ಬೆಂಗಳೂರು: ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಹೇಳಿಕೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಸಂಬಂಧ ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಗೃಹ ಕಾರ್ಯದರ್ಶಿ ರಜನೀಶ್ ಗೋಯಲ್, ಡಿಜಿಪಿ ಪ್ರವೀಣ್ ಸೂದ್, ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಜೊತೆ ತುರ್ತು ಸಭೆ ನಡೆಸಿದರು. ರಾಜ್ಯದಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಡಿಜಿಪಿಗೆ ಸಿಎಂ ಸೂಚಿಸಿದ್ದಾರೆ.
ರಾಜ್ಯದಲ್ಲಿ ಎಲ್ಲೆಲ್ಲಿ ಸೂಕ್ಷ್ಮ ಪ್ರದೇಶಗಳಿವೆಯೋ ಅಲ್ಲೆಲ್ಲ ಸೂಕ್ತ ಎಚ್ಚರಿಕೆ ಕ್ರಮ ಕೈಗೊಳ್ಳಿ. ಎಲ್ಲೂ ಕೂಡ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಬರಬಾರದು. ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಬೇಕು ಎಂದು ಸಿಎಂ ಸೂಚನೆ ನೀಡಿದರು.
ಓದಿ: ಬೆಂಗಳೂರಿನಲ್ಲಿ 11,315 ಗುಂಡಿಗಳನ್ನು ಮುಚ್ಚಲಾಗಿದೆ: ರಾಮಪ್ರಸಾದ್ ಮನೋಹರ್