ETV Bharat / state

ಇಂದು ನೂತನ‌ ಸಚಿವರ ಪ್ರಮಾಣವಚನ: ರಾಜಭವನದ ಸುತ್ತಮುತ್ತ ಸಂಚಾರ ಮಾರ್ಗಗಳಲ್ಲಿ ಬದಲಾವಣೆ - 24 karnataka ministers set to be sworn in today

ಕರ್ನಾಟಕದ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಜೊತೆಗೆ ಕಾಂಗ್ರೆಸ್‌ ಹೈಕಮಾಂಡ್‌ ಸತತ ಮೂರು ದಿನಗಳ ಕಾಲ ಸಮಾಲೋಚನೆ ನಡೆಸಿ ಸಂಪುಟ ವಿಸ್ತರಣೆಯ ಕಗ್ಗಂಟನ್ನು ಬಗೆಹರಿಸಿದೆ. ಇಂದು 24 ಶಾಸಕರು ಪ್ರಮಾಣವಚನ ಸ್ವೀಕಾರ ಮಾಡುವ ಹಿನ್ನೆಲೆ ರಾಜಭವನದ ಸುತ್ತಮುತ್ತ ಸಂಚಾರ ಮಾರ್ಗಗಳಲ್ಲಿ ಬದಲಾವಣೆ ಮಾಡಲಾಗಿದೆ.

traffic
ಸಂಚಾರ ಮಾರ್ಗಗಳಲ್ಲಿ ಬದಲಾವಣೆ
author img

By

Published : May 27, 2023, 8:52 AM IST

ಬೆಂಗಳೂರು: ಕಾಂಗ್ರೆಸ್​ನ 24 ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ಇಂದು ಬೆಳಗ್ಗೆ 11.45ಕ್ಕೆ ರಾಜಭವನದಲ್ಲಿ ನಡೆಯಲಿದೆ. ಆದ್ದರಿಂದ ರಾಜಭವನದ ಸುತ್ತಮುತ್ತ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಸಂಚಾರ ಮಾರ್ಗಗಳಲ್ಲಿ ಬದಲಾವಣೆಯಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಬೆಂಗಳೂರು ಸಂಚಾರಿ ಪೊಲೀಸರು​ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅನ್ವಯವಾಗುವಂತೆ ಕೆ ಆರ್ ವೃತ್ತದಿಂದ ಗೋಪಾಲಗೌಡ ವೃತ್ತದವರೆಗೆ ಸಂಚಾರ ವ್ಯವಸ್ಥೆ ಬಂದ್ ಆಗಲಿದೆ. ಬದಲಿಯಾಗಿ ನೃಪತುಂಗ ರಸ್ತೆ ಅಥವಾ ಕಬ್ಬನ್​ಪಾರ್ಕ್​ ಒಳಭಾಗದ ರಸ್ತೆಯಲ್ಲಿ ಸಂಚಾರಿಸಬಹುದಾಗಿದೆ. ಇನ್ನು ಬಾಳೇಕುಂದ್ರಿ ವೃತ್ತದಿಂದ ಬರುವ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದ್ದು, ಕಾಫಿ ಬೋರ್ಡ್ ಅಥವಾ ತಿಮ್ಮಯ್ಯ ವೃತ್ತದ ಕಡೆ ಸಂಚಾರ ನಿರ್ಬಂಧ ಹೇರಲಾಗಿದೆ.

ಇದನ್ನೂ ಓದಿ : ಲಕ್ಷ್ಮೀ ಹೆಬ್ಬಾಳ್ಕರ್​​ಗೆ ಒಲಿದ ಸಚಿವ ಸ್ಥಾನಬ : ಸವದಿ, ಅಶೋಕ್ ಪಟ್ಟಣ ಸೇರಿ ಇತರರಿಗೆ ನಿರಾಶೆ

ಜೊತೆಗೆ, ಪೊಲೀಸ್ ತಿಮ್ಮಯ್ಯ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ಸಂಚಾರ ಸಂಪೂರ್ಣ ನಿಷೇಧಿಸಲಾಗಿದೆ. ಹಾಗೆಯೇ ಶಿವಾಜಿನಗರ ಬಸ್ ನಿಲ್ದಾಣದಿಂದ ಬರುವ ವಾಹನಗಳ ಹಾಗೂ ಕ್ವೀನ್ಸ್ ಸರ್ಕಲ್, ಸಿದ್ದಲಿಂಗಯ್ಯ ವೃತ್ತದ ಕಡೆಗೆ ಬರುವ ವಾಹನಗಳ ಮಾರ್ಗ ಬದಲಾಯಿಸಲಾಗಿದೆ. ಎಲ್ಲಾ ಮಾದರಿ ಬಸ್​ಗಳು, ಸರಕು ಸಾಗಣೆ ವಾಹನಗಳ ಸಂಚಾರವನ್ನ ರಾಜಭವನ, ಕಾಫಿಬೋರ್ಡ್​ ಕಡೆಗೆ ನಿಷೇಧಿಸಲಾಗಿದೆ. ರಾಜಭವನದ ಸುತ್ತಮುತ್ತ ವಾಹನಗಳ ನಿಲುಗಡೆಗೆ ಸಂಪೂರ್ಣ ನಿಷೇಧಿಸಲಾಗಿದೆ. ರಾಜಭವನ ರಸ್ತೆ, ಅಂಬೇಡ್ಕರ್ ರಸ್ತೆ, ಕ್ವೀನ್ಸ್ ರಸ್ತೆ, ಇನ್​ಫೆಂಟ್ರಿ ರಸ್ತೆ, ಸ್ಯಾಂಕಿ ರಸ್ತೆ, ಪ್ಯಾಲೇಸ್​ ರಸ್ತೆ, ಕಬ್ಬನ್​ ರಸ್ತೆಯಲ್ಲಿ ನಿಲುಗಡೆ ನಿಷೇಧಿಸಲಾಗಿದೆ.

ಇದನ್ನೂ ಓದಿ : 24 ಶಾಸಕರಿಗೆ ಮಂತ್ರಿ ಭಾಗ್ಯ... ರಾಜಭವನದಲ್ಲಿ ಇಂದು ಪ್ರಮಾಣವಚನ ಸ್ವೀಕಾರ

ಪಾಸ್​ ಇರುವ ವಾಹನಗಳಿಗೆ ಅವಕಾಶ: ಪಾಸ್ ಇರುವ ವಾಹನಗಳು ರಾಜಭವನದ ಗೇಟ್​ ಬಳಿಗೆ ಬರಬಹುದು. ರಾಜಭವನದ ಗೇಟ್​ ಬಳಿ ಗಣ್ಯರನ್ನು ಇಳಿಸಿ ಮುಂದೆ ಸಾಗಬೇಕಿದ್ದು. ಎಲ್​ಹೆಚ್​ ಗೇಟ್​ ಮೂಲಕ ತೆರಳಿ ಪಾರ್ಕಿಂಗ್​ ಲಾಟ್​ನ​ಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ : ಸಚಿವ ಸಂಪುಟ ರಚನೆ ಕಸರತ್ತು : ಲಿಂಗಾಯತ - ದಲಿತರಿಗೆ ಸಿಂಹಪಾಲು, ಒಕ್ಕಲಿಗರಿಗೆ ಕೇವಲ ನಾಲ್ಕು ಸ್ಥಾನ!

ವಿಶೇಷ ಆಹ್ವಾನಿತರಿಗೆ ಪಾರ್ಕಿಂಗ್​ ವ್ಯವಸ್ಥೆ : ಕಾರ್ಯಕ್ರಮಕ್ಕೆ ಬರುವ ವಿಶೇಷ ಆಹ್ವಾನಿತರಿಗೆ ವಿಧಾನಸೌಧದಲ್ಲಿ ಪಾರ್ಕಿಂಗ್​ ವ್ಯವಸ್ಥೆ ಕಲ್ಪಿಸಲಾಗಿದೆ. ನೆಹರೂ ತಾರಾಲಯ, ಎಂ.ಎಸ್.ಬಿಲ್ಡಿಂಗ್ ಒಳಭಾಗದಲ್ಲಿ ವಿಧಾನಸೌಧದ ಪಶ್ಚಿಮ ದ್ವಾರ, ಉತ್ತರ ದ್ವಾರದ ಮುಂದಿನ ರಸ್ತೆ ವಿಕಾಸಸೌಧದ ಸೆಲ್ಲಾರ್​ನಲ್ಲಿ ಗಣ್ಯರ ವಾಹನಗಳ ಪಾರ್ಕಿಂಗ್​ಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ಇನ್ನು ನೂತನ ಸಚಿವರ ಪ್ರಮಾಣವಚನ ಸಮಾರಂಭ ಇಂದು ಬೆಳಗ್ಗೆ 11.45ಕ್ಕೆ ರಾಜಭವನದಲ್ಲಿ ನಡೆಯಲಿದೆ. ಪ್ರಮಾಣವಚನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ರಾಜಭವನಕ್ಕೆ ಶುಕ್ರವಾರ ಮಧ್ಯಾಹ್ನವೇ ಮುಖ್ಯಮಂತ್ರಿ ಸಚಿವಾಲಯ ಸಂದೇಶ ರವಾನಿಸಿತ್ತು.

ಇದನ್ನೂ ಓದಿ : ಸಾಮಾಜಿಕ ನ್ಯಾಯ ಪಾಲಿಸಿದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ : ಸಚಿವ ಸಂಪುಟದಲ್ಲಿ ಎಲ್ಲ ಸಮುದಾಯಕ್ಕೂ ಪ್ರಾತಿನಿಧ್ಯ..

ETV Bharat Logo

Copyright © 2025 Ushodaya Enterprises Pvt. Ltd., All Rights Reserved.