ಬೆಂಗಳೂರು: ಸಿನಿಮೀಯ ಶೈಲಿಯಲ್ಲಿ ಸರಗಳ್ಳನನ್ನು ಆಟೋ ಚಾಲಕ ಸೆರೆ ಹಿಡಿದಿರುವ ಘಟನೆ ನಗರದ ಮಾರತ್ ಹಳ್ಳಿಯ ಮ್ಯಾಕ್ಸ್ ಶೋ ರೂಂ ಮುಂದೆ ನಡೆದಿದೆ.
ಒಂಟಿಯಾಗಿ ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಯನ್ನು ಆ್ಯಕ್ಟಿವಾದಲ್ಲಿ ಬಂದ ಕಳ್ಳನೊಬ್ಬ ಅಡ್ಡಗಟ್ಟಿ, ಕ್ಷಣಾರ್ಧದಲ್ಲಿ ಆಕೆಯ ಕತ್ತಿನಲ್ಲಿದ್ದ ಚಿನ್ನದ ಸರದೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ. ಇದನ್ನು ಗಮನಿಸಿದ ಆಟೋ ಚಾಲಕ ಹನುಮಂತ, ಸಿನಿಮೀಯ ಶೈಲಿಯಲ್ಲಿ ಚೇಸ್ ಮಾಡಿ ಕಳ್ಳನ ಬೈಕ್ಗೆ ಡಿಕ್ಕಿ ಹೊಡೆದು ಆತನನ್ನು ಹಿಡಿದು ಹಿಗ್ಗಾಮುಗ್ಗ ಥಳಿಸಿದ್ದಾನೆ. ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾನೆ.
ಆಟೋಚಾಲಕ ಹನುಮಂತನ ಸಾಹಸ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವೈಲ್ಟ್ ಫೀಲ್ಡ್ ಡಿಸಿಪಿ ಅನುಚೇತ್ ಆಟೋಚಾಲಕನಿಗೆ ಹತ್ತು ಸಾವಿರ ಬಹುಮಾನ ನೀಡಿ ಅಭಿನಂದಿಸಿದ್ದಾರೆ. ಈ ಬಗ್ಗೆ ಮಾರತ್ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸರಗಳ್ಳತನ ಮಾಡಿದ ಆರೋಪಿಯನ್ನು ಕೆಜಿ ಹಳ್ಳಿಯ ವಿಘ್ನೇಶ್ ಎಂದು ಗುರುತಿಸಲಾಗಿದೆ. ಆರೋಪಿ ವಿಘ್ನೇಶ್ನ್ನು ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದು, ಈ ವೇಳೆ ಈ ಹಿಂದೆ ಈತ ಬಹಳಷ್ಟು ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವ ವಿಚಾರ ಬಾಯಿ ಬಿಟ್ಟಿದ್ದಾನೆ.