ETV Bharat / state

ಸಲಾಂ ಆರತಿ, ದೀವಟಿಕೆ ಸಲಾಂ ಸೇವಾ ಕಾರ್ಯಗಳ ಹೆಸರು ಬದಲಾವಣೆಗೆ ನಿರ್ಧಾರ: ಸಚಿವೆ ಶಶಿಕಲಾ ಜೊಲ್ಲೆ

ನಮ್ಮ ಸಂಪ್ರದಾಯದ ಹೆಸರನ್ನು ನೀಡುವ ಬಗ್ಗೆ ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ ವಿಸ್ತ್ರುತವಾಗಿ ಚರ್ಚಿಸಲಾಗಿದೆ. ಈ ಪೂಜಾಕಾರ್ಯಗಳ ಹೆಸರನ್ನು ನಮ್ಮ ಸ್ಥಳೀಯ ಭಾಷೆಯ ಪದಗಳಿಗೆ ಬದಲಿಸುವ ಬಗ್ಗೆ ಮಾತ್ರ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

Minister Sasikala Jolle
ಸಚಿವೆ ಶಶಿಕಲಾ ಜೊಲ್ಲೆ
author img

By

Published : Dec 10, 2022, 3:04 PM IST

Updated : Dec 10, 2022, 3:57 PM IST

ಬೆಂಗಳೂರು: ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ರೂಢಿಯಾಗಿ ಬಂದಿರುವ "ದೀವಟಿಗೆ ಸಲಾಂ” “ಸಲಾಂ ಆರತಿ” ಮತ್ತು “ಸಲಾಂ ಮಂಗಳಾರತಿ” ಎಂಬ ಪೂಜಾಕಾರ್ಯಗಳ ಹೆಸರನ್ನು ಬದಲಾಯಿಸಲು ನಿರ್ಧರಿಸಲಾಗಿದೆ ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನಮ್ಮ ಸಂಪ್ರದಾಯದ ಹೆಸರನ್ನು ನೀಡುವ ಬಗ್ಗೆ ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ ವಿಸ್ತೃತವಾಗಿ ಚರ್ಚಿಸಲಾಗಿದೆ. ಈ ಪೂಜಾಕಾರ್ಯಗಳ ಹೆಸರನ್ನು ನಮ್ಮ ಸ್ಥಳೀಯ ಭಾಷೆಯ ಪದಗಳಿಗೆ ಬದಲಿಸುವ ಬಗ್ಗೆ ಮಾತ್ರ ನಿರ್ಧಾರ ಕೈಗೊಳ್ಳಲಾಗಿದೆ.

ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ಕೆಲವು ದೇವಾಲಯಗಳಲ್ಲಿ ಬೆಳಗ್ಗೆ, ಮಧ್ಯಾಹ್ನ ಮತ್ತು ಸಂಜೆಯ ಸಂದರ್ಭಗಳಲ್ಲಿ ದೀವಟಿಗೆ ಹಿಡಿದು ದೇವಾಲಯಕ್ಕೆ ಮತ್ತು ದೇವರಿಗೆ ಆರತಿಯಂತೆ ನಡೆಸುವ ಕಾರ್ಯಕ್ಕೆ ದೀವಟಿಗೆ ಸಲಾಂ, ಸಲಾಂ ಮಂಗಳಾರತಿ ಮತ್ತು ಸಲಾಂ ಆರತಿ ಎಂದು ಕೆಲವು ದೇವಾಲಯಗಳಲ್ಲಿ ಕರೆಯಲಾಗುತ್ತಿದೆ. ಇದನ್ನು ಬದಲಾಯಿಸಬೇಕು ಎನ್ನುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಕ್ತಾದಿಗಳಿಂದ ಸಾಕಷ್ಟು ಒತ್ತಾಯ ಇರುವ ಬಗ್ಗೆ, ಧಾರ್ಮಿಕ ಪರಿಷತ್ತಿನ ಸದಸ್ಯರು ಸಭೆಯ ಗಮನಕ್ಕೆ ತಂದರು. ಇದರ ಹಿನ್ನೆಲೆಯಲ್ಲಿ ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ ವಿಸ್ತೃತ ಚರ್ಚೆಯನ್ನು ನಡೆಸಲಾಗಿದೆ ಎಂದಿದ್ದಾರೆ.

ಈ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಹಿರಿಯ ಆಗಮ ಪಂಡಿತರ ಅಭಿಪ್ರಾಯದಂತೆ ದೇವಾಲಯಗಳಲ್ಲಿ ಇನ್ನು ಮುಂದೆ “ದೀವಟಿಗೆ ಸಲಾಂ” ಎಂಬ ಪದದ ಬದಲಾಗಿ “ದೀವಟಿಗೆ ನಮಸ್ಕಾರ” ಎಂದು, “ಸಲಾಂ ಆರತಿ” ಎಂಬ ಪದದ ಬದಲಾಗಿ “ಆರತಿ ನಮಸ್ಕಾರ” ಎಂದು ಹಾಗೂ ʼಸಲಾಂ ಮಂಗಳಾರತಿ” ಎಂಬ ಪದದ ಬದಲಾಗಿ “ಮಂಗಳಾರತಿ ನಮಸ್ಕಾರ” ಎಂದು ಹೆಸರನ್ನು ಬದಲಾಯಿಸಿಕೊಂಡು ಸೇವೆಗಳನ್ನು ಮತ್ತು ಸೇವಾ ಕಾರ್ಯಗಳನ್ನು ಮುಂದುವರೆಸಲು ಸುತ್ತೋಲೆ ಹೊರಡಿಸಲು ನಿರ್ಧರಿಸಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಕೇವಲ ಬೇರೆ ಭಾಷೆಯ ಪದಗಳನ್ನು ಬದಲಾಯಿಸಿ, ನಮ್ಮ ಭಾಷೆಯ ಪದವನ್ನು ಅಳವಡಿಸಿ ಈ ಹಿಂದಿನಿಂದ ನಡೆದುಕೊಂಡು ಬಂದಿರುವ ಸಂಪ್ರದಾಯವನ್ನು ಮತ್ತು ಪೂಜೆಗಳನ್ನು ಮುಂದುವರೆಸಲಾಗುವುದು. ಪೂಜಾ ಕಾರ್ಯಗಳನ್ನು ರದ್ದುಪಡಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಎಲ್ಲೆಲ್ಲಿ ಸಲಾಂ ಆರತಿ: ಪ್ರಮುಖ ಮುಜರಾಯಿ ವ್ಯಾಪ್ತಿಗೆ ಬರುವ ದೇವಾಲಯಗಳಾದ ಮಂಡ್ಯ ಜಿಲ್ಲೆಯ ಮೇಲುಕೋಟೆಯ ಚಲುವ ನಾರಾಯಣಸ್ವಾಮಿ ದೇವಾಲಯ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಕೊಲ್ಲೂರು ಮೂಕಾಂಬಿಕಾ ದೇವಾಸ್ಥಾನ ಹಾಗೂ ಪುತ್ತೂರಿನ ಮಹಾಲಿಂಗೇಶ್ವರ ದೇವಾಲಯಗಳಲ್ಲಿ 'ಸಲಾಂ ಆರತಿ' ಪೂಜೆ ನಡೆಸಲಾಗುತ್ತಿತ್ತು.

ಆಡಿಟ್‌ ಹೊಣೆ ಖಾಸಗಿ ಸಂಸ್ಥೆಗಳಿಗೆ ವಹಿಸಲಾಗಿಲ್ಲ: ರಾಜ್ಯ ಹಿಂದೂ ಧಾರ್ಮಿಕ ಹಾಗೂ ಧರ್ಮದಾಯ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವಂತಹ ಎ ಮತ್ತು ಬಿ ವರ್ಗದ ದೇವಸ್ಥಾನಗಳು ಪ್ರತಿವರ್ಷ ಆಡಿಟ್‌ ಮಾಡಿಸುವುದು ಕಡ್ಡಾಯ. ಆದರೆ, ಹಲವಾರು ದೇವಸ್ಥಾನಗಳಲ್ಲಿ ಹಲವಾರು ವರ್ಷಗಳಿಂದ ಆಡಿಟ್‌ ಮಾಡಿಸಿರಲಿಲ್ಲ. ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಜವಾಬ್ದಾರಿ ತಗೆದುಕೊಂಡ ನಂತರ ದೇವಸ್ಥಾನಗಳ ಆಡಳಿತದಲ್ಲಿ, ಭಕ್ತರು ನೀಡುವ ಕಾಣಿಕೆಯ ಬಳಕೆಯ ಪಾರದರ್ಶಕತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆಡಿಟ್‌ ವರದಿಯನ್ನು ಆಯಾ ವರ್ಷವೇ ಸಲ್ಲಿಸುವುದರ ಬಗ್ಗೆ ಕಟ್ಟುನಿಟ್ಟು ಆದೇಶ ನೀಡಲಾಗಿತ್ತು. ದೇವಸ್ಥಾನಗಳು ತಮ್ಮ ಆಡಿಟ್‌ ವರದಿಯನ್ನು ಸರ್ಕಾರಿ ಲೆಕ್ಕಪತ್ರ ಇಲಾಖೆಯಿಂದಲೇ ಆಡಿಟ್‌ ಮಾಡಿಸಿ ವರದಿ ಸಲ್ಲಿಸಿದ್ದಾರೆ. ಖಾಸಗಿ ಸಂಸ್ಥೆಗಳಿಗೆ ಆಡಿಟ್‌ ಹೊಣೆಯನ್ನು ನೀಡಲಾಗಿದೆ ಎನ್ನುವ ಕೆಲವರ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಏಕದಿನ ಪಂದ್ಯದಲ್ಲಿ ಇಶಾನ್ ಕಿಶನ್ ವಿಶ್ವದಾಖಲೆಯ ದ್ವಿಶತಕ!

Last Updated : Dec 10, 2022, 3:57 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.