ETV Bharat / state

ಫ್ಯಾಟ್ ಸರ್ಜರಿಗಾಗಿ ಚಿನ್ನಾಭರಣ ಅಡವಿಟ್ಟು ಪ್ರಾಣ ಕಳೆದುಕೊಂಡ ಚೇತನಾ ರಾಜ್ - ಕಿರುತೆರೆ ನಟಿ ಚೇತನಾ ರಾಜ್ ಸಾವು ಪ್ರಕರಣ

ಕಿರುತೆರೆ ನಟಿ ಚೇತನಾ ರಾಜ್ ಸಾವಿಗೆ ಸಂಬಂಧಿಸಿದಂತೆ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡಿರುವ ಸುಬ್ರಮಣ್ಯನಗರ ಪೊಲೀಸರು ಆಕೆಯ ಆಪ್ತ ವಲಯದಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ. ಯುವ ನಟಿ ಫ್ಯಾಟ್ ಸರ್ಜರಿ ವೆಚ್ಚ ಭರಿಸಲು ಮೈಮೇಲಿದ್ದ ಚಿನ್ನಾಭರಣಗಳನ್ನು ಅಡವಿಟ್ಟಿದ್ದರು ಎಂಬುದು ವಿಚಾರಣೆ ವೇಳೆ ತಿಳಿದು ಬಂದಿದೆ.

ಚೇತನಾ ರಾಜ್
ಚೇತನಾ ರಾಜ್
author img

By

Published : May 19, 2022, 2:01 PM IST

ಬೆಂಗಳೂರು : ಕಿರುತೆರೆ ನಟಿ ಚೇತನಾ ರಾಜ್ ಸಾವು ಪ್ರಕರಣದ ಕುರಿತು ಈಗಾಗಲೇ ತನಿಖೆ ಚುರುಕುಗೊಂಡಿದೆ. ಯುವ ನಟಿ ಫ್ಯಾಟ್ ಸರ್ಜರಿ ವೆಚ್ಚ ಭರಿಸಲು ತನ್ನ ಮೈಮೇಲಿದ್ದ ಚಿನ್ನಾಭರಣಗಳನ್ನು ಅಡವಿಟ್ಟಿದ್ದರು ಎಂಬ ವಿಚಾರ ಆಕೆಯ ಸ್ನೇಹಿತರ ವಿಚಾರಣೆ ವೇಳೆ ತಿಳಿದುಬಂದಿದೆ.

ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡಿರುವ ಸುಬ್ರಮಣ್ಯನಗರ ಪೊಲೀಸರು ಚೇತನಾಳ ಆಪ್ತ ವಲಯದಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ. ಟ್ರೈನರ್ ಸಲಹೆಯಂತೆ ಚೇತನಾ ರಾಜ್ ಫ್ಯಾಟ್ ಸರ್ಜರಿ ಮಾಡಿಸಿಕೊಳ್ಳಲು ನಿರ್ಧರಿಸಿದ್ದರು. ಇದಕ್ಕೆ ಮನೆಯವರು ವಿರೋಧ ವ್ಯಕ್ತಪಡಿಸಿದ್ದರಿಂದ ತನ್ನ ಬಳಿಯಿದ್ದ ಚಿನ್ನಾಭರಣ ಅಡವಿಟ್ಟು 80 ಸಾವಿರ ರೂಪಾಯಿ ಪಡೆದುಕೊಂಡಿದ್ದ ಯುವನಟಿ, ಅದೇ ಹಣವನ್ನ ಡಾ.ಶೆಟ್ಟಿ ಕಾಸ್ಮೆಟಿಕ್​ನಲ್ಲಿ ಪಾವತಿಸಿದ್ದರು ಎಂಬ ವಿಚಾರ ಬಯಲಾಗಿದೆ.

ಚೇತನಾ ರಾಜ್
ಚೇತನಾ ರಾಜ್

ಮತ್ತೊಂದೆಡೆ, ತಾಲೂಕು ವೈದ್ಯಾಧಿಕಾರಿಗಳ ಕಚೇರಿಯಿಂದ ಡಾ.ಶೆಟ್ಟಿ ಕಾಸ್ಮೆಟಿಕ್ ಸೆಂಟರ್​ಗೆ ನೋಟಿಸ್ ಜಾರಿಯಾಗಿದೆ. ಚೇತನಾ ಸಾವಿಗೆ ಸಂಬಂಧಿಸಿದಂತೆ ಸೂಕ್ತ ದಾಖಲೆಗಳ ಸಮೇತ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಸುಬ್ರಹ್ಮಣ್ಯ ನಗರ ಠಾಣಾ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.

ಇದನ್ನೂ ಓದಿ: ನಟಿ ಚೇತನಾ ರಾಜ್ ಸಾವು: ಡಾ.ಶೆಟ್ಟಿ ಕಾಸ್ಮೆಟಿಕ್ ಸೆಂಟರ್​ಗೆ ಆರೋಗ್ಯ ಇಲಾಖೆ ನೋಟಿಸ್‌

ETV Bharat Logo

Copyright © 2024 Ushodaya Enterprises Pvt. Ltd., All Rights Reserved.