ಬೆಂಗಳೂರು: ಕುಖ್ಯಾತ ಸರಗಳ್ಳರನ್ನು ಚಾಮರಾಜಪೇಟೆ ಪೊಲೀಸರು ಬಂಧಿಸಿದ್ದು, ಬಂಧಿತರಿಂದ 11 ಲಕ್ಷ 25 ಸಾವಿರ ಮೌಲ್ಯದ 225 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
ಬಂಧಿತರು ಈ ಮುನ್ನ ಕಾಟನ್ ಪೇಟೆ, ಹನುಮಂತ ನಗರ ಹಾಗೂ ಬನಶಂಕರಿ ಠಾಣಾ ವ್ಯಾಪ್ತಿಗಳ ಕಳ್ಳತನ ಕೇಸ್ಗಳಲ್ಲಿ ಭಾಗಿಯಾಗಿದ್ದು, ಅವರ ಮೇಲೆ ದೂರು ಕೂಡ ದಾಖಲಾಗಿತ್ತು.
ಇದೇ ಜನವರಿ 2 ರಂದು ಬಂಧಿತ ಆರೋಪಿಗಳು ಚಾಮರಾಜಪೇಟೆ ಠಾಣಾ ವ್ಯಾಪ್ತಿಯಲ್ಲಿ 1.5 ಲಕ್ಷ ಮೌಲ್ಯದ 30 ಗ್ರಾಂ ಚಿನ್ನದ ಸರ ಕಳ್ಳತನ ಮಾಡಿದ್ದರು. ಈ ಬಗ್ಗೆ ಚಾಮರಾಜಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.