ಬೆಂಗಳೂರು: ನಗರದಲ್ಲಿ ಮತ್ತೆ ಮಕ್ಕಳ ಕಳ್ಳರು ಕಾಣಿಸಿಕೊಂಡಿದ್ದಾರೆ ಎಂಬ ವದಂತಿ ಹರಡುತ್ತಿದ್ದು, ಇದಕ್ಕೆ ಕಿವಿಗೊಡಬಾರದು ಎಂದು ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ.
![child-kidnapper-news-is-false](https://etvbharatimages.akamaized.net/etvbharat/prod-images/3966753_kvn.jpg)
ಮಕ್ಕಳ ಕಳ್ಳತನವಾಗುತ್ತಿರುವ ಬಗ್ಗೆ ಕೆಲವರು ವದಂತಿ ಹರಡುತ್ತಿದ್ದಾರೆ. ಇಂತಹ ವದಂತಿ ಹರಡುವ ಮುನ್ನ ದಯವಿಟ್ಟು ಪರಿಶೀಲಿಸಿ. ಸುಳ್ಳು ಸುದ್ದಿ ಹರಡುವವರಿಗೆ ಕಾನೂನಿನಡಿ ಶಿಕ್ಷೆ ವಿಧಿಸಲಾಗುತ್ತದೆ. ಸಾರ್ವಜನಿಕರು ದಯವಿಟ್ಟು ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ ಎಂದು ಟ್ವೀಟ್ ಮೂಲಕ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
ಈ ಹಿಂದೆ ಮಕ್ಕಳ ಕಳ್ಳರು ಎಂದು ಅನುಮಾನಿಸಿ ಅಮಾಯಕರ ಮೇಲೆ ಸಾರ್ವಜನಿಕರು ಹಲ್ಲೆ ಮಾಡಿದ್ದರು. ಇಂತಹ ಘಟನೆಗಳು ಮರುಕಳಿಸಬಾರದೆಂದು ಟ್ವೀಟ್ ಮೂಲಕ ನಾಗರಿಕರನ್ನು ಎಚ್ಚರಿಸಿದ್ದಾರೆ.