ETV Bharat / state

ಚಿಲುಮೆಯಿಂದ ಒಂದೇ ತಿಂಗಳಲ್ಲಿ ಹಲವು ಮತದಾರರ ಹೆಸರು ರದ್ದು; ತನಿಖೆ ಚುರುಕು

ಚಿಲುಮೆ ಸಂಸ್ಥೆಯ ಮೇಲಿರುವ ಮತದಾರರ ಮಾಹಿತಿ ಕಳವು ಆರೋಪ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಅಮಾನತುಗೊಂಡಿರುವ ಇಬ್ಬರು ಐಎಎಸ್ ಅಧಿಕಾರಿಗಳನ್ನು ವಿಚಾರಣೆಗೊಳಪಡಿಸಲು ರಾಜ್ಯ ಸರ್ಕಾರ ಮುಂದಾಗಿದೆ.

Election Commission
ಚುನಾವಣಾ ಆಯೋಗ
author img

By

Published : Nov 27, 2022, 7:26 AM IST

Updated : Nov 27, 2022, 8:15 AM IST

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಚಿಲುಮೆ ಸಂಸ್ಥೆಯ ಸಿಬ್ಬಂದಿ ಒಂದೇ ತಿಂಗಳಿನಲ್ಲಿ ದೊಡ್ಡ ಸಂಖ್ಯೆಯ ಮತದಾರರ ಹೆಸರನ್ನು ರದ್ದು ಮಾಡಿದ್ದರು ಎನ್ನುವ ಮಾಹಿತಿ ಹೊರಬಿದ್ದಿದೆ. ಇದಕ್ಕೆ ಸ್ಥಳೀಯ ಅಧಿಕಾರಿಗಳು ಸಹಕಾರ ನೀಡಿರುವ ಕುರಿತು ದೂರು ಕೇಳಿಬಂದಿದೆ.

ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಸ್ಥಳಕ್ಕೆ ಭೇಟಿ ನೀಡದೆ, ಕಡತಗಳನ್ನು ಒಂದು ಕೊಠಡಿಯಲ್ಲಿ ಇರಿಸಿಕೊಂಡು, ಆನ್‌ಲೈನ್‌ನಲ್ಲಿಯೇ ಹಲವರು ಹೆಸರುಗಳನ್ನು ಏಕಾಏಕಿ ರದ್ದು ಮಾಡಿ, ದಾಖಲೆ ಸಿಗದಂತೆ ಮರೆಮಾಚಿದ್ದರು ಎಂದು ಹೇಳಲಾಗುತ್ತಿದೆ. ಮತದಾರರ ಪಟ್ಟಿ ಪರಿಷ್ಕರಣೆಗೆ ಅನುಮತಿ ನೀಡಲು ಬಿಬಿಎಂಪಿ ಅಧಿಕಾರಿಗಳು ಚಿಲುಮೆ ಸಂಸ್ಥೆಯಿಂದ ಲಕ್ಷಾಂತರ ರೂ ಹಣ ಪಡೆದಿರುವ ಆರೋಪವೂ ಇದೆ. ಹಣ ಪಾವತಿ ಮಾಡಿದ ಮೇಲೆಯೇ ಅಧಿಕಾರಿಗಳು ಅನುಮತಿ ನೀಡಿದ್ದರು ಎಂದು ಎನ್ನಲಾಗುತ್ತಿದೆ.

3 ತಿಂಗಳಲ್ಲಿ ಮತದಾರರ ಸಂಪೂರ್ಣ ಮಾಹಿತಿ ಸಂಗ್ರಹ: ಚಿಲುಮೆ ಸಂಸ್ಥೆ ಅನುಮತಿ ಪಡೆದು 3 ತಿಂಗಳಲ್ಲಿ ಮತದಾರರ ಸಂಪೂರ್ಣ ಮಾಹಿತಿ ಸಂಗ್ರಹಿಸಿತ್ತು. ಮಾಹಿತಿ ಸಂಗ್ರಹಿಸಲು ಹಲವು ಸಂಘ- ಸಂಸ್ಥೆಗಳಿಗೆ ಹಣ ಪಾವತಿ ಮಾಡಿದೆ. ಚಿಲುಮೆ ಸಂಸ್ಥೆಯು ಪಾಲಿಕೆ ಚುನಾವಣೆ ಬರುತ್ತಿದೆ ಎಂಬ ಕಾರಣಕ್ಕೆ 5 ಸಾವಿರ ಸಿಬ್ಬಂದಿಯನ್ನು ಸರ್ವೇಗೆ ನೇಮಿಸಿತ್ತು ಎಂದು ತಿಳಿದು ಬಂದಿದೆ.

ಇಬ್ಬರ ಐಎಎಸ್ ಅಧಿಕಾರಿಗಳನ್ನು ವಿಚಾರಣೆ: ಮತದಾರರ ಮಾಹಿತಿ ಕದ್ದ ಚಿಲುಮೆ ಸಂಸ್ಥೆ ಹಗರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಅಮಾನತಾಗಿರುವ ಇಬ್ಬರು ಐಎಎಸ್ ಅಧಿಕಾರಿಗಳನ್ನು ವಿಚಾರಣೆಗೊಳಪಡಿಸಲು ಸರ್ಕಾರ ಮುಂದಾಗಿದೆ.

ಕೇಂದ್ರ ಚು. ಆಯೋಗದಿಂದ ನಿರ್ದೇಶನ: ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿದ್ದ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಹಾಗೂ ಬೆಂಗಳೂರಿನ ಮೂರು ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ ಉಸ್ತುವರಿಯೂ ವಹಿಸಿದ್ದ ಬಿಬಿಎಂಪಿ ವಿಶೇಷ ಆಯುಕ್ತ ಎಸ್. ರಂಗಪ್ಪ ಅವರ ಅಮಾನತಿಗೆ ಕೇಂದ್ರ ಚುನಾವಣಾ ಆಯೋಗ ಇತ್ತೀಚೆಗೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

ಚಿಲುಮೆ ಸಿಬ್ಬಂದಿಯಿಂದ ಗುರುತಿನ ಚೀಟಿ ವಿತರಣೆ: ಪ್ರಮುಖವಾಗಿ ಬೆಂಗಳೂರಿನಲ್ಲಿ ಮತದಾರರ ಪರಿಷ್ಕರಣೆಯಲ್ಲಿ ಖಾಸಗಿ ವ್ಯಕ್ತಿ ಎಂದರೆ ಚಿಲುಮೆ ಸಂಸ್ಥೆಯ ಸಿಬ್ಬಂದಿಗೆ ಚುನಾವಣಾ ಅಧಿಕಾರಿ, ಸಿಬ್ಬಂದಿ ಎಂದು ಗುರುತಿನ ಚೀಟಿ ನೀಡಿದ್ದು ಏಕೆ ಎನ್ನುವ ಕುರಿತು ತನಿಖೆ ನಡೆಸಲಾಗುತ್ತಿದೆ. ಕೆಳದರ್ಜೆಯ ಸಿಬ್ಬಂದಿ ಕಾರ್ಯವೈಖರಿ ಕುರಿತು ಗಮನ ನೀಡದ ಹಿನ್ನೆಲೆಯಲ್ಲಿ ಈ ಇಬ್ಬರು ಅಧಿಕಾರಿಗಳ ತಲೆದಂಡ ಆಗಿದೆ ಎಂದು ಹೇಳಲಾಗುತ್ತಿದೆ.

ಖಾಸಗಿ ಸಂಸ್ಥೆಗಳಿಂದ ಜನಜಾಗೃತಿ ಮಾತ್ರ: ಜನಜಾಗೃತಿ ನಿಟ್ಟಿನಲ್ಲಿ ಖಾಸಗಿ ಸಂಸ್ಥೆಗಳೊಂದಿಗೆ ಕೈಜೋಡಿಸಬಹುದೇ ವಿನಃ, ಅವರ ಕೈಯಿಂದಲೇ ಚುನಾವಣಾ ಪ್ರಕ್ರಿಯೆ, ಮತದಾರರ ಪಟ್ಟಿಗೆ ಸಂಬಂಧಿಸಿದ ಕೆಲಸಗಳನ್ನು ಮಾಡುವಂತಿಲ್ಲ. ಆದರೂ, ಹಿರಿಯ ಅಧಿಕಾರಿಗಳು ಸೇರಿದಂತೆ ಅನೇಕರು ಮೈಮರೆತು ಮಾಡಿರುವ ಕೆಲಸದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ ಎನ್ನಲಾಗಿದೆ.

ಹೊಸ ಅಧಿಕಾರಿಗಳ ನೇಮಕ: ಚುನಾವಣಾ ಪೂರ್ವ ತಯಾರಿ ಪ್ರಕ್ರಿಯೆಯ ಮುಂದಿನ ಕಾರ್ಯವನ್ನು ಕೈಗೊಳ್ಳಲು ಐಎಎಸ್ ಅಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರನ್ನು ಶಿವಾಜಿನಗರಕ್ಕೆ, ಡಾ.ಆರ್.ವಿಶಾಲ್ ಅವರನ್ನು ಚಿಕ್ಕಪೇಟೆಗೆ ಹಾಗೂ ಅಜಯ್ ನಾಗಭೂಷಣ್ ಅವರನ್ನು ಮಹದೇವಪುರಕ್ಕೆ ನೇಮಕ ಮಾಡಲಾಗಿದ್ದು, ಸೋಮವಾರ ಈ ತಂಡದ ಕಾರ್ಯ ಆರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ.

ನೂತನವಾಗಿ ಮತದಾರರ ಪಟ್ಟಿ ಪರಿಷ್ಕರಣೆ: ಈಗ ಸಂಗ್ರಹಿಸಿರುವ ವಿಧಾನಸಭಾ ಕ್ಷೇತ್ರವಾರು ಮತದಾರರ ಯಾವುದೇ ಮಾಹಿತಿಯನ್ನು ಬಳಕೆ ಮಾಡದಂತೆ ಸೂಚನೆ ನೀಡಲಾಗಿದೆ. ಬೆಂಗಳೂರಿನ ಮೂರು ಕ್ಷೇತ್ರಗಳಲ್ಲಿ ಮತ್ತೊಮ್ಮೆ ಸಂಪೂರ್ಣ ನೂರಕ್ಕೆ ನೂರಷ್ಟು ಮತದಾರರ ಪರಿಷ್ಕರಣೆ ನಡೆಯಬೇಕು ಎಂದು ಆಯೋಗ ಉಲ್ಲೇಖಿಸಿದೆ. ಹೀಗಾಗಿ, ನೂತನವಾಗಿ ಮತದಾರರ ಪಟ್ಟಿ ಪರಿಷ್ಕರಣೆ ಜರುಗಲಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಮತದಾರರ ಪರಿಷ್ಕರಣೆ ಅಕ್ರಮ: ಬೂತ್ ಮಟ್ಟದ ಅಧಿಕಾರಿಗಳು ಸೇರಿ ಮತ್ತೆ ಐವರ ಬಂಧನ

Last Updated : Nov 27, 2022, 8:15 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.