ETV Bharat / state

ಆಧುನಿಕ ಶೈಲಿಗೆ ಅನುಗುಣವಾದ ಉತ್ಪನ್ನ ಸಿದ್ದಪಡಿಸಿಲು ಖಾದಿ ಗ್ರಾಮೋದ್ಯಮಕ್ಕೆ ಮುಖ್ಯಮಂತ್ರಿ ಸಲಹೆ - Khadi and Village Industries Board Chairman

ಬೇಡಿಕೆಗೆ ತಕ್ಕಂತೆ ಉತ್ಪನ್ನಗಳ ಸಿದ್ದಪಡಿಸಬೇಕು ಎಂದು ಸೂಚಸಿದ ಸಿಎಂ ಬೊಮ್ಮಾಯಿ - ಸ್ವ- ರಾಜ್ಯದ ಕನಸು ಕಂಡಿದ್ದ ರಾಷ್ಟ್ರಪಿತ ಮಹಾತ್ಮಾ ಗಾಂಧಿಜೀಯವರು ಖಾದಿ ಉದ್ಯಮಕ್ಕೆ ಅತಿ ಹೆಚ್ಚು ಮಹತ್ವ ನೀಡಿದ್ದರು.

chief-minister-advises-khadi-village-to-prepare-products-according-to-modern-style
ಆಧುನಿಕ ಶೈಲಿಗೆ ಅನುಗುಣವಾದ ಉತ್ಪನ್ನಗಳನ್ನು ಸಿದ್ದಪಡಿಸಿಲು ಖಾದಿ ಗ್ರಾಮೋದ್ಯಮಕ್ಕೆ ಮುಖ್ಯಮಂತ್ರಿ ಸಲಹೆ
author img

By

Published : Jan 26, 2023, 8:37 PM IST

ಬೆಂಗಳೂರು: ಖಾದಿ ಗ್ರಾಮೋದ್ಯಮಗಳ ಉತ್ಪನ್ನಗಳಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆಯಿದ್ದು, ಆಧುನಿಕ ಶೈಲಿಗಳು ಮತ್ತು ಬೇಡಿಕೆಗಳಿಗೆ ಅನುಗುಣವಾಗಿ ಬದಲಾವಣೆ ಮಾಡಿಕೊಳ್ಳಬೇಕು ಎಂದು ಖಾದಿ ಉದ್ಯಮಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಖಾದಿ ಉತ್ಸವ 2023ಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬೇಡಿಕೆಗೆ ತಕ್ಕಂತೆ ಉತ್ಪನ್ನಗಳ ಸಿದ್ದಪಡಿಸಬೇಕು ಎಂದು ಸೂಚನೆ ನೀಡಿದರು. ಅಲ್ಲದೇ, ಸ್ವರಾಜ್ಯದ ಕನಸು ಕಂಡಿದ್ದ ರಾಷ್ಟ್ರಪಿತ ಮಹಾತ್ಮಾ ಗಾಂಧಿಜೀಯವರು ಖಾದಿ ಉದ್ಯಮಕ್ಕೆ ಅತಿ ಹೆಚ್ಚು ಮಹತ್ವ ನೀಡಿದ್ದರು. ಇದಕ್ಕೆ ಜನ ಸ್ಪಂಧಿಸಿ ಯಶಸ್ವಿಯೂ ಆಗಿತ್ತು. ಜತೆಗೆ, ದೊಡ್ಡ ಪ್ರಮಾಣದಲ್ಲಿ ಉತ್ಪಾದನೆಯಾಗಿದ್ದು, ಆ ಮೂಲಕ ಸ್ವದೇಶಿ ಬಟ್ಟೆಗಳ ಬಳಕೆಗೆ ಪ್ರೋತ್ಸಾಹ ನೀಡಿದ್ದರು ಎಂದು ತಿಳಿಸಿದರು.

ಕೃಷಿ ಇಲಾಖೆಯನ್ನು ಹೊರತು ಪಡಿಸಿ ಜವಳಿ ಕ್ಷೇತ್ರ ದೇಶದಲ್ಲಿಯೇ ಅತ್ಯಂತ ಹೆಚ್ಚು ಉದ್ಯೋಗಾವಕಾಶಗಳನ್ನು ಕಲ್ಪಿಸಿದೆ. ಆದರೆ, ತಂತ್ರಜ್ಞಾನ ಬದಲಾಗಿದ್ದು ಪಾಲಿಸ್ಟರ್ ಉತ್ಪಾದನೆ ಪ್ರಾರಂಭವಾಗಿ ಖಾದಿ ಬೇಡಿಕೆ ಕುಸಿದಿತ್ತು. ಆದರೆ, ಇದೀಗ ಬದಲಾವಣೆಯಾಗಿದ್ದು, ಖಾದಿ ಬಟ್ಟೆಗೆ ಬೇಡಿಕೆ ಹೆಚ್ಚಾಗುತ್ತಿದೆ. ಆರ್ಗಾನಿಕ್ ಬಟ್ಟೆಗೆ ಫ್ಯಾಷನ್ ಪ್ರಪಂಚದಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಖಾದಿ ಬಟ್ಟೆಗಳಿಗೆ ದೊಡ್ಡ ಮಟ್ಟದ ಬೇಡಿಕೆ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಖಾದಿ ಉದ್ಯಮಕ್ಕೆ ಅಂತರಾರಾಷ್ಟ್ರೀಯ ಮಾರು ಕಟ್ಟೆಯಲ್ಲಿ ದೊಡ್ಡ ಬೇಡಿಕೆ ಉಂಟಾಗಲಿದೆ ಎಂದು ವಿವರಿಸಿದರು.

ಈಗಾಗಲೇ ನೇಕಾರರ ಉತ್ಪನ್ನಗಳನ್ನು ಆನ್​ಲೈನ್​ ಮಾರುಕಟ್ಟೆ ನಿರ್ಮಾಣವಾಗಿದೆ. ಆ ಮೂಲಕ ಮಧ್ಯವರ್ತಿಗಳ ಹಾವಳಿಯಿಲ್ಲದೇ. ಈ ವರ್ಷ ಐದು ಲಕ್ಷ ಮಹಿಳೆಯರಿಗೆ ಮಾರುಕಟ್ಟೆ ಜೋಡಿಸಲಾಗಿದೆ ಎಂದು ಅವರು ವಿವರಿಸಿದರು.

ಬಾಕಿ ಪ್ರೋತ್ಸಾಹ ಧನ ಮಂಜೂರು ಭರವಸೆ : ಖಾದಿ ಗ್ರಾಮೀಣಾ ಗ್ರಾಮೋದ್ಯೋಗ ಮಂಡಳಿಗಳ ಅಧೀನದ ಉದ್ಯಮಗಳಿಗೆ ಬಾಕಿ ಇರುವ 24 ಕೋಟಿ ರೂ. ಗಳನ್ನು ಶೀಘ್ರ ಬಿಡುಗಡೆ ಮಾಡುವುದಕ್ಕೆ ಕ್ರಮ ಕೈಗೊಳ್ಳಲಾಗುವುದು. ಜತೆಗೆ, ಗ್ರಾಮೋದ್ಯೋಗ ಮಂಡಳಿಯ ಆಸ್ತಿಗಳ ರಕ್ಷಣೆಗೆ ಅಗತ್ಯವಿರುವ ಹಣಕಾಸಿನ ನೆರವನ್ನು ನೀಡಲಾಗುವುದು ಎಂದು ಭರವಸೆ ನೀಡಿದರು.

ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಕೆ.ವಿ.ನಾಗರಾಜ್ ಮಾತನಾಡಿ, ಗ್ರಾಮೀಣ ಭಾಗಗಳಲ್ಲಿ ಖಾದಿ ಉದ್ಯಮವನ್ನು ಪ್ರಾರಂಭಿಸಿ ಗ್ರಾಮೀಣ ಜನತೆಗೆ ಉದ್ಯೋಗ ಅವಕಾಶಗಳನ್ನು ಕಲ್ಪಿಸಬೇಕು ಎಂಬುದು ಗಾಂಧೀಜಿಯವರ ಕನಸಾಗಿತ್ತು. ಈ ಉದ್ಯಮ ಪ್ರಸ್ತುತ ದೊಡ್ಡಮಟ್ಟದಲ್ಲಿ ಬೆಳೆದಿದ್ದು, ಸುಮಾರು 20 ಸಾವಿರಕ್ಕೂ ಹೆಚ್ಚು ಜನ ಉದ್ಯೋಗಾವಕಾಶಗಳನ್ನು ಕಲ್ಪಿಸಿದೆ.

ಕೊರೋನಾ ಮತ್ತು ವಿವಿಧ ಕಾರಣಗಳಿಂದ ಕಳೆದ ಎರಡು ವರ್ಷಗಳಿಂದ ಖಾದಿ ಉತ್ಸವ ಹಮ್ಮಿಕೊಳ್ಳುವುದಕ್ಕೆ ಸಾಧ್ಯವಾಗಿರಲಿಲ್ಲ. ಈ ವರ್ಷದಲ್ಲಿ ಮುಖ್ಯಮಂತ್ರಿಗಳ ನೆರವಿನಿಂದ ಉತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ನಿರ್ದೇಶಕ ಮೋಹನ್ ರಾವ್ ಖಾದಿ, ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಸವರಾಜು ಮತ್ತಿತರರಿದ್ದರು. ಉತ್ಸವದಲ್ಲಿ ಸುಮಾರು 50ಕ್ಕೂ ಹೆಚ್ಚು ಮಳಿಗೆಗಳಿದ್ದು ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಖಾದಿ ಗ್ರಾಮೋದ್ಯೋಗ ಮಂಡಳಿಗಳಲ್ಲಿ ಸಿದ್ದ ಪಡಿಸಿದ್ದ ಖಾದಿ ಉತ್ಪನ್ನಗಳು ಲಭ್ಯವಿದೆ.

ಇದನ್ನೂ ಓದಿ: ಬಿಎಸ್​​ವೈ ಬಗ್ಗೆ ಅಪಾರವಾದ ಗೌರವ ಇದೆ.. ಅವರ ಬಗ್ಗೆ ಮಾತಾಡಬೇಡ ಎಂದಿದ್ದಾರೆ, ನೀವೂ ಪ್ರಶ್ನೆ ಕೇಳಬೇಡಿ: ಯತ್ನಾಳ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.