ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜೆ. ಹೆಚ್. ಪಟೇಲರ ಪತ್ನಿ ಸರ್ವಮಂಗಳ ಪಟೇಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ.
ಸರಳತೆ, ಸಜ್ಜನಿಕೆಯ ಸಾಕಾರ ಮೂರ್ತಿಯಾಗಿದ್ದ ಸರ್ವಮಂಗಳ ಪಟೇಲ್ ಅವರು ಜೆ. ಹೆಚ್. ಪಟೇಲರ ಬದುಕಿನ ಎಲ್ಲ ಮಜಲುಗಳಲ್ಲಿ ಬೆಂಬಲವಾಗಿ ನಿಂತವರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.
ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಕುಟುಂಬ ವರ್ಗದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಮುಖ್ಯಮಂತ್ರಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.