ETV Bharat / state

ಸಿಇಟಿ, ನೀಟ್, ಜೆಇಇ ವಿಶೇಷ ತರಬೇತಿಗೆ ಆಯಾ ಕಾಲೇಜುಗಳಲ್ಲಿಯೇ ವ್ಯವಸ್ಥೆ: ಸಚಿವ ಅಶ್ವತ್ಥ್ ನಾರಾಯಣ - Candidates who make mistakes when applying for CET, NEET and JEE exam

ಗೆಟ್ ಸೆಟ್ ಗೋ ಅಭಿಯಾನದ ಮೂಲಕವೇ ಈ ಪರೀಕ್ಷೆಗಳಿಗೆ ಹೆಚ್ಚಾಗಿ ಎಂಜಿನಿಯರಿಂಗ್, ವೈದ್ಯಕೀಯ ಮತ್ತು ಸ್ನಾತಕೋತ್ತವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುತ್ತಿದ್ದು, ಈ ತರಬೇತಿಯಿಂದ ಪ್ರಯೋಜನವಾಗಲಿದೆ..

Minister Ashwaththanarayana
ಸಚಿವ ಅಶ್ವತ್ಥನಾರಾಯಣ
author img

By

Published : Jan 30, 2022, 3:08 PM IST

ಬೆಂಗಳೂರು : ಸಿಇಟಿ, ನೀಟ್, ಜೆಇಇ ಮುಂತಾದ ಉನ್ನತ ಹಂತದ ಪರೀಕ್ಷೆಗಳಿಗೆ ಅರ್ಜಿ ತುಂಬುವಾಗ ಅಭ್ಯರ್ಥಿಗಳು ತಪ್ಪು ಮಾಡುತ್ತಿರುವ ಹಿನ್ನೆಲೆ ಇದಕ್ಕೆ ಸಂಬಂಧಿಸಿದಂತೆ ಪದವಿಪೂರ್ವ ಮತ್ತು ಪದವಿ ಹಂತಗಳಲ್ಲಿ ಆಯಾ ಕಾಲೇಜುಗಳಲ್ಲಿಯೇ ವಿಶೇಷ ತರಬೇತಿ ನೀಡಲು ಸೂಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥ್‌ ನಾರಾಯಣ ಹೇಳಿದ್ದಾರೆ.

ಈ ವಿಚಾರವಾಗಿ ಪತ್ರಿಕಾ ಪ್ರಕಟಣೆ ನೀಡಿರುವ ಅಶ್ವತ್ಥ್‌ ನಾರಾಯಣ ಅವರು, ಅಭ್ಯರ್ಥಿಗಳು ಹೆಚ್ಚಾಗಿ ಈ ಅರ್ಜಿಗಳಲ್ಲಿ ವಾರ್ಷಿಕ ಆದಾಯ, ಕೆಟಗರಿ, ಹೆಸರು, ಹುಟ್ಟಿದ ದಿನಾಂಕ, ಕೋರ್ಸ್ ಆಯ್ಕೆ ಮುಂತಾದ ಮಾಹಿತಿಗಳನ್ನು ಭರ್ತಿ ಮಾಡುವಾಗ ತಪ್ಪು ಮಾಡುತ್ತಿರುವುದು ಕಂಡು ಬಂದಿದೆ.

ಇದರಿಂದಾಗಿ ಹೆಚ್ಚಿನ ಅರ್ಜಿಗಳು ತಿರಸ್ಕೃತವಾಗುತ್ತಿವೆ. ಉನ್ನತ ಶಿಕ್ಷಣದ ಅವಕಾಶದಿಂದ ವಂಚಿತರಾಗುತ್ತಿದ್ದಾರೆ. ಇದನ್ನು ಗಮನಿಸಿ ಗೆಟ್ ಸೆಟ್ ಗೋ ಅಭಿಯಾನದ ಮೂಲಕ ಈ ತರಬೇತಿ ನೀಡುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿ ಯುಟಿ ಖಾದರ್ ನೇಮಕ

ಗೆಟ್ ಸೆಟ್ ಗೋ ಅಭಿಯಾನದ ಮೂಲಕವೇ ಈ ಪರೀಕ್ಷೆಗಳಿಗೆ ಹೆಚ್ಚಾಗಿ ಎಂಜಿನಿಯರಿಂಗ್, ವೈದ್ಯಕೀಯ ಮತ್ತು ಸ್ನಾತಕೋತ್ತವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುತ್ತಿದ್ದು, ಈ ತರಬೇತಿಯಿಂದ ಪ್ರಯೋಜನವಾಗಲಿದೆ.

ತರಬೇತಿಯ ಜತೆಗೆ ಸಾಮಾಜಿಕ ಮಾಧ್ಯಮಗಳು, ವೆಬ್-ಸೈಟ್​​ಗಳು ಮತ್ತು ದಿನಪತ್ರಿಕೆಗಳಲ್ಲಿ ಈ ಅರ್ಜಿ ತುಂಬುವ ಸರಿಯಾದ ವಿಧಾನದ ಬಗ್ಗೆ ವ್ಯಾಪಕವಾಗಿ ಜಾಹೀರಾತನ್ನು ಕೂಡ ನೀಡುವ ಮೂಲಕ ಅರಿವು ಮೂಡಿಸಲಾಗುವುದು ಎಂದು ಅಶ್ವತ್ಥ್‌ ನಾರಾಯಣ ತಿಳಿಸಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.