ETV Bharat / state

ನಾಳೆಯಿಂದ ಸಿಇಟಿ ಪರೀಕ್ಷೆ ಆರಂಭ: ಪರೀಕ್ಷೆ ಬರೆಯಲಿರುವ 2.61 ಲಕ್ಷ ವಿದ್ಯಾರ್ಥಿಗಳು

ಕೆಇಎಯಿಂದ ನಡೆಯಲಿರುವ ಸಿಇಟಿ ಪರೀಕ್ಷೆಗೆ ಈ ಬಾರಿ 2,61,610 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ.

CET starts from tomorrow
ನಾಳೆಯಿಂದ ಸಿಇಟಿ ಪರೀಕ್ಷೆ ಆರಂಭ
author img

By

Published : May 19, 2023, 8:43 PM IST

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ಕರ್ನಾಟಕ ಪರೀಕ್ಷ ಪ್ರಾಧಿಕಾರ (ಕೆಇಎ) ನಡೆಸುವ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಗೆ (KCET 2023) ಈಗಾಗಲೇ ವೇಳಾಪಟ್ಟಿ ಪ್ರಕಟಗೊಂಡಿದೆ. ಅದರಂತೆ ಮೇ 20ರ ಶನಿವಾರ ಮತ್ತು ಭಾನುವಾರ ಪರೀಕ್ಷೆ ನಡೆಸಲು ಕೆಇಎ ಸಕಲ ಸಿದ್ಧತೆ ಮಾಡಿ ಕೊಂಡಿದೆ.

ಸಿಇಟಿ ಪರೀಕ್ಷೆಗೆ 2,61,610 ವಿದ್ಯಾರ್ಥಿಗಳು ನೋಂದಣಿ: ಈ ಬಾರಿ 2,61,610 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ತೆಗೆದುಕೊಂಡಿದ್ದಾರೆ. ಇವರಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಬೆಂಗಳೂರಿನ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಬೇಕಿದೆ. ಬೆಳಗ್ಗೆ 10:30 ರಿಂದ 11:50ರ ವರೆಗೆ ಜೀವಶಾಸ್ತ್ರ ಮತ್ತು ಮಧ್ಯಾಹ್ನ 2:30 ರಿಂದ 3:50 ರವರೆಗೆ ಗಣಿತದ ಪರೀಕ್ಷೆ ನಿಗದಿಯಾಗಿದೆ.

ಇದನ್ನೂ ಓದಿ: ಶೀಘ್ರವೇ ಟ್ವಿಟರ್​ನಲ್ಲಿ ಬರಲಿದೆ ವಾಯ್ಸ್ ಹಾಗೂ ವಿಡಿಯೋ ಚಾಟ್ ಹೊಸ ಫೀಚರ್​: ಎಲೋನ್ ಮಸ್ಕ್

ವೃತ್ತಿಶಿಕ್ಷಣ ಕೋರ್ಸುಗಳಾದ ವೈದ್ಯಕೀಯ, ದಂತ ವೈದ್ಯಕೀಯ, ಇಂಡಿಯನ್ ಸಿಸ್ಟಮ್ಸ್ ಆಫ್ ಮೆಡಿಸಿನ್ ಮತ್ತು ಹೋಮಿಯೋಪತಿ (ಆಯುಶ್), ಎಂಜಿನಿಯರಿಂಗ್, ವಾಸ್ತುಶಿಲ್ಪ ಕೋರ್ಸುಗಳು, ಫಾರ್ಮ್ ಸೈನ್ಸ್ ಅಂದರೆ ಬಿಎಸ್ಸಿ (ಕೃಷಿ), ಬಿಎಸ್ಸಿ (ರೇಷ್ಮೆ ಕೃಷಿ), ಬಿಎಸ್ಸಿ (ತೋಟಗಾರಿಕೆ), ಬಿಎಸ್ಸಿ (ಅರಣ್ಯ), ಬಿಎಸ್ಸಿ (ಆಹಾರ ವಿಜ್ಞಾನ), ಬಿಟೆಕ್ (ಡೈರಿ ಟೆಕ್), ಬಿಎಫ್ಎಸ್ಸಿ (ಫಿಶರೀಸ್), ಬಿ.ಟೆಕ್ (ಫುಡ್ ಸೈನ್ಸ್ ಮತ್ತು ಟೆಕ್), ಅಕ್ರಿ ಬಯೋ ಟೆಕ್, ಬಿಎಚ್ಎಸ್ಸಿ (ಹೋಮ್ ಸೈನ್ಸ್), ಬಿ.ಟೆಕ್ (ಅಗ್ರಿ ಎಂಗ್ಜಿ) ), ಮತ್ತು (ಅಗ್ರಿ ಮಾರ್ಕೆಟಿಂಗ್ & ಕೋ-ಆಪ್), ಬಿ-ಫಾರ್ಮಾ, ಫಾರ್ಮಾ-ಡಿ ಕೋರ್ಸುಗಳ ಪ್ರವೇಶಕ್ಕೆ ಈ ಪರೀಕ್ಷೆ ನಡೆಸಲಾಗುತ್ತಿದೆ. ರಾಜ್ಯ ಸರ್ಕಾರ ನೀಡಿದ ಸೀಟ್ ಮ್ಯಾಟ್ರಿಕ್ಸ್ ಪ್ರಕಾರ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತದೆ.

ಇದನ್ನೂ ಓದಿ: ಏಳು ಸಾವಿರಕ್ಕೂ ಅಧಿಕ ನಾರ್ಕೋಟಿಕ್ ಇಂಜೆಕ್ಷನ್​ಗಳ ಜಪ್ತಿ ಮಾಡಿದ ಪೊಲೀಸರು

ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿರುವ ವೇಳಾಪಟ್ಟಿ ಇಲ್ಲಿದೆ ನೋಡಿ:
ಮೇ 20- ಜೀವಶಾಸ್ತ್ರ ಮತ್ತು ಗಣಿತ
ಮೇ 21- ರಸಾಯನಶಾಸ್ತ್ರ ಹಾಗೂ ಭೌತಶಾಸ್ತ್ರ
ಮೇ 22- ಹೊರನಾಡು, ಗಡಿನಾಡು ಕನ್ನಡಿಗರಿಗೆ ಕನ್ನಡ ಪರೀಕ್ಷೆ ನಡೆಯಲಿದೆ. ಬೆಂಗಳೂರು, ಬೀದರ್‌, ಬೆಳಗಾವಿ, ಬಳ್ಳಾರಿ, ವಿಜಯಪುರ, ಮಂಗಳೂರು ಜಿಲ್ಲಾ ಕೇಂದ್ರಗಳಲ್ಲಿ ಮಾತ್ರ ಸಿಇಟಿ ಪರೀಕ್ಷೆ ನಡೆಯಲಿದೆ.

ಇದನ್ನೂ ಓದಿ: ಸಿಎಂ ಪ್ರಮಾಣವಚನ ಹಿನ್ನೆಲೆ: ಬೆಳಗ್ಗೆ 8.30ಕ್ಕೆ ಆಗಮಿಸುವಂತೆ ಸಿಇಟಿ ವಿದ್ಯಾರ್ಥಿಗಳಿಗೆ ಮುನ್ಸೂಚನೆ..!

ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌: ಪ್ರವೇಶಾತಿಗಾಗಿ ಕರ್ನಾಟಕ ಪರೀಕ್ಷ ಪ್ರಾಧಿಕಾರದ ವೆಬ್​ಸೈಟ್​- https://cetonline.karnataka.gov.in ಸಂಪರ್ಕಿಸಬಹುದು. ಪರೀಕ್ಷೆ ನಡೆಸಲು 592 ವೀಕ್ಷಕರು, 1.184 ವಿಶೇಷ ಸ್ಕ್ಯಾಡ್ 592 ಕಸ್ಟೋಡಿಯನ್ಸ್ ಸೇರಿದಂತೆ 23 ಸಾವಿರಕ್ಕೂ ಹೆಚ್ಚು ಸಿಬ್ಬಂದಿಯನ್ನು ಪರೀಕ್ಷಾ ಪ್ರಾಧಿಕಾರ ನಿಯೋಜನೆ ಮಾಡಿದೆ.

ಇದನ್ನೂ ಓದಿ: ಮೈಗ್ರೇನ್‌ ಎಂದುಕೊಂಡಿದ್ದ ವ್ಯಕ್ತಿಯಲ್ಲಿ ಅಪರೂಪದ ನರಮಂಡಲದ ವಿಪ್ಪಲ್‌ ಕಾಯಿಲೆ ಪತ್ತೆ: ನಗರದ ವೈದ್ಯರಿಂದ ಯಶಸ್ವಿ ಚಿಕಿತ್ಸೆ..

ಇದನ್ನೂ ಓದಿ: ಶ್ರಮಿಕ ವರ್ಗಕ್ಕೆ ಕೊಟ್ಟಿದ್ದ ಉಚಿತ ಬಸ್ ಪಾಸ್ ಸ್ಥಗಿತ: ಹೊಸ ಸರ್ಕಾರದ ಗ್ಯಾರಂಟಿಗಳ ಜಾರಿಗೆ ಕಾದು ಕುಳಿತ ಕಾರ್ಮಿಕರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.