ETV Bharat / state

ಮಠದಲ್ಲಿ ಸತತ ಅಪರಾಧ ಕೃತ್ಯಗಳ ಹಿನ್ನೆಲೆ: ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆ ಅಡಿ ಕ್ರಮ - ಈಟಿವಿ ಭಾರತ ಕನ್ನಡ

ಚಿತ್ರದುರ್ಗದ ಮುರುಘಾ ಮಠ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ - ಮಠದಲ್ಲಿ ಸರಣಿ ಅಪರಾಧ ಪ್ರಕರಣಗಳು ತನಿಖೆಯಲ್ಲಿ ಕಂಡು ಬಂದ ಹಿನ್ನೆಲೆ - ಹೈಕೋರ್ಟ್​ಗೆ ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆ ಅಡಿ ಕ್ರಮ ಕೈಗೊಳ್ಳಲಾಗಿದೆ ಎಂದ ರಾಜ್ಯ ಸರ್ಕಾರ

chithradurga-murugha-math-case-action-taken-under-prevention-of-abuse-of-religious-institutions-act
ಮಠದಲ್ಲಿ ಸತತ ಅಪರಾಧ ಕೃತ್ಯಗಳ ಹಿನ್ನಲೆ : ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆ ಅಡಿ ಕ್ರಮ
author img

By

Published : Mar 2, 2023, 10:39 PM IST

Updated : Mar 2, 2023, 11:02 PM IST

ಬೆಂಗಳೂರು : ಚಿತ್ರದುರ್ಗದ ಮುರುಘ ರಾಜೇಂದ್ರ ಬೃಹನ್ಮಠದ ವಿರುದ್ಧ ನಡೆದ ತನಿಖೆಯಲ್ಲಿ ಸತತ ಅಪರಾಧಗಳು ನಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆಯನ್ನು ಪ್ರಯೋಗಿಸಲಾಗಿದೆ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ತಿಳಿಸಿದೆ.

ಚಿತ್ರದುರ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ಮಠದ ತಾತ್ಕಾಲಿಕ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ಪೀಠದ ಮುಂದೆ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ವಾದ ಮಂಡಿಸಿದರು. ಅಲ್ಲದೇ, ಇದೇ ಕಾರಣದಿಂದ ಮಠ ಹಾಗೂ ಅದರ ವಿದ್ಯಾಸಂಸ್ಥೆಗಳ ವಿಚಾರಗಳಲ್ಲಿ ಪೀಠಾಧಿಪತಿ ಶಿವಮೂರ್ತಿ ಶರಣರು ಅಧಿಕಾರ ಚಲಾವಣೆ ಮಾಡಲು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನಿರ್ಬಂಧ ವಿಧಿಸಿದೆ ಎಂದು ವಿವರಿಸಿದರು.

ಮಠದಲ್ಲಿ ಸರಣಿಯೋಪಾದಿಯಲ್ಲಿ ಅಪರಾಧಗಳು ನಡೆದಿವೆ ಎಂಬ ಅಂಶ ತನಿಖಾಧಿಕಾರಿಗಳ ತನಿಖೆಯಿಂದ ಮೇಲ್ನೋಟಕ್ಕೆ ಕಂಡುಬಂದಿದೆ. ಅದಕ್ಕಾಗಿ ಈ ಕಾಯ್ದೆಯನ್ನೂ ತನಿಖಾಧಿಕಾರಿಗಳು ದೋಷಾರೋಪಟ್ಟಿಯಲ್ಲಿ ಸೇರಿಸಿದ್ದಾರೆ. ಇದನ್ನು ಪರಿಗಣಿಸಿರುವ ನ್ಯಾಯಾಲಯ ಶ್ರೀಗಳ ಅಧಿಕಾರ ಚಲಾವಣೆಗೆ ನಿರ್ಬಂಧ ವಿಧಿಸಿದೆ ಎಂದು ವಿವರಿಸಿದರು. ಅಲ್ಲದೆ, ಈ ಆದೇಶ ಅತ್ಯಂತ ಸಮಂಜಸವಾಗಿದೆ. ಇನ್ನು ಪೀಠಾಧಿಪತಿಯನ್ನು ಕೇವಲ ಮಠದ ಜವಾಬ್ದಾರಿಯಿಂದ ಮಾತ್ರವೇ ದೂರವಿಡುವಂತೆ ನಿರ್ಬಂಧಕಾಜ್ಞೆ ನೀಡಿದರೆ ಮತ್ತೊಂದಷ್ಟು ಕೆಟ್ಟ ಪರಿಣಾಮಗಳನ್ನು ಕಾರಣವಾಗಬಹುದು ಎಂದು ನ್ಯಾಯಪೀಠಕ್ಕೆ ವಿವರಣೆ ನೀಡಿದರು.

ಇದಕ್ಕೂ ಮುನ್ನ ವಾದ ಮಂಡಿಸಿದ್ದ ಅರ್ಜಿದಾರರ ಪರ ವಕೀಲರು, ಧಾರ್ಮಿಕ ಸಂಸ್ಥೆಗಳಲ್ಲಿ ಸರಣಿಯೋಪಾದಿಯಲ್ಲಿ ಅನೈತಿಕ ಚಟುವಟಿಕೆಗಳು ನಡೆದಿಲ್ಲ. ಒಂದು ಬಾರಿ ಮಾತ್ರವೇ ಘಟಿಸಿದೆ ಎನ್ನಲಾಗಿದೆ. ಅದನ್ನೇ ನೆಪವಾಗಿಟ್ಟುಕೊಂಡು, ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆ ಅನ್ವಯಿಸಿ, ಶರಣರ ಅಧಿಕಾರ ಚಲಾವಣೆಗೆ ನಿರ್ಬಂಧ ಹೇರಿರುವುದು ನ್ಯಾಯಸಮ್ಮತವಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದ್ದರು. ಅಡ್ವೊಕೇಟ್ ಜನರಲ್ ಅವರ ವಾದಕ್ಕೆ ಉತ್ತರಿಸಲು ಅರ್ಜಿದಾರ ಪರ ವಕೀಲರು ಸಮಯಾವಕಾಶ ಕೋರಿದ್ದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮಾರ್ಚ್ 23ಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ : ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಾಯಿದೆಯಡಿ ಚಿತ್ರದುರ್ಗದ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರು 2020ರ ಸೆ.1ರಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ತನಿಖಾಧಿಕಾರಿಗಳು ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆಯನ್ನೂ ಸೇರ್ಪಡೆ ಮಾಡಿದ್ದರು. ಈ ಕಾಯ್ದೆಯ ಅನ್ವಯ ಶರಣರನ್ನು ಪೀಠಾಧಿಪತಿ ಅಧಿಕಾರ ಚಲಾಯಿಸುವಿಕೆಯಿಂದ ನಿರ್ಬಂಧಿಸಬೇಕು ಎಂದು ಭಕ್ತರು ಸೆಷನ್ಸ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಈ ದಾವೆ ಪುರಸ್ಕರಿಸಿ ಸೆಷನ್ಸ್ ನ್ಯಾಯಾಲಯ ಶರಣರ ಅಧಿಕಾರ ಚಲಾವಣೆಗೆ ನಿರ್ಬಂಧ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಮಠದ ಪರವಾಗಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ಇದನ್ನೂ ಓದಿ : ಸಣ್ಣ ಕಾರಣಗಳಿಗೆ 'ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆ' ಅನ್ವಯ ಮಾಡಿದರೆ ತೊಂದರೆ: ವಕೀಲ ಸಿ.ವಿ ನಾಗೇಶ್‌

Last Updated : Mar 2, 2023, 11:02 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.