ETV Bharat / state

ಭಾರತ ಎಂದು ಮರುನಾಮಕರಣ ಮಾಡುವ ಅಗತ್ಯವಿಲ್ಲ: ಸಿಎಂ ಸಿದ್ದರಾಮಯ್ಯ - etv bharat kannada

ಭಾರತವನ್ನು ಸಂವಿಧಾನದಲ್ಲಿ ಇಂಡಿಯಾ ಎಂದೇ ಉಲ್ಲೇಖಿಸಲಾಗಿದ್ದು, ಇಂಡಿಯಾ ಎಂಬುದು ಎಲ್ಲರೂ ಒಪ್ಪಿರುವ ಹೆಸರಾಗಿದೆ. ಭಾರತ ಎಂದು ಮರುನಾಮಕರಣ ಮಾಡುವ ಅಗತ್ಯ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

chief-minister-siddaramaiah-reaction-on-education-and-teachers
ವಿದ್ಯೆ ಕಲಿಸುವುದಷ್ಟೆ ಶಿಕ್ಷಣದ ಉದ್ದೇಶ ಅಲ್ಲ, ಮಕ್ಕಳನ್ನು ವಿಶ್ವ ಮಾನವರನ್ನಾಗಿ ರೂಪಿಸುವುದೂ‌ ಶಿಕ್ಷಣದ ಗುರಿ: ಸಿಎಂ ಸಿದ್ದರಾಮಯ್ಯ
author img

By ETV Bharat Karnataka Team

Published : Sep 5, 2023, 4:38 PM IST

Updated : Sep 5, 2023, 10:13 PM IST

ಬೆಂಗಳೂರು: ವಿದ್ಯೆ ಕಲಿಸುವುದಷ್ಟೇ ಶಿಕ್ಷಣದ ಉದ್ದೇಶ ಅಲ್ಲ. ಮಕ್ಕಳನ್ನು ವಿಶ್ವ ಮಾನವರನ್ನಾಗಿ ರೂಪಿಸುವುದೂ‌ ಶಿಕ್ಷಣದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ಜಂಟಿಯಾಗಿ ಭಾರತ ರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನದ ನಿಮಿತ್ತ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಇಂದು ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ, ನಂತ 43 ಮಂದಿ ಪುರಸ್ಕೃತ ಶಿಕ್ಷಕರುಗಳಿಗೆ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.

ರೈತರು, ಸೈನಿಕರು, ಶಿಕ್ಷಕರು ಆದರ್ಶ ಸಮಾಜದ ಆಧಾರ ಸ್ತಂಭಗಳು. ಇವರು ಸಮಾಜದ, ದೇಶದ ಭವಿಷ್ಯ ರೂಪಿಸುವ ಕಾಯಕ ಜೀವಿಗಳು. ಡಿಗ್ರಿ ಪಡೆದು, ಡಾಕ್ಟರೇಟ್ ಪಡೆದರೂ ಅವರಲ್ಲಿ ವೈಜ್ಞಾನಿಕ ಮನೋಭಾವ, ವೈಚಾರಿಕತೆ ಬೆಳೆಯದಿದ್ದರೆ, ತಲೆಯೊಳಗೆ ಮೌಡ್ಯ ತುಂಬಿಕೊಂಡಿದ್ದರೆ ಅವರನ್ನು ಸುಶಿಕ್ಷಿತರು ಎಂದು ಕರೆಯಲು ಸಾಧ್ಯವಿಲ್ಲ. ಡಿಗ್ರಿ ಪಡೆದವರೇ ಹೆಚ್ಚೆಚ್ವು ಜಾತಿವಾದಿಗಳಾದರೆ ಈ ಚಂದಕ್ಕೆ ಶಿಕ್ಷಣ ಏಕೆ ಪಡೆಯಬೇಕು ಎಂದು ಪ್ರಶ್ನಿಸಿದರು.

Chief Minister Siddaramaiah reaction on education  and teachers
ಶಿಕ್ಷಕರುಗಳಿಗೆ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ ಸಿದ್ದರಾಮಯ್ಯ

ಶೂದ್ರರು ಮತ್ತು ಹೆಣ್ಣುಮಕ್ಕಳನ್ನು ಶಿಕ್ಷಣದಿಂದ ಹೊರಗೆ ಇಡಲಾಗಿತ್ತು. ನಮ್ಮ ಸಂವಿಧಾನ ಎಲ್ಲರಿಗೂ ಶಿಕ್ಷಣದ ಅವಕಾಶವನ್ನು ಒದಗಿಸಿತು. ಈಗ ಈ ಸಂವಿಧಾನಕ್ಕೆ ಅಪಾಯ ಬಂದೊದಗಿದೆ. ಆದ್ದರಿಂದ ಸಂವಿಧಾನವನ್ನು ರಕ್ಷಿಸಿಕೊಳ್ಳುವ ಹೊಣೆ ನಮ್ಮೆಲ್ಲರ ಮೇಲಿದೆ. ಸ್ವಾತಂತ್ರ್ಯ ಬಂದು 76 ವರ್ಷವಾದರೂ ಶೇ ನೂರರಷ್ಟು ಸಾಕ್ಷರತೆ ಸಾಧ್ಯವಾಗಿಲ್ಲ. ಶಿಕ್ಷಣದಿಂದ ವಂಚಿತರಾದವರು ಅಸಮಾನತೆಗೆ ಬಲಿಯಾಗುತ್ತಾರೆ. ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕನಸು ನನಸಾಗಬೇಕಾದರೆ ಎಲ್ಲರಿಗೂ ವೈಜ್ಞಾನಿಕ, ವೈಚಾರಿಕ ಶಿಕ್ಷಣ ದೊರೆತು ದೇಶ ಪ್ರಗತಿ ಪಥದಲ್ಲಿ ಮುನ್ನಡೆಯಬೇಕು ಎಂದು ಹೇಳಿದರು.

ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ

ಶಿಕ್ಷಕ ವೃತ್ತಿಗೆ ಬರುವಾಗ ಎಲ್ಲ ಶಿಕ್ಷಕರಿಗೂ ಒಂದೇ ರೀತಿಯ ತರಬೇತಿ ಇರುತ್ತದೆ. ಆದರೆ, ಬೇರೆ ಬೇರೆ ಜಿಲ್ಲೆಗಳ ಫಲಿತಾಂಶದ ಪ್ರಮಾಣ, ಶೈಕ್ಷಣಿಕ ಗುಣಮಟ್ಟ ಭಿನ್ನವಾಗಿರುವುದು ಏಕೆ ಎನ್ನುವುದನ್ನು ಪ್ರತಿಯೊಬ್ಬ ಶಿಕ್ಷಕರೂ ತಮ್ಮನ್ನು ತಾವು ಕೇಳಿಕಂಡು ದಿನದಿಂದ ದಿನಕ್ಕೆ ಉನ್ನತೀಕರಿಸಿಕೊಳ್ಳಬೇಕು. ನಮ್ಮ ಸರ್ಕಾರ ಬಂದ ಬಳಿಕ 10 ಸಾವಿರ ಶಾಲೆಗಳಿಗೆ ಶಿಕ್ಷಕರನ್ನು ನೇಮಿಸಿದ್ದೂ ಸೇರಿ ಹಲವು ಕಾರ್ಯಕ್ರಮ ಮಾಡಿದ್ದೆವು. ಪರಿಶಿಷ್ಟ ಜಾತಿ, ವರ್ಗದ ಮಕ್ಕಳಿಗೆ ನಾವು ನಮ್ಮ ಸರ್ಕಾರದ ಅವಧಿಯಲ್ಲಿ ಲ್ಯಾಪ್ ಟಾಪ್ ನೀಡುವ ಕಾರ್ಯಕ್ರಮ ಆರಂಭಿಸಿದ್ದೆವು. ನಂತರ ಬಂದ ಸರ್ಕಾರ ಇದನ್ನು ಸ್ಥಗಿತಗೊಳಿಸಿತ್ತು. ಈಗ ಮತ್ತೆ ನಾವು ಅಧಿಕಾರಕ್ಕೆ ಬಂದು ಲ್ಯಾಪ್ ಟಾಪ್ ಕೊಡುವುದನ್ನು ಮುಂದುವರೆಸಿದ್ದೇವೆ ಎಂದರು. ಈ ವೇಳೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವ ಎಸ್ ಮಧು ಬಂಗಾರಪ್ಪ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಉಪಸ್ಥಿತರಿದ್ದರು.

ದೇಶಕ್ಕೆ ರಿಪಬ್ಲಿಕನ್ ಆಫ್ ಭಾರತ್ ಎಂದು ಮರುನಾಮಕರಣ ಅಗತ್ಯವಿಲ್ಲ: ಕಾರ್ಯಕ್ರಮದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಭಾರತವನ್ನು ಸಂವಿಧಾನದಲ್ಲಿ ಇಂಡಿಯಾ ಎಂದೇ ಉಲ್ಲೇಖಿಸಲಾಗಿದ್ದು, ಇಂಡಿಯಾ ಎಂಬುದು ಎಲ್ಲರೂ ಒಪ್ಪಿರುವ ಹೆಸರಾಗಿದೆ. ಭಾರತ ಎಂದು ಮರುನಾಮಕರಣ ಮಾಡುವ ಅಗತ್ಯ ಇಲ್ಲ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಅನುತೀರ್ಣಗೊಂಡ ಎಸ್‌ಎಸ್‌ಎಲ್​ಸಿ- ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವರ್ಷಕ್ಕೆ 3 ಬಾರಿ ಪರೀಕ್ಷೆಗೆ ಅವಕಾಶ: ಸಚಿವ ಮಧು ಬಂಗಾರಪ್ಪ

Last Updated : Sep 5, 2023, 10:13 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.