ETV Bharat / state

ಆಮಿಷ ಒಡ್ಡುವ ರಾಜಕೀಯ ಪಕ್ಷಗಳ ವಿರುದ್ದ ಕಟ್ಟುನಿಟ್ಟಿನ ಕ್ರಮ ವಹಿಸಿ: ಮುಖ್ಯ ಚುನಾವಣಾಧಿಕಾರಿ - ಬೆಂಗಳೂರಿನಲ್ಲಿ ಚುನಾವಣೆ ಸಭೆ

ವಿಧಾನಸಭೆ ಚುನಾವಣೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಇಂದು ವಿವಿಧ ಇಲಾಖೆ ಅಧಿಕಾರಿಗಳ ಜೊತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಸಭೆ ನಡೆಸಿದರು.

chief-electoral-office
ಮನೋಜ್ ಕುಮಾರ್ ಮೀನಾ
author img

By

Published : Feb 2, 2023, 10:37 PM IST

Updated : Feb 2, 2023, 10:50 PM IST

ಬೆಂಗಳೂರು: ರಾಜ್ಯ ಚುನಾವಣೆ ಹೊಸ್ತಿಲಲ್ಲಿದ್ದು ಚುನಾವಣಾ ಆಯೋಗ ರಾಜಕೀಯ ಪಕ್ಷಗಳ ಮೇಲೆ ನಿಗಾ ಇಡಲು ಪ್ರಾರಂಭಿಸಿದೆ. ಜನಸಾಮಾನ್ಯರಿಗೆ ವಿವಿಧ ರೀತಿಯ ಉಚಿತ ಉಡುಗೊರೆ, ಆಮಿಷಗಳನ್ನು ಒಡ್ಡುತ್ತಿರುವ ವಿವಿಧ ರಾಜಕೀಯ ಪಕ್ಷಗಳ ಮೇಲೆ ಕ್ರಮ ವಹಿಸುವಂತೆ ಸೂಚನೆ ನೀಡಲಾಗಿದೆ. ಚುನಾವಣೆಯ ಪೂರ್ವ ಸಿದ್ದತೆಯ ಕುರಿತು ಇಂದು ಮುಖ್ಯ ಚುನಾವಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯಮಟ್ಟದ ಅಧಿಕಾರಿಗಳು ಮತ್ತು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಮುಖ್ಯಸ್ಥರ ಸಭೆಯಲ್ಲಿ ಮಹತ್ವದ ನಿರ್ದೇಶನಗಳನ್ನು ನೀಡಲಾಗಿದೆ. ವಿವಿಧ ಪಕ್ಷಗಳು ಆಮಿಷ ಒಡ್ಡುತ್ತಿರುವುದು ಮಾಧ್ಯಮಗಳ ಮೂಲಕ ಕಂಡು ಬಂದಿರುವುದರಿಂದ, ಈ ಕುರಿತಂತೆ ಸಂಬಂಧಪಟ್ಟ ಇಲಾಖೆ ನಿಯಮಗಳಂತೆ ಕ್ರಮವಹಿಸಿ, ಕಾನೂನು ಉಲ್ಲಂಘಿಸಿದವರ ವಿರುದ್ದ ಕಟ್ಟುನಿಟ್ಟಿನ ಕ್ರಮ ತೆಗದುಕೊಳ್ಳುವಂತೆ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ರಾಜ್ಯದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಂತರರಾಜ್ಯ ಚೆಕ್ ಪೋಸ್ಟ್: ಸಭೆಯಲ್ಲಿ ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಕುರಿತು ಪೂರ್ವಸಿದ್ದತೆ ಮಾಡಿಕೊಳ್ಳುವಂತೆ ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿ ತಿಳಿಸಿದರು. ಮತದಾರರಿಗೆ ಮದ್ಯಪಾನ ಸೇರಿದಂತೆ ವಿವಿಧ ರೀತಿಯ ಉಡುಗೂರೆಗಳ ಕೂಪನ್‍ಗಳ ಮೂಲಕ ವಿತರಿಸುತ್ತಿರುವ ಬಗ್ಗೆ ಸಹ ಮಾಧ್ಯಮಗಳ ಮೂಲಕ ವರದಿಯಾಗುತ್ತಿದೆ. ಕಳೆದ ವರ್ಷ ಈ ಸಮಯದಲ್ಲಿ ಮಾರಾಟವಾದ ಮದ್ಯ ಹಾಗೂ ಪ್ರಸ್ತುತ ಈಗ ಮಾರಾಟವಾಗುತ್ತಿರುವ ಮದ್ಯ ಕುರಿತಂತೆ ಅಬಕಾರಿ ಇಲಾಖೆ ಕಟ್ಟುನಿಟ್ಟಿನ ನಿಗಾವಹಿಸಬೇಕು. ಅಂತರರಾಜ್ಯ ಚೆಕ್ ಪೋಸ್ಟ್‌ಗಳನ್ನು ತೆರೆಯುವಂತೆ ಹೇಳಿದರು.

ಸಮಾಜದಲ್ಲಿ ನಡೆಯುತ್ತಿರುವ ಆಮಿಷಗಳ ಕುರಿತಂತೆ ಸಂಬಂಧಿತ ಇಲಾಖೆಗಳು ತಮ್ಮಲ್ಲಿರುವ ಮಾಹಿತಿಯನ್ನು ಅಂತರ್ ಇಲಾಖಾ ಮಟ್ಟದಲ್ಲಿ ಹಂಚಿಕೊಳ್ಳುವ ಮೂಲಕ ಸುಗಮ ಚುನಾವಣೆಗೆ ಎಲ್ಲರೂ ಕರ್ತವ್ಯ ನಿರ್ವಹಿಸಬೇಕು. ವಿವಿಧ ಇಲಾಖೆಗಳ ಮೂಲಕ ಸ್ವೀಕರಿಸಲಾಗುವ ನೋಂದಾಯಿತ ಪ್ರಕರಣಗಳ ಕುರಿತು ಜಾರಿ ನಿರ್ದೇಶನಾಲಯ ಕ್ರಮ ಕೈಗೊಳ್ಳಲಿದೆ. ಹಣ ಮತ್ತು ಬಂಗಾರದಂತಹ ಬೆಲೆ ಬಾಳುವ ವಸ್ತುಗಳ ಸಾಗಣಿಕೆ ಮೇಲೆ ನಿಗಾವಹಿಸಬೇಕು. ಮಾದಕ ವಸ್ತುಗಳ ಸಾಗಣಿಕೆ, ಮಾರಾಟದ ಮೇಲೆ ಕಣ್ಣಿಡಬೇಕು. ಇದಕ್ಕೆ ಸಂಬಂಧಿಸಿದಂತೆ ರೈಲು, ಬಂದರು ಹಾಗೂ ವಿಮಾನ ನಿಲ್ದಾಣಗಳಲ್ಲಿ ಇದಕ್ಕಾಗಿ ವಿಶೇಷ ನೂಡಲ್ ಅಧಿಕಾರಿಗಳನ್ನು ನಿಯೋಜಿಸಬೇಕು ಎಂದು ನಿರ್ದೇಶನ ಕೊಟ್ಟರು.

ಸಭೆಗಳ ಮೇಲೆ ನಿಗಾ ವಹಿಸಿ: ಹಣದ ರೂಪದಲ್ಲಿ ಮತ್ತು ಡಿಜಿಟಲ್ ಪ್ಲಾಟ್‍ಫಾರ್ಮ್‍ಗಳ ಮೂಲಕ ನಡೆಯುವ ಚಲಾವಣೆಗಳ ಮೇಲೆ ಹೆಚ್ಚಿನ ನಿಗಾವಹಿಸಬೇಕು. ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡು ಬಂದಲ್ಲಿ ತಕ್ಷಣವೇ ಕ್ರಮ ಕೈಗೊಳ್ಳಬೇಕು. ಸಮಾಜಘಾತುಕ ಭಾಷಣ, ಸಮಾಜದ ನೆಮ್ಮದಿ ಕದಡುವ ಹಾಗೂ ದ್ವೇಷವನ್ನು ಹರಡುವ ಮಾತುಗಳು ಮತ್ತು ಅಂತಹ ಸಭೆಗಳ ಮೇಲೆ ಜಾಗರೂಕತೆ ವಹಿಸಬೇಕು. ಆ ರೀತಿಯ ಘಟನೆಗಳು ಕಂಡುಬಂದಲ್ಲಿ ಆಯಾ ವ್ಯಾಪ್ತಿಯ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಭಾರತ ಚುನಾವಣಾ ಆಯೋಗದ ಹಿರಿಯ ಉಪ ಚುನಾವಣಾ ಆಯುಕ್ತರ ಅಧ್ಯಕ್ಷತೆಯಲ್ಲಿ 24.11.2022 ರಂದು ರಾಜ್ಯ ಹಾಗೂ ಕೇಂದ್ರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳ ಕುರಿತು ತೆಗೆದುಕೊಂಡಿರುವ ಕ್ರಮ ಮತ್ತು ವರದಿಯ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಮುಖ್ಯ ಚುನಾವಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಕಾನೂನು ಮತ್ತು ಸುವ್ಯವಸ್ಥೆ), ಆಯುಕ್ತರು ಅಬಕಾರಿ ಇಲಾಖೆ, ಆಯುಕ್ತರು ವಾಣಿಜ್ಯ ತೆರಿಗೆ, ರಾಜ್ಯ ಸರಕು ಮತ್ತು ಸೇವೆ ಇಲಾಖೆ, ಹೆಚ್ಚುವರಿ ನಿರ್ದೇಶಕರು(ತನಿಖೆ), ಆದಾಯ ತೆರಿಗೆ ಇಲಾಖೆ, ಉಪ ಆಯುಕ್ತರು, ಕೇಂದ್ರ ತೆರಿಗೆ ಮತ್ತು ಸುಂಕ ಇಲಾಖೆ, ಹೆಚ್ಚುವರಿ ನಿರ್ದೇಶಕರು, ರೆವಿನ್ಯೂ ಇಂಟಲಿಜೆನ್ಸ್, ಉಪ ನಿರ್ದೇಶಕರು, ಜಾರಿ ನಿರ್ದೇಶನಾಲಯ, ಬೆಂಗಳೂರು ವಲಯ, ವಲಯ ನಿರ್ದೇಶಕರು, ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ, ಡೆಪ್ಯೂಟಿ ಇನ್ಸ್‍ಪೆಕ್ಟರ್ ಜನರಲ್, ಸಿಐಎಸ್‍ಎಫ್, ಸಹಾಯಕ ಭದ್ರತಾ ಆಯುಕ್ತರು, ರೈಲ್ವೆ ಪ್ರೋಟೆಕ್ಷನ್ ಪೋರ್ಸ್, ಜನರಲ್ ಮ್ಯಾನೇಜರ್, ಆರ್‌ ಬಿಐ, ಡಿಜಿಎಂ, ಎಸ್‍ಎಲ್‍ಬಿಸಿ, ಜನರಲ್ ಮ್ಯಾನೇಜರ್, ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ನಿರ್ದೇಶಕರು ಹಾಜರಿದ್ದರು.

ಇದನ್ನೂ ಓದಿ: ಬಜೆಟ್: ರಾಜ್ಯದ ನಿರೀಕ್ಷೆಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ: ಸಿಎಂ ಬೊಮ್ಮಾಯಿ

Last Updated : Feb 2, 2023, 10:50 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.