ETV Bharat / state

ನಾದಬ್ರಹ್ಮ ಹಂಸಲೇಖಗೆ ಎದೆನೋವು: ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ

author img

By

Published : Oct 10, 2022, 1:37 PM IST

ಗ್ಯಾಸ್ಟ್ರಿಕ್​​ ಸಮಸ್ಯೆಯಿಂದಾಗಿ ಹಂಸಲೇಖ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಅವರು ರಾಜಾಜಿನಗರ ಫಸ್ಟ್ ಬ್ಲಾಕ್ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಾದಬ್ರಹ್ಮ ಹಂಸಲೇಖ
ನಾದಬ್ರಹ್ಮ ಹಂಸಲೇಖ

ಬೆಂಗಳೂರು: ನಾದಬ್ರಹ್ಮ ಹಂಸಲೇಖ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ ಏನು ತೊಂದರೆ ಇಲ್ಲ. ಗ್ಯಾಸ್ಟ್ರಿಕ್​​​​ ಸಮಸ್ಯೆಯಿಂದಾಗಿ ಅವರಿಗೆ ಎದೆನೋವು ಕಾಣಿಸಿಕೊಂಡಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಈ ಹಿಂದೆ ಓಪನ್ ಹಾರ್ಟ್ ಸರ್ಜರಿಯನ್ನು ಹಂಸಲೇಖ ಮಾಡಿಸಿಕೊಂಡಿದ್ದರು. ಸದ್ಯ ರಾಜಾಜಿನಗರ ಫಸ್ಟ್ ಬ್ಲಾಕ್ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜನರಲ್ ವಾರ್ಡ್​ನಲ್ಲೇ ಒಂದು ದಿನ ರೆಸ್ಟ್ ಮಾಡುವಂತೆ ವೈದ್ಯರು ಸೂಚಿಸಿದ್ದಾರೆ. ಹಾಗಾಗಿ ವೈದ್ಯರ ಸಲಹೆ ಮೇರೆಗೆ ಒಂದು ದಿನದ ಮಟ್ಟಿಗೆ ಆಸ್ಪತ್ರೆಯಲ್ಲಿ ಹಂಸಲೇಖ ಉಳಿಯಲಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.