ETV Bharat / state

ದೇಶದ ಹೆಸರು ಬದಲಾವಣೆಗಿಂತ ಜನರ ಬದುಕು ಬದಲಾವಣೆ ಮುಖ್ಯ: ಡಿಸಿಎಂ ಡಿ.ಕೆ.ಶಿವಕುಮಾರ್

author img

By ETV Bharat Karnataka Team

Published : Sep 6, 2023, 3:29 PM IST

ನಾನು ಭಾರತೀಯ ಹಾಗೂ ಹಿಂದೂವಾಗಿದ್ದಕ್ಕೆ ಹೆಮ್ಮೆ ಪಡುವೆ ಎಂದು ಡಿಸಿಎಂ ಡಿಕೆ ಶಿವಕುಮಾರ್​ ಹೇಳಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್
ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: "ದೇಶದ ಹೆಸರು ಬದಲಾವಣೆ ಮಾಡಿದರೆ ಏನು ಲಾಭ. ದೇಶದ ಜನರ ಜೀವನದಲ್ಲಿ ಬದಲಾವಣೆ ಆಗುವುದು ಮುಖ್ಯ" ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ದೇಶದ ಹೆಸರನ್ನು ಇಂಡಿಯಾ ಬದಲು ಭಾರತ ಎಂದು ಬದಲಿಸುವ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, "ದೇಶದ ಎಲ್ಲ ಜನರಿಗೂ ಅನ್ನ, ಉದ್ಯೋಗ, ಮನೆ ಸಿಕ್ಕರೆ ಅದನ್ನು ಬದಲಾವಣೆ ಎನ್ನಬಹುದು. ಕಳೆದ 9 ವರ್ಷಗಳಲ್ಲಿ ಜನರ ಆದಾಯ ದುಪಟ್ಟಾಯಿತೇ, 15 ಲಕ್ಷ ಹಣ ಬ್ಯಾಂಕ್ ಖಾತೆಗೆ ಬಂದಿದೆಯೇ? ಇಲ್ಲ. ಒಂದೇ ಒಂದು ಅಕ್ಕಿಕಾಳು ಕಡಿಮೆ ಕೊಟ್ಟರು ಬಿಡುವುದಿಲ್ಲ ಎಂದು ಬಿಜೆಪಿಯವರು ನಮ್ಮನ್ನು ಪ್ರಶ್ನೆ ಮಾಡುತ್ತಿದ್ದರು, ಆದರೆ ಅವರು ಕೊಟ್ಟ ಮಾತನ್ನು ಒಂದಾದರೂ ಉಳಿಸಿಕೊಂಡಿದ್ದಾರೆಯೇ? ಎಂದು ಪ್ರಶ್ನಿಸಿದರು.

ಶ್ರೀಮಂತರು, ದೊಡ್ಡ ಉದ್ಯಮಿಗಳು ದೇಶಬಿಟ್ಟು ಹೋಗುತ್ತಿದ್ದಾರೆ. 12 ಲಕ್ಷ ಪಾಸ್​​​​​ಪೋರ್ಟ್​​ಗಳನ್ನು ಸರ್ಕಾರದ ವಶಕ್ಕೆ ನೀಡಿ ಈ ದೇಶದ ಕೋಟ್ಯಧಿಪತಿಗಳು ಬೇರೆ ದೇಶದ ಪೌರತ್ವ ತೆಗೆದುಕೊಂಡಿದ್ದಾರೆ. ನಮ್ಮ ದೇಶದ ಹಣ ಹೊರಗಡೆ ಹೋಗುತ್ತಿದೆ. ಹೆಸರು ಬದಲಾವಣೆಯಿಂದ ಏನೂ ಲಾಭವಿಲ್ಲ. ನಮ್ಮ ಆಚಾರ-ವಿಚಾರ ಬದಲಾವಣೆಯಾಗಬೇಕು ಎಂದರು. ಸರ್ಕಾರ ಜನರ ಕಲ್ಯಾಣ ಮಾಡುವ ಹೊಸ ಕಾನೂನುಗಳನ್ನು ತರಬೇಕು. ನಮ್ಮ ಯುಪಿಎ ಸರ್ಕಾರ ಇದ್ದಾಗ ಮಾಹಿತಿಹಕ್ಕು, ಆರ್ಟಿಐ, ನರೇಗಾ, ಆಹಾರ ಭದ್ರತಾ ಕಾಯ್ದೆಗಳನ್ನು ಜಾರಿಗೆ ತಂದೆವು, ಇಂತಹ ಯೋಚನೆಗಳು ಬಿಜೆಪಿಯವರಿಗೆ ಬರುವುದಿಲ್ಲವೇ?” ಎಂದು ತಿರುಗೇಟು ನೀಡಿದರು.

ಗೃಹ ಸಚಿವರಾದ ಪರಮೇಶ್ವರ್ ಅವರು ಹಿಂದೂ ಧರ್ಮಕ್ಕೆ ಅಪ್ಪ- ಅಮ್ಮ ಯಾರು ಇಲ್ಲ ಎಂದು ಹೇಳಿದ್ದಾರೆ ಎನ್ನುವ ಪ್ರಶ್ನೆಗೆ "ನಾನು ಭಾರತೀಯ ಹಾಗೂ ಹಿಂದೂವಾಗಿರುವುದ್ದಕ್ಕೆ ಹೆಮ್ಮೆ ಪಡುತ್ತೇನೆ" ಎಂದು ತಿಳಿಸಿದರು. ಇನ್ನು ಕಾವೇರಿ ನೀರಿನ ವಿಚಾರವಾಗಿ ತಮಿಳುನಾಡಿನ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿರುವ ಬಗ್ಗೆ ಕೇಳಿದಾಗ, "ಕಾವೇರಿ ನೀರಿನ ವಿಚಾರವಾಗಿ ನಡೆಯುತ್ತಿರುವ ವಿಚಾರಣೆಯ ಜೂಮ್ ಲಿಂಕ್ ಅನ್ನು ನನಗೆ ಕಳುಹಿಸಿದ್ದರು. ನಾನು ವಿಚಾರಣೆ ನೋಡಲು ಕಾಯುತ್ತಿದೆ. ಆದರೆ ವಿಚಾರಣೆಯನ್ನು ಸುಪ್ರೀಂಕೋರ್ಟಿನವರು ಮುಂದಕ್ಕೆ ಹಾಕಿದ್ದಾರೆ. ಕಳೆದೆರಡು ದಿನಗಳಲ್ಲಿ ಮಳೆ ಬರುತ್ತದೆ ಎಂದು ನಾವು ನಿರೀಕ್ಷಿಸಿದ್ದೆವು, ಮಳೆಯಾಗಿಲ್ಲ. ಹೀಗಾಗಿ ನಾವು ಮತ್ತೆ ಕಾಯಬೇಕು" ಎಂದು ತಿಳಿಸಿದರು.

ದಿನೇಶ್​ ಗುಂಡೂರಾವ್​ ಹೇಳಿಕೆ: ದೇಶವನ್ನು ಭಾರತ ಎಂದು ಕರೆಯುವುದು ನಮ್ಮ ಸಂವಿಧಾನದಲ್ಲೇ ಇದೆ. ಹೀಗಿರುವಾಗ ಬಿಜೆಪಿ ಈಗ ಏಕೆ ಈ ವಿಚಾರವನ್ನ ಚರ್ಚಿಸುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಇಂಡಿಯಾ ಈಸ್ ಭಾರತ್ ಅಂತಾ ದೇಶದ ಸಂವಿಧಾನದಲ್ಲೇ ಹೇಳಲಾಗಿದೆ. ದೇಶವನ್ನ ಭಾರತ ಎಂದು ಕರೆಯಲು ಕಾಂಗ್ರೆಸ್ ವಿರೋಧವಿಲ್ಲ. ಇದು ಹೊಸ ವಿಚಾರವೂ ಅಲ್ಲ. ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಇಂತಹ ಭಾವನಾತ್ಮಕ ವಿಚಾರಗಳನ್ನ ಮುಂದಿಟ್ಟುಕೊಂಡು ರಾಜಕಾರಣ ಮಾಡುತ್ತದೆ ಎಂದು ಹೇಳಿದರು.‌ ದೇಶದ ಹೆಸರಿನ ವಿಚಾರಗಳನ್ನ ಬಿಜೆಪಿ ತನ್ನ ಸ್ವಾರ್ಥ ರಾಜಕಾರಣಕ್ಕೆ ಬಳಸುವುದು ಸರಿಯಲ್ಲ.

ದೇಶದ ಮುಂದೆ ಸಾವಿರಾರು ಸಮಸ್ಯೆಗಳಿವೆ. ಆ ಸಮಸ್ಯೆಗಳನ್ನ ಎಷ್ಟರ ಮಟ್ಟಿಗೆ ಕೇಂದ್ರ ಬಿಜೆಪಿ ಸರ್ಕಾರ ಪರಿಹರಿಸಿದೆ ಎಂದು ಚರ್ಚಿಸಲಿ. ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 9 ವರ್ಷಗಳಾಯ್ತು. ಇಂಡಿಯಾವನ್ನ ಭಾರತ ಅಂತಾ ಮರುನಾಮಕರಣ ಮಾಡಬೇಕು ಎಂಬುದರ ಬಗ್ಗೆ 9 ವರ್ಷಗಳಲ್ಲಿ ಒಂದು ಚಕಾರ್ ಎತ್ತಲಿಲ್ಲ. ಈಗ ಲೋಕಸಭೆ ಚುನಾವಣೆ ಹತ್ತಿರವಾಗುತ್ತಿರುವಾಗ ಈ ವಿಚಾರವನ್ನು ಬಿಜೆಪಿ ಚರ್ಚಿಸುತ್ತಿದೆ. ಉರ್ದುವಿನಲ್ಲಿ ಹಿಂದೂಸ್ತಾನ ಎಂದು ಕರೆಯುತ್ತಾರೆ. ಕಾಂಗ್ರೆಸ್ ಮಿತ್ರ ಪಕ್ಷಗಳು INDIA ಎಂಬ ಹೆಸರಿನಲ್ಲಿ ಮೈತ್ರಿ ಮಾಡಿಕೊಂಡಿರುವುದು ಬಿಜೆಪಿಗೆ ಭಯ ಶುರುವಾಗಿದೆ. ಇಂಡಿಯಾ ಹೆಸರಲ್ಲಿ ಕಾಂಗ್ರೆಸ್ ಮಿತ್ರ ಪಕ್ಷಗಳು ಒಂದಾಗಿರೋದನ್ನ ಸಂದರ್ಭದಲ್ಲೇ ಬಿಜೆಪಿ ಭಾರತ ಎಂದು ಮರುನಾಮಕರಣ ಮಾಡಲು ಹೊರಟಿರುವುದರ ಹಿಂದಿನ ಅಜೇಂಡಾ ಜನರಿಗೆ ಅರ್ಥವಾಗಲಿದೆ ಎಂದರು.

ಉದಯನಿಧಿ ಸ್ಟಾಲಿನ್ ಹೇಳಿಕೆ ಅವರ ವೈಯುಕ್ತಿಕ ಅಭಿಪ್ರಾಯ : ಉದಯನಿಧಿ ಸ್ಟಾಲಿನ್ ಅವರು ತಮ್ಮ ವೈಯುಕ್ತಿಕ ಅಭಿಪ್ರಾಯ ಹೇಳಿದ್ದಾರೆ. ಅವರೊಬ್ಬರೇ ಅಲ್ಲ. ಸನಾತನ ಪರಂಪರೆಯಲ್ಲಿ ಕೆಲವು ಆಚರಣೆಗಳನ್ನ ವಿರೋಧಿಸಿ ಹಲವು ಪ್ರಗತಿಪರರು ಹೋರಾಟ ಮಾಡಿದವರು ಇದ್ದಾರೆ. ಅಸ್ಪೃಶ್ಯತೆ ವಿರುದ್ಧ ಹೋರಾಟ ಮಾಡಿದವರೆಲ್ಲ ಸನಾತನದ ವಿರೋಧಿಗಳೇ ಆಗಿದ್ದರು. ಈಗ ಉದಯನಿಧಿ ಅವರ ಹೇಳಿಕೆಯನ್ನೇ ವೈಭವೀಕರಿಸುವ ಅಗತ್ಯವಿಲ್ಲ ಎಂದರು.

ಇದನ್ನೂ ಓದಿ: Sanatana Dharma Row; ಉದಯನಿಧಿ ಸ್ಟಾಲಿನ್ ವಿರುದ್ಧ ಶ್ರೀರಾಮಸೇನೆಯಿಂದ ದೂರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.