / state

ಸಿಇಟಿ ಪರೀಕ್ಷೆ: ಸುರಕ್ಷತೆ ವಿಚಾರದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ದೊಡ್ಡ ಎಡವಟ್ಟು - Karnataka Testing Authority

ಸಿಇಟಿ ಪರೀಕ್ಷೆ ವೇಳೆ ಪ್ರತಿ ಕೊಠಡಿಯಲ್ಲಿ 24 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಸಿಇಟಿ ಪರೀಕ್ಷೆ ನಡೆಯುವ ಎಲ್ಲಾ ಕೇಂದ್ರಗಳ ಪ್ರತಿ ಕೊಠಡಿಯಲ್ಲಿಯೂ 24 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ರೀತಿ ವ್ಯವಸ್ಥೆ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸುತ್ತೋಲೆ ಹೊರಡಿಸಿದೆ. ಇದು ಸಾಕಷ್ಟು ಆತಂಕಕ್ಕೆ ಎಡೆಮಾಡಿಕೊಟ್ಟಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
author img

By

Published : Jul 29, 2020, 11:43 PM IST

ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಹಾಗೂ ಎಸ್​ಎಸ್​ಎಲ್​ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿರುವ ಬೆನ್ನಲ್ಲೇ ಸಿಇಟಿ ಪರೀಕ್ಷೆಗೆ ಕ್ಷಣಗಣನೆ ಆರಂಭಗೊಂಡಿದ್ದು, ವಿದ್ಯಾರ್ಥಿಗಳ ಸುರಕ್ಷತೆ ವಿಚಾರದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ದೊಡ್ಡ ಪ್ರಮಾದ ಎಸಗಿದೆ.

ಕೋವಿಡ್ -19 ಮಾರ್ಗಸೂಚಿ ರಾಜ್ಯದಲ್ಲಿ ಜಾರಿಯಲ್ಲಿದೆ. ಮಾಸ್ಕ್, ಸ್ಯಾನಿಟೈಸರ್ ಜೊತೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ. ಹಾಗಾಗಿಯೇ ದ್ವಿತೀಯ ಪಿಯುಸಿಯ ಬಾಕಿ ಉಳಿದಿದ್ದ, ಇಂಗ್ಲೀಷ್ ಪತ್ರಿಕೆ ಹಾಗು ಎಸ್ಎಸ್ಎಲ್‌ಸಿ ಪರೀಕ್ಷೆ ವೇಳೆ ಈ ನಿಯಮವನ್ನು ಬಹಳ ಎಚ್ಚರಿಕೆಯಿಂದ ಮಾಡಲಾಗಿತ್ತು. ಮಾಸ್ಕ್ ಇಲ್ಲದವರಿಗೆ ಮಾಸ್ಕ್ ನೀಡುವುದು, ಸ್ಯಾನಿಟೈಸರ್ ಕೊಡುವ ಜೊತೆಗೆ ಪ್ರತಿ ಕೊಠಡಿಯಲ್ಲಿ 15-20 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಸಾಮಾಜಿಕ ಅಂತರ ಪಾಲನೆ ಹಾಗು ವಿದ್ಯಾರ್ಥಿಗಳ ಸುರಕ್ಷತೆ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿತ್ತು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸುತ್ತೋಲೆ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸುತ್ತೋಲೆ

ಆದರೆ ಈಗ ಸಿಇಟಿ ಪರೀಕ್ಷೆ ವೇಳೆ ಪ್ರತಿ ಕೊಠಡಿಯಲ್ಲಿ 24 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಸಿಇಟಿ ಪರೀಕ್ಷೆ ನಡೆಯುವ ಎಲ್ಲಾ ಕೇಂದ್ರಗಳ ಪ್ರತಿ ಕೊಠಡಿಯಲ್ಲಿಯೂ 24 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ರೀತಿ ವ್ಯವಸ್ಥೆ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸುತ್ತೋಲೆ ಹೊರಡಿಸಿದೆ. ಇದು ಸಾಕಷ್ಟು ಆತಂಕಕ್ಕೆ ಎಡೆಮಾಡಿಕೊಟ್ಟಿದೆ.

ಕೊರೊನಾ ಸಮಸ್ಯೆ ಇಲ್ಲದ ಕಳೆದ ವರ್ಷ ಪ್ರತಿ ಕೊಠಡಿಯಲ್ಲಿ 16 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿತ್ತು. ಆದರೆ ಈಗ ಕೊರೊನಾ ಆತಂಕದ ಸನ್ನಿವೇಶದಲ್ಲಿ ಸಂಖ್ಯೆಯನ್ನು ಹೆಚ್ಚು ಮಾಡಿರುವುದು ಸಿಬ್ಬಂದಿ ಹಾಗು ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿಸಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸುತ್ತೋಲೆ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸುತ್ತೋಲೆ

ಪಿಯುಸಿ ಪರೀಕ್ಷೆಯನ್ನು ಸಾಮಾಜಿಕ ಅಂತರದ ವ್ಯವಸ್ಥೆಯಲ್ಲಿ ನಿರಾತಂಕವಾಗಿ ಬರೆದಿದ್ದ ವಿದ್ಯಾರ್ಥಿಗಳು ಈಗ ಒಂದೇ ಕೊಠಡಿಯಲ್ಲಿ ಹೆಚ್ಚು ವಿದ್ಯಾರ್ಥಿಗಳು ಕುಳಿತುಕೊಂಡು ಪರೀಕ್ಷೆ ಬರೆಯಬೇಕಿದೆ. ಯಾರಿಗಾದರೂ ಸೋಂಕು ಇದ್ದರೆ ಅದು ಕೊಠಡಿಯಲ್ಲಿ ಬೇಗ ಹರಡಲಿದೆ ಎನ್ನುವ ಆತಂಕದ ಜೊತೆ ಪರೀಕ್ಷೆ ಬರೆಯುವುದು ಹೇಗೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.

ಇನ್ನು ಪರೀಕ್ಷಾ ಕಾರ್ಯಕ್ಕೆ ನಿಯುಕ್ತಿಗೊಂಡ ಸಿಬ್ಬಂದಿಗೂ ಇದೀಗ‌ ಕೊರೊನಾ ಆತಂಕ ಕಾಡತೊಡಗಿದೆ. ಕಡಿಮೆ ವಿದ್ಯಾರ್ಥಿಗಳಿದ್ದಲ್ಲಿ ಅಂತರ ಹೆಚ್ಚಿರಲಿದೆ, ಪ್ರತಿ ವಿದ್ಯಾರ್ಥಿ ಬಳಿಯೂ ಸಿಬ್ಬಂದಿ ಖುದ್ದು ತೆರಳಿ ಪರೀಕ್ಷಾ ಕಾರ್ಯ ನಡೆಸಬೇಕಿರುವ ಹಿನ್ನೆಲೆಯಲ್ಲಿ ಹೆಚ್ಚು ವಿದ್ಯಾರ್ಥಿಗಳು ಇದ್ದರೆ ವಿದ್ಯಾರ್ಥಿಗಳ ಜೊತೆ ಸಂಪರ್ಕ ಹೆಚ್ಚಾಗಲಿದೆ. ಒಂದೇ ಕೊಠಡಿಯಲ್ಲಿ ಹೆಚ್ಚು ವಿದ್ಯಾರ್ಥಿಗಳ ಜೊತೆ ಇರುವುದರಿಂದ ಸೋಂಕು ತಗುಲಿದರೆ ಯಾರು ಜವಾಬ್ದಾರಿ, ವಿದ್ಯಾರ್ಥಿಗಳು ಹಾಗು ಸಿಬ್ಬಂದಿ ಜೊತೆ ಪರೀಕ್ಷಾ ಪ್ರಾಧಿಕಾರ ಚೆಲ್ಲಾಟ ಆಡುತ್ತಿದೆ ಎಂದು ಸಿಬ್ಬಂದಿ ದೂರಿದ್ದಾರೆ.

ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಪ್ರತಿದಿನ ಸರಾಸರಿ ಐದು ಸಾವಿರದಂತೆ ಪಾಸಿಟಿವ್ ಕೇಸ್ ಬರುತ್ತಿವೆ. ಇಂತಹ ಸಂದರ್ಭದಲ್ಲಿ ಸಿಇಟಿ ಪರೀಕ್ಷೆ ಬೇಡ ಎನ್ನುವ ವಿರೋಧವೂ ಕೇಳಿಬಂದಿದೆ. ಇದರ ನಡುವೆ ಹೆಚ್ಚಿನ ಸುರಕ್ಷತಾ ಕ್ರಮ ಕೈಗೊಳ್ಳಬೇಕಿದ್ದ ಪರೀಕ್ಷಾ ಪ್ರಾಧಿಕಾರ ಪ್ರತಿ ಕೊಠಡಿಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ವಿಚಾರದಲ್ಲಿ ಎಡವಟ್ಟು ಮಾಡಿಕೊಂಡಿದ್ದೇಕೆ, ಪರೀಕ್ಷೆ ವೇಳೆ ಸ್ವಲ್ಪ ಹೆಚ್ಚುಕಮ್ಮಿ ಆದರೆ ಯಾರು ಜವಾಬ್ದಾರಿ ಎನ್ನುವ ಪ್ರಶ್ನೆ ಎದ್ದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.