ETV Bharat / state

ಪ್ರಧಾನಿ ಮೋದಿ ರಾಜ್ಯ ಭೇಟಿಗೂ ಮುನ್ನಾ ದಿನ ದೆಹಲಿಗೆ ಪ್ರಯಾಣ ಬೆಳೆಸಿದ ಸಿಎಂ ಬೊಮ್ಮಾಯಿ.. - Union Finance Minister Nirmala Sitharaman

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ನವದೆಹಲಿ ಭೇಟಿ - ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಕುಟುಂಬದ ಕಾರ್ಯಕ್ರಮದಲ್ಲಿ ಸಿಎಂ ಭಾಗಿ - ಹೈಕಮಾಂಡ್ ನಾಯಕರೊಂದಿಗೆ ಸಿಎಂ ಬೊಮ್ಮಾಯಿ ಮಾತುಕತೆ.

CM Bommai traveled to Delhi
ಪ್ರಧಾನಿ ಮೋದಿ ರಾಜ್ಯ ಭೇಟಿಗೂ ಮುನ್ನಾ ದಿನ ದೆಹಲಿಗೆ ಪ್ರಯಾಣ ಬೆಳೆಸಿದ ಸಿಎಂ ಬೊಮ್ಮಾಯಿ..
author img

By

Published : Feb 5, 2023, 3:21 PM IST

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸಕ್ಕೆ ಆಗಮಿಸುವ ಮುನ್ನಾ ದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನವದೆಹಲಿಗೆ ತೆರಳುತ್ತಿದ್ದು, ಹೈಕಮಾಂಡ್ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಸಮಯಾವಕಾಶ ಸಿಕ್ಕಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಗೂ ಸಿಎಂ ಚಿಂತನೆ ನಡೆಸಿದ್ದು, ಸಿಡಿ ಪ್ರಕರಣದ ಕುರಿತು ಚರ್ಚಿಸುವ ಸಾಧ್ಯತೆ ಇದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ನವದೆಹಲಿಗೆ ತೆರಳಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಕುಟುಂಬದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇದೇ ಸಂದರ್ಭದಲ್ಲಿ ಕೇಂದ್ರ ಬಜೆಟ್ ನಲ್ಲಿ ದ್ರಾ ಮೇಲ್ದಂಡೆ ಯೋಜನೆ ಹಾಗು ರಾಜ್ಯದ ಹಲವು ರೈಲ್ವೆ ಯೋಜನೆಗಳಿಗೆ ಸಾಕಷ್ಟು ಕೊಡುಗೆ ನೀಡಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಇತರ ನಾಯಕರನ್ನು ಭೇಟಿಯಾಗಿ ಅಭಿನಂದಿಸಲಿದ್ದಾರೆ.

ವಿಶೇಷ ವಿಮಾನದ ಮೂಲಕ ನವದೆಹಲಿಗೆ ತೆರಳಲಿರುವ ಬಸವರಾಜ ಬೊಮ್ಮಾಯಿ, ನಿಗದಿತ ಕಾರ್ಯಗಳ ನಂತರ ಸಮಯ ನೀಡಿದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚಿಸಲಿದ್ದಾರೆ. ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ಸಿಬಿಐಗೆ ವಹಿಸಲು ಇರುವ ಒತ್ತಡದ ಬಗ್ಗೆ ಅಮಿತ್ ಶಾ ಅವರ ಗಮನ ಸೆಳೆಯಲಿದ್ದಾರೆ. ಈಗಾಗಲೇ ರಮೇಶ್ ಜಾರಕಿಹೊಳಿ ದೆಹಲಿಗೆ ತೆರಳಿ ಅಮಿತ್ ಶಾ ಭೇಟಿ ಮಾಡಿ ಸಿಡಿ ಪ್ರಕರಣದ ಕುರಿತು ಚರ್ಚಿಸಿದ್ದಾರೆ. ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮನವಿ ಮಾಡಿದ್ದಾರೆ. ನಂತರ ರಾಜ್ಯದಲ್ಲಿಯೂ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಒತ್ತಡ ಹೇರುತ್ತಿದ್ದಾರೆ. ಈ ಎಲ್ಲಾ ಕಾರಣಗಳಿಂದಾಗಿ ಸಿಡಿ ಪ್ರಕರಣದ ಕುರಿತು ಸಿಎಂ ಬೊಮ್ಮಾಯಿ ವಿಶೇಷವಾಗಿ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗ್ತಿದೆ.

ಸಂಪುಟ ವಿಸ್ತರಣೆ ಚರ್ಚೆ ಅನುಮಾನ: ಇನ್ನು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ದೆಹಲಿ ಭೇಟಿ ವೇಳೆ ಸಚಿವ ಸಂಪುಟ ವಿಸ್ತರಣೆ ಕುರಿತು ಯಾವುದೇ ರೀತಿಯ ಮಾತುಕತೆ ನಡೆಯುವುದು ಅನುಮಾನ ಎನ್ನಲಾಗ್ತಿದೆ. ಈವರೆಗೂ ಮುಖ್ಯಮಂತ್ರಿಗಳು ದೆಹಲಿ ಪ್ರವಾಸಕ್ಕೆ ತೆರಳಿದಾಗಲೆಲ್ಲಾ ಸಚಿವ ಸಂಪುಟ ವಿಷಯ ಗರಿಗೆದರುತ್ತಿತ್ತು. ಆಕಾಂಕ್ಷಿಗಳೂ ಸಿಎಂ ನಿವಾಸಕ್ಕೆ ದೌಡಾಯಿಸಿ ಬೇಡಿಕೆ ಮಂಡಿಸುತ್ತಿದ್ದರು. ಆದರೆ ಇಂದು ಅಂತಹ ಯಾವುದೇ ಚಟುವಟಿಕೆಗಳು ಕಂಡುಬಂದಿಲ್ಲ. ಈಗಾಗಲೇ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ತಮ್ಮನ್ನು ಸಂಪುಟಕ್ಕೆ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ ಎಂದಿದ್ದಾರೆ. ರಮೇಶ್ ಜಾರಕಿಹೊಳಿ ಕೂಡ ಅಸಮಾಧಾನಗೊಂಡು ಸಚಿವ ಸ್ಥಾನದ ಅಪೇಕ್ಷೆ ಕೈಬಿಟ್ಟಿದ್ದಾರೆ. ಸಚಿವ ಸ್ಥಾನಕ್ಕಾಗಿ ತೀವ್ರ ಒತ್ತಡ ಹೇರುತ್ತಿದ್ದ ಈ ಇಬ್ಬರು ನಾಯಕರು ಮೌನವಾಗಿರುವ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ಚರ್ಚೆ ಇಲ್ಲ ಎನ್ನುವುದು ಬಹುತೇಕ ಖಚಿತವಾಗಿದೆ.

ಈಗಾಗಲೇ ಚುನಾವಣಾ ತಾಲೀಮು ಆರಂಭಗೊಂಡಿದೆ. ಕೇಂದ್ರದ ನಾಯಕರು ಸರಣಿ ಪ್ರವಾಸಕ್ಕೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಚುನಾವಣೆಗೆ ಎಲ್ಲಾ ರೀತಿಯ ಸಿದ್ಧತೆಗಳು ಆರಂಭಗೊಂಡಿವೆ. ಜಂಟಿ ಅಧಿವೇಶನ ಮತ್ತು ಬಜೆಟ್ ಅಧಿವೇಶನ ಮುಗಿಯುತ್ತಿದ್ದಂತೆ ಸರ್ಕಾರದ ಅವದಿಯೂ ಬಹುತೇಕ ಮುಗಿದಂತೆ ನಂತರ ನೀತಿ ಸಂಹಿತೆ ಜಾರಿಯಾಗಲು ಹೆಚ್ಚು ಸಮಯ ಬೇಕಿಲ್ಲ. ಹಾಗಾಗಿ ಸಚಿವ ಸಂಪುಟ ವಿಸ್ತರಿಸಿ ಪಕ್ಷದಲ್ಲಿ ಅಸಮಾಧಾನ ಏಳುವಂತೆ ಮಾಡಲು ಸಿಎಂ ಹಾಗು ವರಿಷ್ಠರು ಸಿದ್ಧರಿಲ್ಲ. ಹಾಗಾಗಿ ಸಚಿವ ಸಂಪುಟ ವಿಸ್ತರಣೆ ವಿಷಯಕ್ಕೆ ಬಹುತೇಕ ತೆರೆ ಬಿದ್ದಂತಾಗಿದೆ ಎನ್ನಲಾಗುತ್ತಿದೆ. ಆದರೂ ವರಿಷ್ಠರು ಏನು ಮಾಡುತ್ತಾರೆ ಎನ್ನುವುದು ಕೊನೆ ಕ್ಷಣದವರೆಗೂ ಗೌಪ್ಯವಾಗಿಯೇ ಇರಲಿದೆ.

ಇನ್ನು, ಇಂದು ಹೈಕಮಾಂಡ್ ನಾಯಕರ ಭೇಟಿ ಬಳಿಕ ಇಂದು ರಾತ್ರಿಯೇ ಸಿಎಂ ಬೆಂಗಳೂರಿಗೆ ವಾಪಸಾಗಲಿದ್ದಾರೆ. ನಾಳೆ ಬೆಳಗ್ಗೆ ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಗ್ರೀನ್ ಎನರ್ಜಿ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲು ಆಗಮಿಸುತ್ತಿದ್ದು, ಅವರನ್ನು ಸಿಎಂ ಸ್ವಾಗತಿಸಲಿದ್ದಾರೆ. ಬೆಂಗಳೂರು ಕಾರ್ಯಕ್ರಮದ ನಂತರ ತುಮಕೂರು ಕಾರ್ಯಕ್ರಮಕ್ಕೂ ಪ್ರಧಾನಿಗಳ ಜೊತೆ ಸಿಎಂ ತೆರಳಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ:ರೈತಪರ ಕೃಷಿ ಯೋಜನೆಗಳು ಇಂದಿನ ಅಗತ್ಯ: ಸಿಎಂ ಬೊಮ್ಮಾಯಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.