ETV Bharat / state

ಪಿಎಸ್‌ಐ ಹಗರಣದ ತನಿಖೆ ಕುರಿತ ವಿಚಾರಣೆಯಿಂದ ಹಿಂದೆ ಸರಿದ ಮುಖ್ಯ ನ್ಯಾಯಮೂರ್ತಿ ಅವರಿದ್ದ ಪೀಠ - psi scam case probe

ಪಿಎಸ್‌ಐ ನೇಮಕಾತಿ ಹಗರಣ - ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಮುಖ್ಯ ನ್ಯಾಯಮೂರ್ತಿ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರ ನೇತೃತ್ವದ ಪೀಠ- ಬೇರೆ ಪೀಠದ ಮುಂದೆ ಅರ್ಜಿ ವಿಚಾರಣೆಗೆ ಸೂಚನೆ

ಹೈಕೋರ್ಟ್‌
high court
author img

By

Published : Jan 28, 2023, 6:50 AM IST

ಬೆಂಗಳೂರು: ಪೊಲೀಸ್ ಸಬ್‌ ಇನ್ಸ್​ಪೆಕ್ಟರ್ ನೇಮಕಾತಿ ಹಗರಣ ಸಂಬಂಧ ಈ ವರೆಗೂ ದಾಖಲಾಗಿರುವ ಎಫ್‌ಐಆರ್ ಮತ್ತು ತನಿಖೆಯ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಲು ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಬೇರೊಂದು ಪೀಠದ ಮುಂದೆ ಪಟ್ಟಿ ಮಾಡುವಂತೆ ಮುಖ್ಯ ನ್ಯಾಯಮೂರ್ತಿ ಅವರಿದ್ದ ಪೀಠ ಹೈಕೋರ್ಟ್‌ನ ರಿಜಿಸ್ಟ್ರಾರ್‌ಗೆ ಸೂಚನೆ ನೀಡಿದೆ. ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಸಲ್ಲಿಸಿರುವ ಅರ್ಜಿ ವಿಚಾರಣೆಯು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರ ನೇತೃತ್ವದ ಪೀಠದ ಮುಂದೆ ನಿಗದಿಯಾಗಿತ್ತು. ವಿಚಾರಣೆ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ವರಾಳೆ, ಈ ಪೀಠದ ಮುಂದೆ ವಿಚಾರಣೆ ಬೇಡ. ನಾವಿಬ್ಬರೂ ಇಲ್ಲದಿರುವ ಪೀಠದ ಮುಂದೆ ಅರ್ಜಿ ಪಟ್ಟಿ ಮಾಡಬೇಕು ಎಂದಷ್ಟೇ ಹೇಳಿ ವಿಚಾರಣೆಯಿಂದ ಹಿಂದೆ ಸರಿದರು.

ಅರ್ಜಿದಾರರ ಮನವಿ ಏನು?: ಅರ್ಜಿಯಲ್ಲಿ ಪಿಎಸ್‌ಐ ಹಗರಣಕ್ಕೆ ಸಂಬಂಧಿಸಿದ ಈವರೆಗೆ ವಿವಿಧೆಡೆ ದಾಖಲಾಗಿರುವ ಎಫ್‌ಐಆರ್ ಮತ್ತು ದೂರುಗಳಿಗೆ ಸಂಬಂಧಿಸಿದ ಸಂಪೂರ್ಣ ತನಿಖಾ ದಾಖಲೆಗಳನ್ನು ಸಲ್ಲಿಸಲು ಸಿಐಡಿಗೆ ಆದೇಶಿಸಬೇಕು. ಪ್ರಕರಣದ ತನಿಖೆ ನಡೆಸಿರುವ ಸಿಐಡಿಗೆ ಪೊಲೀಸ್ ನೇಮಕಾತಿ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಮೃತ್ ಪೌಲ್ ಬಂಧನದ ಬಳಿಕದ ಸ್ಥಿತಿಗತಿಯ ಕುರಿತು ಮಾಹಿತಿ ನೀಡಲು ನಿರ್ದೇಶಿಸಬೇಕು. ನ್ಯಾಯಯುತ, ಸ್ವಾತಂತ್ರ ಮತ್ತು ಪಾರದರ್ಶಕವಾಗಿ ತನಿಖೆ ನಡೆಸಲು ರಾಜ್ಯ ಸರ್ಕಾರ ಮತ್ತು ಸಿಐಡಿಗೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಪೊಲೀಸ್ ನೇಮಕಾತಿ ವಿಭಾಗದ ಕೆಲವು ಅಧಿಕಾರಿಗಳು, ರಾಜಕಾರಣಿಗಳ ನೆರವಿನಿಂದ ಅಕ್ರಮ ಮಾರ್ಗದ ಮೂಲಕ ಕೆಲವು ಅಭ್ಯರ್ಥಿಗಳಿಗೆ ಅನುಕೂಲವಾಗಿದ್ದಾರೆ. ಇದರಿಂದ ಪಿಎಸ್‌ಐ ಪರೀಕ್ಷೆಯನ್ನು ಅರ್ಹತೆಯ ಆಧಾರದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಿದ ಅಭ್ಯರ್ಥಿಗಳ ಬದುಕು ಮತ್ತು ವೃತ್ತಿಯು ಅತಂತ್ರಕ್ಕೆ ಸಿಲುಕಿದೆ. ಪರೀಕ್ಷೆ ನಡೆಸುವುದರ ಪ್ರತಿ ಹಂತದ ಕುರಿತು ನೇಮಕಾತಿ ವಿಭಾಗದ ಎಡಿಜಿಪಿ, ನೇಮಕಾತಿ ಸಮಿತಿ ಮತ್ತು ಗೃಹ ಸಚಿವರಿಗೆ ಮಾಹಿತಿ ಇತ್ತು ಎಂಬುದು ತನಿಖೆಯ ಸಂದರ್ಭದಲ್ಲಿ ಬಹಿರಂಗವಾಗಿದೆ. ಅಲ್ಲದೇ, ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದ ಅಭ್ಯರ್ಥಿಗಳು ಅಕ್ರಮ ನಡೆದಿರುವ ಕುರಿತು ದೂರು ನೀಡಿದ್ದಾರೆ. ಸಚಿವ ಸಂಪುಟದ ಸದಸ್ಯರು, ವಿಧಾನ ಪರಿಷತ್ ಸದಸ್ಯರು, ಶಾಸಕರು ಮತ್ತು ಗೃಹ ಸಚಿವರ ವಿರುದ್ಧ ಅಕ್ರಮದ ಆರೋಪ ಮಾಡಲಾಗಿದೆ. ಆದರೂ ಎರಡನೇ ಪ್ರತಿವಾದಿಯಾಗಿರುವ ಗೃಹ ಇಲಾಖೆಯು ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದಿಲ್ಲ ಎಂದು ವಾದಿಸಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಐವರು ಅಭ್ಯರ್ಥಿಗಳು ನೀಡಿರುವ ದೂರನ್ನು ಪರಿಶೀಲಿಸಲಾಗಿದ್ದು, ಯಾವುದೇ ಅಕ್ರಮ ನಡೆದಿಲ್ಲ ಎಂದು 2022ರ ಫೆಬ್ರವರಿ 17 ಮತ್ತು ಮಾರ್ಚ್ 10 ರಂದು ಗೃಹ ಸಚಿವರು ವಿಧಾನಸಭೆಗೆ ತಿಳಿಸಿದ್ದಾರೆ. ಗೃಹ ಸಚಿವರ ಈ ಹೇಳಿಕೆಯ ಹೊರತಾಗಿಯೂ ಸಿಐಡಿ ತನಿಖೆ ನಡೆಸುತ್ತಿದ್ದು, ಇದನ್ನು ಬೃಹತ್ ನೇಮಕಾತಿ ಹಗರಣ ಎಂದು ವ್ಯಾಖ್ಯಾನಿಸಿರುವುದು ಸರಿಯಾಗಿದೆ.

ಇದನ್ನೂ ಓದಿ: ಪಿಎಸ್​ಐ ಅಕ್ರಮ: 'ಕೋರ್ಟ್‌ ತೀರ್ಪಿನ ಬಳಿಕ ಸರ್ಕಾರದ ನಿಲುವು ಪ್ರಕಟ'

ಕಲಬುರಗಿಯ ಚೌಕ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಅದನ್ನು ಸಿಐಡಿಗೆ ವರ್ಗಾಯಿಸಿದ್ದರೂ ಅಭ್ಯರ್ಥಿಗಳು, ಅಧಿಕಾರಿಗಳು ಮತ್ತು ರಾಜಕಾರಣಿಗಳ ನಡುವಿನ ಸಂಬಂಧ ಬಹಿರಂಗಗೊಂಡಿಲ್ಲ. ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಮತ್ತು ಡಿವೈಎಸ್​ಪಿ ಶಾಂತಕುಮಾರ್ ಬಂಧನದ ಬಳಿಕ ಏನಾಗಿದೆ ಎಂದು ಮಾಹಿತಿ ಇಲ್ಲ. ಪ್ರಮುಖ ಆರೋಪಿಯಾಗಿರುವ ದಿವ್ಯಾ ಹಾಗರಗಿ ಅವರು ಗೃಹ ಸಚಿವರೊಂದಿಗೆ ಕಾಣಿಸಿಕೊಂಡಿದ್ದರು ಎಂದು ವರದಿಯಾಗಿದೆ. ಹಗರಣ ಬೆಳಕಿಗೆ ಬಂದು ಐದು ತಿಂಗಳು ಪೂರ್ಣಗೊಂಡರೂ ಸಿಐಡಿಯು ಕೆಲವೇ ಕೆಲವರನ್ನು ಬಂಧಿಸಿದೆ. ಅಧಿಕಾರಿಗಳು, ಅಭ್ಯರ್ಥಿಗಳು ಮತ್ತು ರಾಜಕಾರಣಿಗಳ ನಡುವಿನ ಜಾಲ ಭೇದಿಸಿ, ತಪ್ಪಿತಸ್ಥರನ್ನು ಬಂಧಿಸಿಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಪಿಎಸ್​ಐ ಪರೀಕ್ಷೆ ಹಗರಣದ ಆರೋಪಿಗೆ ಸನ್ಮಾನ.. ಕಲಬುರಗಿಯಲ್ಲಿ ತಾರಕಕ್ಕೇರಿದ ಮಾಜಿ, ಹಾಲಿ ಶಾಸಕರ ವಾಕ್ಸಮರ

ಬಿಜೆಪಿ ಶಾಸಕ ಬಸವರಾಜ್ ಧಡೇಸುಗೂರ್ ಅವರ ಆಡಿಯೋ ಕ್ಲಿಪ್​ನಲ್ಲಿ ಹಗರಣ ನಡೆದಿರುವ ಕುರಿತು ಸ್ಪಷ್ಟವಾಗಿದೆ. ಪ್ರಕರಣದಲ್ಲಿ ಅಮೃತ್ ಪೌಲ್ ಬಂಧನ ಕಣ್ಣೊರೆಸುವ ತಂತ್ರವಾಗಿದೆ. ಆ ಮೂಲಕ ಸಚಿವರು ಹಾಗೂ ಶಾಸಕರನ್ನು ರಕ್ಷಿಸಲಾಗುತ್ತಿದೆ. ಈ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅರ್ಜಿಯಲ್ಲಿ ಆಗ್ರಹಿಸಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.