ETV Bharat / state

ಬೈಯಪ್ಪನಹಳ್ಳಿ- ಕೃಷ್ಣರಾಜಪುರ ನಿಲ್ದಾಣಗಳ ನಡುವೆ ಸಿಗ್ನಲಿಂಗ್‌ ಪರೀಕ್ಷೆ: ಮೆಟ್ರೋ ರೈಲು ಕಾರ್ಯಾಚರಣೆ ಸಮಯದಲ್ಲಿ ಬದಲಾವಣೆ

ಸಿಗ್ನಲಿಂಗ್‌ ವ್ಯವಸ್ಥೆಗಳ ಪರೀಕ್ಷೆ ನಡೆಸಲಿರುವುದರಿಂದ ನಮ್ಮ ಮೆಟ್ರೋ ವಾಣಿಜ್ಯ ಸೇವೆಯ ಸಮಯದಲ್ಲಿ ಮಾರ್ಪಾಡು ಮಾಡಲಾಗಿದೆ. ಪ್ರಯಾಣಿಕರು ಬದಲಾವಣೆಯನ್ನು ಗಮನಿಸಿ ಸಹಕರಿಸಬೇಕಿದೆ.

ಮೆಟ್ರೋ
ಮೆಟ್ರೋ
author img

By

Published : Aug 15, 2023, 6:53 AM IST

ಬೆಂಗಳೂರು: ನೇರಳೆ ಮಾರ್ಗದ ಕೆಂಗೇರಿ ಮತ್ತು ಚಲ್ಲಘಟ್ಟ ಹಾಗೂ ಬೈಯಪ್ಪನಹಳ್ಳಿ ಮತ್ತು ಕೃಷ್ಣರಾಜಪುರ ಮೆಟ್ರೋ ನಿಲ್ದಾಣಗಳ ನಡುವಿನ ಸಿಗ್ನಲಿಂಗ್‌ ವ್ಯವಸ್ಥೆಗಳ ಪರೀಕ್ಷೆ ನಡೆಸುವ ಸಲುವಾಗಿ ನಮ್ಮ ಮೆಟ್ರೋ ವಾಣಿಜ್ಯ ಸೇವೆಯ ಸಮಯದಲ್ಲಿ ಮಾರ್ಪಾಡು ಮಾಡಲಾಗಿದೆ ಎಂದು ಬಿಎಂಆರ್​​​ಸಿಎಲ್​ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಸಿಗ್ನಲಿಂಗ್​ ವ್ಯವಸ್ಥೆಗಳ ಪರೀಕ್ಷೆ ಮಾಡುವ ಹಿನ್ನೆಲೆಯಲ್ಲಿ ಆಗಸ್ಟ್ 17 ರಂದು (ಗುರುವಾರ) ಕೆಂಗೇರಿ ಮತ್ತು ಮೈಸೂರು ರಸ್ತೆಯ ಮೆಟ್ರೋ ನಿಲ್ದಾಣಗಳ ನಡುವೆ ಯಾವುದೇ ರೈಲು ಸೇವೆ ಲಭ್ಯವಿರುವುದಿಲ್ಲ. ಮೈಸೂರು ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ಬೆಳೆಗ್ಗೆ 5 ರಿಂದ ರಾತ್ರಿ 11 ರವರೆಗೆ ರೈಲು ಸೇವೆಗಳು ಇರಲಿದೆ ಎಂದು ಬಿಎಂಆರ್​ಸಿಎಲ್​ ಸಂಸ್ಥೆ ತನ್ನ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಆಗಸ್ಟ್ 23 ಮತ್ತು 24 ರಂದು ಬೆಳಗ್ಗೆ 7 ಗಂಟೆಯ ನಂತರ ಕೆಂಗೇರಿಯಿಂದ ಬೈಯಪ್ಪನಹಳ್ಳಿಗೆ ರೈಲುಗಳು ಸಂಚರಿಸಲಿವೆ. ಈ ಅವಧಿಯಲ್ಲಿ ಕೆಂಗೇರಿ ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಬೆಳಗ್ಗೆ ಯಾವುದೇ ರೈಲು ಸೇವೆ ಇರುವುದಿಲ್ಲ ಮತ್ತು ಮೈಸೂರು ರಸ್ತೆ ಮತ್ತು ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ಸೇವೆ ಲಭ್ಯವಿರುತ್ತದೆ ಎಂದು ಹೇಳಿದೆ.

ಮುಂದುವರೆದು ಆಗಸ್ಟ್ 20 ರಂದು ಬೈಯಪ್ಪನಹಳ್ಳಿ ಟರ್ಮಿನಲ್ ಮತ್ತು ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣ ಹಾಗೂ ಕೃಷ್ಣರಾಜಪುರ ಮತ್ತು ವೈಟ್‌ ಫೀಲ್ಡ್ ಮಾರ್ಗಗಳ ನಡುವೆ ಬೆಳಗ್ಗೆ 7 ಗಂಟೆಯವರೆಗೆ ಯಾವುದೇ ರೈಲು ಸೇವೆ ಲಭ್ಯವಿರುವುದಿಲ್ಲ. ಈ ಅವಧಿಯಲ್ಲಿ ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣದವರೆಗೆ ಮಾತ್ರ ರೈಲು ಸಂಚರಿಸಲಿದೆ ಎಂದಿದೆ.

ಆಗಸ್ಟ್ 23, 24 ಮತ್ತು 29 ರಂದು ಬೆಳಗ್ಗೆ 5 ಗಂಟೆಯಿಂದ 7 ಗಂಟೆಯವರೆಗೆ ಮೈಸೂರು ರಸ್ತೆ ನಿಲ್ದಾಣದಲ್ಲಿ ರೈಲುಗಳ ಸೇವೆ ಕೊನೆಗೊಳ್ಳುತ್ತದೆ ಮತ್ತು ಇತರ ದಿನಗಳಲ್ಲಿ ರೈಲುಗಳು ಕೆಂಗೇರಿ ನಿಲ್ದಾಣದವರೆಗೆ ಸಂಚರಿಸಲಿದೆ. ಬೆಳಗ್ಗೆ 7 ಗಂಟೆಯ ನಂತರ ಬೈಯಪ್ಪನಹಳ್ಳಿಯಿಂದ ಕೆಂಗೇರಿ ನಿಲ್ದಾಣದ ಮಾರ್ಗಗಳ ನಡುವೆ ಎಂದಿನಂತೆ ಸೇವೆಗಳು ಲಭ್ಯವಿರುತ್ತದೆ. ಹಸಿರು ಮಾರ್ಗದ ರೈಲು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬಿಎಂ ಆರ್​ಸಿಎಲ್ ಸಂಸ್ಥೆ ತಿಳಿಸಿದೆ. ನಮ್ಮ ಮೆಟ್ರೋ ಪ್ರಯಾಣಿಕರು ಬದಲಾವಣೆಯನ್ನು ಗಮನಿಸಿ ಸಹಕರಿಸಬೇಕು. ಪ್ರಯಾಣಿಕರಿಗೆ ಇದರಿಂದಾಗುವ ಅನಾನುಕೂಲತೆಗೆ ಸಂಸ್ಥೆ ವಿಷಾದ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಅನಧಿಕೃತ ಕಟ್ಟಡಗಳ ತೆರವಿಗೆ 3 ವಾರಗಳಲ್ಲಿ ಕ್ರಿಯಾ ಯೋಜನೆ ಸಲ್ಲಿಸಿ: ಸರ್ಕಾರಕ್ಕೆ ಸೂಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.