ಬೆಂಗಳೂರು: ಕುಮಾರಕೃಪ ಅತಿಥಿ ಗೃಹದಲ್ಲಿ ಸಿಎಂ ಯಡಿಯೂರಪ್ಪ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಈ ವೇಳೆ ಸಂಪುಟ ವಿಸ್ತರಣೆ ಬಗ್ಗೆ ಸಮಾಲೋಚನೆ ನಡೆಸಿದರು.
ಸಂಪುಟ ವಿಸ್ತರಣೆ ಸಂಬಂಧ ಹೈ ಕಮಾಂಡ್ನಿಂದ ಏನಾದರೂ ಸೂಚನೆ ಬಂದಿದೆಯಾ ಎಂಬ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅರುಣ್ ಸಿಂಗ್ ಜೊತೆ ಚರ್ಚೆ ನಡೆಸಿದ್ದಾರೆ. ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತು ವರಿಷ್ಠರ ಒಪ್ಪಿಗೆ ಬೇಕಿದೆ. ನಾನೂ ಎರಡು ಮೂರು ಬಾರಿ ಮನವಿ ಮಾಡಿದ್ದೇನೆ. ಸಚಿವ ಸ್ಥಾನ ಆಕಾಂಕ್ಷಿಗಳ ಒತ್ತಡ ಹೆಚ್ಚಾಗಿದೆ. ವರಿಷ್ಠರ ಜೊತೆ ಮಾತನಾಡಿ ಒಪ್ಪಿಗೆ ಕೊಡಿಸಿ. ಬೇಕಾದರೆ ಮತ್ತೊಮ್ಮೆ ದೆಹಲಿಗೆ ಬನ್ನಿ ಎಂದರೆ, ದೆಹಲಿಗೆ ಬರಲು ನಾನು ಸಿದ್ಧನಿದ್ದೇನೆ ಎಂದು ಅರುಣ್ ಸಿಂಗ್ಗೆ ಸಿಎಂ ಯಡಿಯೂರಪ್ಪ ಹೇಳಿದ್ದಾರೆ ಎನ್ನಲಾಗಿದೆ. ಇದೇ ವೇಳೆ ವರಿಷ್ಠರ ಜೊತೆ ಮಾತನಾಡುವುದಾಗಿ ಸಿಎಂ ಬಿಎಸ್ವೈಗೆ ಅರುಣ್ ಸಿಂಗ್ ಭರವಸೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಕುಮಾರಕೃಪಾ ಅಥಿತಿ ಗೃಹದಲ್ಲಿ ಸುಮಾರು ಅರ್ಧ ಗಂಟೆ ಮಾತುಕತೆ ನಡೆಸಿದ ಬಳಿಕ ಸಿಎಂ ಯಡಿಯೂರಪ್ಪ ಜೊತೆ ಅರುಣ್ ಸಿಂಗ್ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸಿದ್ದಾರೆ. ಈ ವೇಳೆ, ಡಿಸಿಎಂ ಗೋವಿಂದ ಕಾರಜೋಳ, ಗೃಹ ಸಚಿವ ಬೊಮ್ಮಾಯಿ ಸಾಥ್ ನೀಡಿದ್ದಾರೆ.