ETV Bharat / state

ನಾಳೆ ಸಿಇಟಿ ಫಲಿತಾಂಶ ಪ್ರಕಟ

ವಿದ್ಯಾರ್ಥಿಗಳ ಮುಂದಿನ ಶಿಕ್ಷಣ ಮತ್ತು ಭವಿಷ್ಯ ತೀರ್ಮಾನಿಸುವಲ್ಲಿ ಪ್ರಮುಖ ಪಾತ್ರವಹಿಸುವ ಸಿಇಟಿ ಫಲಿತಾಂಶ ಜುಲೈ 30ರಂದು ಹೊರಬೀಳಲಿದೆ.

cet-result-declared-on-30th-july
ನಾಳೆ ಸಿಇಟಿ ಫಲಿತಾಂಶ ಪ್ರಕಟ
author img

By

Published : Jul 29, 2022, 1:52 PM IST

ಬೆಂಗಳೂರು: ರಾಜ್ಯದ ಸಾವಿರಾರು ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿರುವ KCET Results-2022 ಅಥವಾ ಸಾಮಾನ್ಯ ಪ್ರವೇಶ ಪರೀಕ್ಷೆ ಫಲಿತಾಂಶವು ನಾಳೆ (ಶನಿವಾರ) ಪ್ರಕಟಗೊಳ್ಳಲಿದೆ. ಈ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯು ಜೂನ್‌ 16, 17 ಮತ್ತು 18ರಂದು ನಡೆದಿತ್ತು.

ವಿದ್ಯಾರ್ಥಿಗಳ ಮುಂದಿನ ಶಿಕ್ಷಣ ಮತ್ತು ಭವಿಷ್ಯ ತೀರ್ಮಾನಿಸುವಲ್ಲಿ ಪ್ರಮುಖ ಪಾತ್ರವಹಿಸುವ ಸಿಇಟಿ ಫಲಿತಾಂಶ ಜುಲೈ 30ರಂದು ಹೊರಬೀಳಲಿದ್ದು, ಬಳಿಕ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಕಾಲೇಜುಗಳಿಗೆ ಸೇರಬಹುದಾಗಿದೆ ಎಂದು ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಸಿಬಿಎಸ್​ಇ ಮತ್ತು ಐಸಿಎಸ್​ಇ ಪಠ್ಯಕ್ರಮದಲ್ಲಿ 12ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಪಡೆದಿರುವ ಅಂಕಗಳನ್ನೂ ಸಿಇಟಿ ರ‍್ಯಾಂಕ್‌ನಲ್ಲಿ ಪರಿಗಣಿಸಲಾಗುತ್ತದೆ.

ಈಗಾಗಲೇ ಪಿಯುಸಿ ಅಥವಾ ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟಗೊಂಡಿದೆ. ಈ ಎಲ್ಲ ಅಂಕಗಳ ಆಧಾರದಲ್ಲಿ ಅಂತಿಮ ರ‍್ಯಾಂಕ್‌ ಪಟ್ಟಿಯನ್ನು ಸಿದ್ಧಪಡಿಸಿ ನಾಳೆ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತಿದೆ ಎಂದು ಪರೀಕ್ಷಾ ಪ್ರಾಧಿಕಾರ ಹೇಳಿದೆ.

ಇದನ್ನೂ ಓದಿ: ರಾಜ್ಯದ ಈ ಜಿಲ್ಲೆಗಳ 1,454 ಗ್ರಾಮಗಳಲ್ಲಿ ಶವ ಸಂಸ್ಕಾರಕ್ಕೆ ಸ್ಮಶಾನವೇ ಇಲ್ಲ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.