ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಾಲ್ಕು ಬಾರಿ ಕೊರೊನಾ ಪರೀಕ್ಷಾ ವರದಿ ನೆಗೆಟಿವ್ ಬಂದಿದ್ದು, ಐದನೇ ಬಾರಿ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಇಂದು ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
-
ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ.
— B.S. Yediyurappa (@BSYBJP) August 2, 2020 " class="align-text-top noRightClick twitterSection" data="
">ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ.
— B.S. Yediyurappa (@BSYBJP) August 2, 2020ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ.
— B.S. Yediyurappa (@BSYBJP) August 2, 2020
ಈ ಕುರಿತು ಟ್ವೀಟ್ ಮಾಡಿರುವ ಸಿಎಂ, ನನ್ನ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಸಲಹೆ ನೀಡಿದ್ದಾರೆ.
ಈಗಾಗಲೇ ಸಿಎಂ ಸಂಪುಟದಲ್ಲಿನ ಸಿ.ಟಿ. ರವಿ, ಬಿ.ಸಿ. ಪಾಟೀಲ್ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಸಿಎಂ ಸೇರಿದಂತೆ ಹಲವು ಸಚಿವರು ಹೋಮ್ ಕ್ವಾರಂಟೈನ್ ಆಗಿದ್ದಾರೆ.