ETV Bharat / state

ಮಕ್ಕಳ ಕಳ್ಳಸಾಗಣೆ ಪ್ರಕರಣ: ಬಿಇಒ ನಾಗರತ್ನ ವಿರುದ್ಧ ಕ್ರಮ ಜರುಗಿಸಲು ಹೈಕೋರ್ಟ್ ಆದೇಶ

ಬೀದಿ ಬದಿ, ರಸ್ತೆಯ ಸಿಗ್ನಲ್​​​ಗಳಲ್ಲಿ ಹೂ, ಆಟಿಕೆ ವ್ಯಾಪಾರ ಹಾಗೂ ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳ ಪುನರ್ವಸತಿ ಕೋರಿ ಲೆಟ್ಜ್ ಕಿಟ್ ಫೌಂಡೇಶನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಅಧಿಕಾರಿ ವಿರುದ್ಧ ಸರ್ಕಾರ ತಕ್ಷಣವೇ ಕ್ರಮ ಕೈಗೊಳ್ಳಬೇಕು. ಈ ಕುರಿತು ಜೂನ್ 18ರೊಳಗೆ ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿದೆ.

ಹೈಕೋರ್ಟ್ ಆದೇಶ
ಹೈಕೋರ್ಟ್ ಆದೇಶ
author img

By

Published : Jun 5, 2021, 10:50 PM IST

ಬೆಂಗಳೂರು: ಮಕ್ಕಳ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಭಾಗಿಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಅಧಿಕಾರಿ ಹಾಗೂ ಈ ಹಿಂದಿನ ವಿಜಯನಗರ ಬಿಇಒ ನಾಗರತ್ನ ವಿರುದ್ಧ ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

ಬೀದಿ ಬದಿ, ರಸ್ತೆಯ ಸಿಗ್ನಲ್ ಗಳಲ್ಲಿ ಹೂ, ಆಟಿಕೆ ವ್ಯಾಪಾರ ಹಾಗೂ ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳ ಪುನರ್ವಸತಿ ಕೋರಿ ಲೆಟ್ಜ್ ಕಿಟ್ ಫೌಂಡೇಶನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಅಧಿಕಾರಿ ವಿರುದ್ಧ ಸರ್ಕಾರ ತಕ್ಷಣವೇ ಕ್ರಮ ಕೈಗೊಳ್ಳಬೇಕು. ಈ ಕುರಿತು ಜೂನ್ 18ರೊಳಗೆ ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿದೆ.

ಪೀಠ ತನ್ನ ಆದೇಶದಲ್ಲಿ, ಪ್ರಾಥಮಿಕ ಶಿಕ್ಷಣ ಇಲಾಖೆ ನಿರ್ದೇಶಕರು ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಅಧಿಕಾರಿ ನಾಗರತ್ನ ನಡೆಸುತ್ತಿರುವ ಸರಯೂ ಚಾರಿಟಬಲ್ ಟ್ರಸ್ಟ್ ಬಗ್ಗೆ ಇಲಾಖೆಗೆ ಯಾವುದೇ ಮಾಹಿತಿ ನೀಡಿಲ್ಲ ಎಂದಿದ್ದಾರೆ. ಅಧಿಕಾರಿಗಳು ಪರಿಶೀಲಿಸಿದಾಗ ಟ್ರಸ್ಟ್ ಅನ್ನು ಅಕ್ರಮವಾಗಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆಸುತ್ತಿರುವುದು ಕಂಡು ಬಂದಿದೆ. ಇನ್ನು ಸರಯೂ ಚಾರಿಟಬಲ್ ಟ್ರಸ್ಟ್ ನಡೆಸುತ್ತಿರುವ ಮಕ್ಕಳ ಆರೈಕೆ ಕೇಂದ್ರದಲ್ಲಿದ್ದ ಮಕ್ಕಳು ನಾಪತ್ತೆಯಾಗಿ, ಮಧ್ಯಪ್ರದೇಶದಲ್ಲಿ ಪತ್ತೆಯಾಗಿದ್ದಾರೆ. ಈ ಸಂಬಂಧ ಮಧ್ಯಪ್ರದೇಶದ ಅಶೋಕ ನಗರ ಜಿಲ್ಲೆಯ ಕಚನಾರ್ ಪೊಲೀಸ್ ಠಾಣೆಯಲ್ಲಿ ಟ್ರಸ್ಟ್ ವಿರುದ್ಧ ಅಂತರಾಜ್ಯ ಮಾನವ ಕಳ್ಳಸಾಗಣೆ ಆರೋಪದಡಿ ಪ್ರಕರಣ ದಾಖಲಾಗಿದೆ. ಯಾವ ಪ್ರಾಧಿಕಾರದಿಂದಲೂ ಅನುಮತಿ ಪಡೆಯದೇ ಮಕ್ಕಳ ಆರೈಕೆ ಕೇಂದ್ರ ನಡೆಸುತ್ತಿರುವ ಅಧಿಕಾರಿ ನಾಗರತ್ನ ವಿರುದ್ಧ ಕ್ರಮ ಜರುಗಿಸಬೇಕು ಎಂದು ಹೈಕೋರ್ಟ್ ನಿರ್ದೇಶಿಸಿದೆ.

ಅಲ್ಲದೇ, ಚಾಮರಾಜಪೇಟೆಯಲ್ಲಿ ದಾಖಲಾದ ಮಕ್ಕಳ ಕಳ್ಳ ಸಾಗಣೆ ಪ್ರಕರಣದಲ್ಲಿ ಒಂದೂವರೆ ವರ್ಷದ ಬಳಿಕ ನಾಲ್ಕು ಆರೋಪಿಗಳನ್ನು ಬಂಧಿಸಲಾಗಿದೆ ಮತ್ತು ಮಗುವನ್ನು ರಕ್ಷಿಸಲಾಗಿದೆ. 50 ಸಾವಿರ ರೂ.ಗೆ ಮಗು ಮಾರಾಟ ಮಾಡಿದ್ದ ಪ್ರಕರಣದಲ್ಲಿ ತನಿಖೆ ಪ್ರಗತಿಯಲ್ಲಿದೆ. ಮಧ್ಯಪ್ರದೇಶದಲ್ಲಿ ಮಗು ರಕ್ಷಣೆ ಮಾಡಿದ ಪ್ರಕರಣದಲ್ಲಿ ಅಧೀನ ನ್ಯಾಯಾಲಯದಲ್ಲಿ ಆರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ಸರ್ಕಾರಿ ವಕೀಲರು ಮಾಹಿತಿ ನೀಡಿದ್ದಾರೆ. ಈ ನಿಟ್ಟಿನಲ್ಲಿ ಕಾನೂನು ಸೇವಾ ಪ್ರಾಧಿಕಾರ ನೀಡಿರುವ ಶಿಫಾರಸ್ಸಿನಂತೆ ಮಕ್ಕಳ ಕಳ್ಳ ಸಾಗಾಣೆ ಪ್ರಕರಣಗಳ ಕುರಿತು ತನಿಖೆ ನಡೆಸಲು ತಜ್ಞರನ್ನೊಳಗೊಂಡ ವಿಶೇಷ ತಂಡ ರಚಿಸುವ ಅಗತ್ಯವಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ತ್ವರಿತವಾಗಿ ತನ್ನ ನಿಲುವು ತಿಳಿಸಬೇಕು ಎಂದು ನಿರ್ದೇಶಿಸಿದೆ.

ಪ್ರಕರಣದ ಹಿನ್ನೆಲೆ : ಬೀದಿಬದಿ ಹಾಗೂ ರಸ್ತೆಗಳಲ್ಲಿ ಆಟಿಕೆ ಮಾರುವ ಮತ್ತು ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳನ್ನು ಗುರುತಿಸಲು ಹೈಕೋರ್ಟ್ ನಿರ್ದೇಶನದಂತೆ ಕಾನೂನು ಸೇವಾ ಪ್ರಾಧಿಕಾರ ಸಮೀಕ್ಷೆ ನಡೆಸಿತ್ತು. ಈ ವೇಳೆ ವಿಜಯನಗರದಲ್ಲಿ ಬಿಇಒ ಆಗಿ ಕೆಲಸ ಮಾಡುತ್ತಿದ್ದು, ನಂತರ ಮಧ್ಯಾಹ್ನದ ಬಿಸಿಯೂಟ ವಿಭಾಗಕ್ಕೆ ವರ್ಗಾವಣೆಗೊಂಡಿದ್ದ ಅಧಿಕಾರಿ ನಾಗರತ್ನ ನಡೆಸುತ್ತಿದ್ದ ಸರಯೂ ಚಾರಿಟಬಲ್ ಟ್ರಸ್ಟ್ ನ ನಾಲ್ಕು ಮಕ್ಕಳು ತಮ್ಮ ಪೋಷಕರ ಜೊತೆ ಮಧ್ಯಪ್ರದೇಶಕ್ಕೆ ತೆರಳಿದವರು ಪುನಃ ಬಂದಿಲ್ಲ ಎಂಬ ಮಾಹಿತಿ ಲಭ್ಯವಾಗಿತ್ತು. ತಕ್ಷಣ ಕಾರ್ಯ ಪ್ರವೃತ್ತರಾದ ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ಎಚ್. ಶಶಿಧರ್ ಶೆಟ್ಟಿ ನೇತೃತ್ವದ ತಂಡ ಮಧ್ಯಪ್ರದೇಶದ ಕಾನೂನು ಪ್ರಾಧಿಕಾರವನ್ನು ಸಂಪರ್ಕಿಸಿ ಮಕ್ಕಳ ಪತ್ತೆ ಮಾಡಿತ್ತು.

ಈ ವೇಳೆ, ಸಂಪರ್ಕಕ್ಕೆ ಸಿಕ್ಕ ಮಕ್ಕಳು, ತಮ್ಮನ್ನು ಸರಯೂ ಟ್ರಸ್ಟ್ ನಲ್ಲಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡ ಮಾಹಿತಿ ನೀಡಿದ್ದರು. ಪ್ರಾಧಿಕಾರದ ಸದಸ್ಯರು ವಿಜಯನಗರದ ಸರಯೂ ಟ್ರಸ್ಟ್ ಗೆ ಭೇಟಿ ನೀಡಿ ಪರಿಶೀಲಿಸಿದಾಗ ಕಳೆದ 8 ವರ್ಷದಿಂದ ವಿಜಯನಗರ ಭಾಗದಲ್ಲಿ ಭಿಕ್ಷಾಟನೆ ಮತ್ತು ಬೀದಿ ಬದಿ ಆಟಿಕೆಗಳ ಮಾರಾಟದಲ್ಲಿ ತೊಡಗಿದ್ದ 33 ಮಕ್ಕಳನ್ನು ನಿಯಂತ್ರಿಸುತ್ತಿದ್ದ ಅಂಶ ಬಯಲಾಗಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.