ETV Bharat / state

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲಿಂಗಾನುಪಾತ ಕುಸಿತ: ಸೂಕ್ತ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ ಸಿದ್ದರಾಮಯ್ಯ - ಡಿಸಿ ಮತ್ತು ಜಿಪಂ ಸಿಇಒಗಳ ಸಭೆ

Chief Minister Siddaramaiah concern on declining sex ratio: ರಾಜ್ಯದ ಹಲವು ಜಿಲ್ಲೆಗಳಲ್ಲಿ ಲಿಂಗಾನುಪಾತ ಕಡಿಮೆಯಾಗುತ್ತಿರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದರು.

Chief Minister Siddaramaiah
ಮುಖ್ಯಮಂತ್ರಿ ಸಿದ್ದರಾಮಯ್ಯ
author img

By ETV Bharat Karnataka Team

Published : Sep 14, 2023, 6:55 AM IST

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಕಿ-ಅಂಶಗಳಲ್ಲಿ ಹಲವು ಜಿಲ್ಲೆಗಳಲ್ಲಿ ಲಿಂಗಾನುಪಾತ ಕಡಿಮೆಯಾಗುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರತಿ ಮೂರು ತಿಂಗಳಿಗೊಮ್ಮೆ ಪಿಸಿ ಮತ್ತು ಪಿಎನ್‌ಡಿಟಿ ಕಾಯ್ದೆ ಅನ್ವಯ ಸ್ಕ್ಯಾನಿಂಗ್‌ ಕೇಂದ್ರಗಳ ತಪಾಸಣೆ ನಡೆಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ಮುಂದುವರೆದ ಡಿಸಿ ಮತ್ತು ಜಿ.ಪಂ. ಸಿಇಒಗಳ ಸಭೆಯಲ್ಲಿ ಮಾತನಾಡಿದ ಅವರು, ''ಗರ್ಭವತಿ ಮಹಿಳೆಯರ ದತ್ತಾಂಶದ ಮೇಲೆ ಜಿಲ್ಲಾಧಿಕಾರಿಗಳು ತೀವ್ರ ನಿಗಾ ವಹಿಸಬೇಕು'' ಎಂದು ತಿಳಿಸಿದರು. 2015ರಲ್ಲಿ ಉತ್ತಮ ಸೂಚ್ಯಂಕ ಹೊಂದಿದ್ದ ಕೆಲವು ಜಿಲ್ಲೆಗಳು 2022ರಲ್ಲಿ ಕುಸಿತ ಕಂಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. "ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹೆಣ್ಣುಮಕ್ಕಳು ಹಾಗೂ ಮಹಿಳೆಯರಲ್ಲಿ ಅನಿಮಿಯಾ ಮತ್ತು ಅಪೌಷ್ಟಿಕತೆಯ ಸಮಸ್ಯೆಗಳ ಕುರಿತು ಹೆಚ್ಚು ನಿಗಾ ವಹಿಸಬೇಕು. ಆಸ್ಪತ್ರೆಗಳಲ್ಲಿಯೇ ಹೆರಿಗೆಯಾಗುವುದನ್ನು ಖಾತರಿಪಡಿಸಬೇಕು. ತಾಯಿ ಮರಣ ತಪಾಸಣೆಯನ್ನು ಜಿಲ್ಲಾಧಿಕಾರಿಗಳು ನಿಯಮಿತವಾಗಿ ನಡೆಸಬೇಕು. ಲಸಿಕೆ ಕಾರ್ಯಕ್ರಮಗಳಲ್ಲಿಯೂ ಸಾಧನೆಯನ್ನು ಉತ್ತಮಪಡಿಸಬೇಕು'' ಎಂದು ನಿರ್ದೇಶನ ನೀಡಿದರು.

ಹಿಂದುಳಿದ ವರ್ಗಗಳ ಹಾಸ್ಟೆಲ್​ಗಳಿಗೆ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಂದ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಸೂಚಿಸಿದ ಸಿಎಂ, ''2,443 ವಸತಿ ನಿಲಯಗಳಲ್ಲಿ ಕೇವಲ 981 ವಸತಿ ನಿಲಯಗಳಿಗೆ ಮಾತ್ರ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗಿದೆ. ಉಳಿದ 1,462 ವಸತಿ ನಿಲಯಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಒದಗಿಸಬೇಕು. ಪ್ರತಿ ತಿಂಗಳು ವಸತಿ ನಿಲಯಗಳಿಗೆ ದಿಢೀರ್‌ ಭೇಟಿ ಮಾಡಬೇಕು. ಇದರಿಂದ ವಸತಿ ನಿಲಯಗಳ ಕುಂದು ಕೊರತೆ, ಆಹಾರದ ಗುಣಮಟ್ಟ ಮತ್ತಿತರ ಸಮಸ್ಯೆಗಳು ಅರಿವಿಗೆ ಬರುತ್ತವೆ. ನಗರ ಸ್ಥಳೀಯ ಸಂಸ್ಥೆಗಳು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೀಟ್‌ ಪಂಪ್‌ಗಳನ್ನು ಒದಗಿಸಬೇಕು. ವಸತಿ ನಿಲಯಗಳ ತ್ಯಾಜ್ಯ ನಿರ್ವಹಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ವಸತಿ ನಿಲಯಗಳ ಕಟ್ಟಡ ನಿರ್ಮಾಣಕ್ಕಾಗಿ 120 ನಿವೇಶನಗಳನ್ನು ಒದಗಿಸಲು ಕೂಡಲೇ ಕ್ರಮ ವಹಿಸಬೇಕು" ಎಂದು ಸೂಚಿಸಿದ್ದಾರೆ.

ಇತರ ಪ್ರಮುಖ ಅಂಶಗಳು: ರಾಜೀವ್‌ ಗಾಂಧಿ ವಸತಿ ನಿಗಮದ ಖಾತೆಯಲ್ಲಿ 1,900 ಕೋಟಿಗೂ ಹೆಚ್ಚು ಅನುದಾನ ಲಭ್ಯವಿದ್ದು, ಆರ್ಥಿಕ ಪ್ರಗತಿ ಸಾಧಿಸಲು ಸಿಇಒಗಳಿಗೆ ತಿಳಿಸಲಾಗಿದೆ. ಈ ವರ್ಷ 3.11 ಲಕ್ಷ ಮನೆಗಳ ನಿರ್ಮಾಣದ ಗುರಿ ಹೊಂದಲಾಗಿದ್ದು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ವಿಶೇಷ ಆಸಕ್ತಿವಹಿಸಿ ಗುರಿ ಸಾಧಿಸಬೇಕು. ಗಣಿಗಾರಿಕೆ ಪುನಶ್ಚೇತನ ನಿಗಮದಿಂದ ವಸತಿ ಯೋಜನೆಗಳಿಗೆ 1,493 ಕೋಟಿ ರೂ. ಅನುದಾನ ಲಭ್ಯವಿದ್ದು, ಗಣಿಬಾಧಿತ ಪ್ರದೇಶಗಳಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಜಾಗ ಗುರುತಿಸಬೇಕು. ಕೊಳೆಗೇರಿ ನಿರ್ಮೂಲನ ಮಂಡಳಿ ವತಿಯಿಂದ ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದಲ್ಲಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಮನೆಗಳನ್ನು ನಿರ್ಮಿಸಲು ಜಾಗ ಗುರುತಿಸಬೇಕು. ರಾಜ್ಯದ 21 ಪದವಿ ಕಾಲೇಜುಗಳಿಗೆ ಜಮೀನು ಒದಗಿಸಲು ಜಿಲ್ಲಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಪ್ರದೇಶದಲ್ಲಿ ಜಾಗ ಒದಗಿಸಬಹುದು. ನಗರ ಪ್ರದೇಶದಲ್ಲಿ ನಿಗದಿತ ಮಾನದಂಡಗಳಂತೆ ಜಾಗ ಒದಗಿಸುವುದು ಕಷ್ಟವಾಗುತ್ತದೆ ಎಂದು ಸಭೆಯಲ್ಲಿ ಚರ್ಚಿಸಲಾಯಿತು. ಇತರ ಇಲಾಖೆಗಳ ವ್ಯಾಪ್ತಿಯಲ್ಲಿ ನಿರುಪಯುಕ್ತವಾಗಿ ಖಾಲಿ ಜಾಗ ಲಭ್ಯವಿದ್ದಲ್ಲಿ, ಅದನ್ನು ಕಾಲೇಜು ಕಟ್ಟಡ ನಿರ್ಮಾಣಕ್ಕೆ ಬಳಸಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಿದ್ದರಾಮಯ್ಯ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಇದನ್ನೂ ಓದಿ: ರೈತರ ಆತ್ಮಹತ್ಯೆಗಳ ಕುರಿತು ಸಚಿವ ಶಿವಾನಂದ ಪಾಟೀಲ್ ಹೇಳಿಕೆ: ಸ್ಪಷ್ಟನೆ ನೀಡಿದ ಉಪಸಭಾಪತಿ ರುದ್ರಪ್ಪ ಲಮಾಣಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.