ಬೆಂಗಳೂರು : ಹಿಂದಿನ ಸರ್ಕಾರ ಜಾರಿಗೊಳಿಸಿರುವ ಜನಪ್ರಿಯ ಯೋಜನೆಗಳನ್ನು ರದ್ದುಪಡಿಸುವ ಯಾವುದೇ ಪ್ರಸ್ತಾವನೆ ರಾಜ್ಯ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟಡಿಸಿದ್ದಾರೆ.
ನಮ್ಮ ಸರ್ಕಾರ ಜನಪರ ಸರ್ಕಾರ. ಅನ್ನಭಾಗ್ಯ ಯೋಜನೆ ಮುಂದುವರಿಸಲು ಅನುದಾನ ಬಿಡುಗಡೆಯ ಕಡತಕ್ಕೆ ಈಗಾಗಲೇ ಸಹಿ ಮಾಡಲಾಗಿದೆ. ಯಾವುದೇ ಜನಪ್ರಿಯ ಯೋಜನೆಗಳನ್ನು ರದ್ದುಗೊಳಿಸಲ್ಲ ಎಂದು ಸಿಎಂ ಯಡಿಯೂರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.