ಬೆಂಗಳೂರು: ಇತ್ತೀಚೆಗಷ್ಟೇ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ್ ಕಂಬಾರರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ ಅಭಿನಂದಿಸಿದರು.
ಬೆಂಗಳೂರಿನ ಬನಶಂಕರಿಯ ಅವರ ನಿವಾಸಕ್ಕೆ ಭೇಟಿ ನೀಡಿದ ಸಚಿವರು, ಕಂಬಾರರಿಗೆ ಹೂಗುಚ್ಛ ನೀಡಿ, ಶಾಲು ಹೊದಿಸಿ ಸನ್ಮಾನಿಸಿದರು.
ಡಾ. ಚಂದ್ರಶೇಖರ್ ಕಂಬಾರ ಮಾತನಾಡಿ, ಸಚಿವರಿಂದ ಸನ್ಮಾನ ಸ್ವೀಕರಿಸಿದ್ದು ಹಾಗೂ ಪ್ರಶಸ್ತಿ ಲಭಿಸಿರುವುದು ಸಂತಸ ತಂದಿದೆ ಎಂದರು.