ಬೆಂಗಳೂರು: ಮತದಾರರ ವೈಯಕ್ತಿಕ ಮಾಹಿತಿ ಸಂಗ್ರಹ ಪ್ರಕರಣ ಸಂಬಂಧ ನಾಲ್ಕನೇ ಆರೋಪಿಯನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ.
ಲೋಕೇಶ್ ಬಂಧಿತ ಆರೋಪಿ. ಪ್ರಕರಣದ ಪ್ರಮುಖ ಆರೋಪಿ ರವಿಕುಮಾರ್ ಆಪ್ತನಾಗಿದ್ದು, ಮತದಾರರ ವೈಯಕ್ತಿಕ ಮಾಹಿತಿ ಸಂಗ್ರಹ ಹಾಗೂ ದುರ್ಬಳಕೆ ಕೃತ್ಯಗಳಲ್ಲಿ ಭಾಗಿಯಾಗಿದ್ದ.
ಈ ಬಗ್ಗೆ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಮಾತನಾಡಿ, ಪ್ರಕರಣ ಸಂಬಂಧ ಮತ್ತೊಬ್ಬನನ್ನು ಬಂಧಿಸಲಾಗಿದೆ. ಈಗಾಗಲೇ ಕಾಡುಗೋಡಿ ಮತ್ತು ಹಲಸೂರು ಗೇಟ್ ಪೊಲೀಸ್ ಠಾಣೆಗಳಲ್ಲಿ ಎರಡು ಎಫ್ಐಆರ್ ದಾಖಲಾಗಿದ್ದವು. ಆತನನ್ನ ಬಂಧಿಸಿ ಒಂದು ಸುತ್ತು ವಿಚಾರಣೆ ಮಾಡಲಾಗಿದೆ. ಹೆಚ್ಚಿನ ವಿಚಾರಣೆ ಮಾಡಲಾಗ್ತಿದೆ. ಈತ ಕೇಸ್ ನ ಮುಖ್ಯ ಆರೋಪಿ ರವಿಕುಮಾರ್ ಆಪ್ತನಾಗಿದ್ದ. ಸದ್ಯ ಹೆಚ್ಚಿನ ತನಿಖೆ ಮುಂದುವರೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.