ETV Bharat / state

ಮುರುಘಾ ಶ್ರೀ ವಿರುದ್ಧ ಪ್ರಕರಣ ದಾಖಲಿಸಲು ಪ್ರಚೋದನೆ ಆರೋಪ: ಜ.31ಕ್ಕೆ ಅರ್ಜಿ ವಿಚಾರಣೆ - ಮುರುಘಾ ಮಠದ ಶಿವಮೂರ್ತಿ ಶರಣರು

ಮುರುಘಾ ಮಠದ ಶಿವಮೂರ್ತಿ ಶರಣರ ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಎಸ್.ಕೆ.ಬಸವರಾಜನ್ ಹಾಗೂ ಅವರ ಪತ್ನಿ ಸೌಭಾಗ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.

High court
ಹೈಕೋರ್ಟ್
author img

By

Published : Jan 18, 2023, 7:09 AM IST

ಬೆಂಗಳೂರು: ಚಿತ್ರದುರ್ಗದ ಮುರುಘಾರಾಜೇಂದ್ರ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರ ವಿರುದ್ಧ ಪ್ರಕರಣ ದಾಖಲಿಸಲು ಸಂತ್ರಸ್ತರಿಗೆ ಪ್ರಚೋದನೆ ನೀಡಿದ ಆರೋಪ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ. ಬಸವರಾಜನ್ ಹಾಗೂ ಅವರ ಪತ್ನಿ ಸೌಭಾಗ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಜನವರಿ 31ಕ್ಕೆ ಹೈಕೋರ್ಟ್ ಮುಂದೂಡಿದೆ. ಎಸ್.ಕೆ.ಬಸವರಾಜನ್ ಮತ್ತವರ ಪತ್ನಿ ಸೌಭಾಗ್ಯ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ನ್ಯಾಯಪೀಠ ವಿಚಾರಣೆ ಮುಂದೂಡಿತು. ವಿಚಾರಣೆಯಲ್ಲಿ ಅರ್ಜಿದಾರರ ಪರ ವಕೀಲರು ಹಾಜರಾಗಿರಲಿಲ್ಲ. ಹೀಗಾಗಿ ಮುಂದೂಡಲಾಗಿದೆ.

ಪ್ರಕರಣವೇನು?: ಶಿವಮೂರ್ತಿ ಮುರುಘಾ ಶರಣರು ನನ್ನ ಇಬ್ಬರು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಸಂತ್ರಸ್ತೆ ಬಾಲಕಿಯರ ತಾಯಿ 2022ರ ಅಕ್ಟೋಬರ್ 13ರಂದು ಮೈಸೂರಿನ ನಜರ್ಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರು ದಾಖಲಿಸುವ ಹಿಂದೆ ಎಸ್.ಕೆ.ಬಸವರಾಜನ್ ಮತ್ತು ಅವರ ಪತ್ನಿ ಸೌಭಾಗ್ಯ ಅವರ ಪಿತೂರಿ ನಡೆಸಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ ಎನ್ನಲಾದ ಆಡಿಯೋ ಹಾಗೂ ವಿಡಿಯೋ ದಾಖಲೆಗಳ ಆಧಾರದಲ್ಲಿ ಚಿತ್ರದುರ್ಗ ಗ್ರಾಮೀಣ ಠಾಣೆ ಪೊಲೀಸರು, ಪತಿ-ಪತ್ನಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು.

ಪೊಲೀಸರು ಕಾನೂನುಬಾಹಿರವಾಗಿ ನಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಇದು ನಮ್ಮ ಮೂಲಭೂತ ಹಕ್ಕಿನ ಉಲ್ಲಂಘನೆ. ಅಂತೆಯೇ ಇದು ನಮ್ಮ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಕ್ರಮ. ಆದ್ದರಿಂದ ಈ ಕುರಿತ ಎಫ್‌ಐಆರ್ ರದ್ದುಗೊಳಿಸಬೇಕು ಎಂದು ಬಸವರಾಜನ್ ಮತ್ತು ಸೌಭಾಗ್ಯ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರಕರಣದಲ್ಲಿ ಚಿತ್ರದುರ್ಗ ಗ್ರಾಮೀಣ ಠಾಣೆ ಪೊಲೀಸರು ಹಾಗೂ ಮುರುಘಾ ಶರಣರಿಂದ ತಾತ್ಕಾಲಿಕ ವ್ಯವಸ್ಥೆಗಾಗಿ ನೇಮಕಗೊಂಡಿರುವ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಆಡಳಿತಾಧಿಕಾರಿ ಅರ್ಜಿ ವಿಚಾರಣೆ: ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್.ವಸ್ತ್ರದ ಅವರನ್ನು ಶ್ರೀ ಜಗದ್ಗುರು ಮುರುಘರಾಜೇಂದ್ರ (ಎಸ್ಜೆಎಂ) ಬೃಹನ್ಮಠಕ್ಕೆ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಬುಧವಾರ (ಜ.18) ಕೈಗೆತ್ತಿಕೊಳ್ಳಲಿದೆ. ಎಸ್ಜೆಎಂ ವಿದ್ಯಾಪೀಠದ ಅಧ್ಯಕ್ಷ, ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಮತ್ತು ಭಕ್ತರು ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ಏಕಸದಸ್ಯ ನ್ಯಾಯಪೀಠ ಬೆಳಗಿನ ಕಲಾಪದಲ್ಲಿ ಹೆಚ್ಚಿನ ವಿಚಾರಣೆ ಬರುವ ಸಾಧ್ಯತೆಯಿದೆ. ಶಿವಮೂರ್ತಿ ಮುರುಘಾ ಶರಣರು, ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಜೈಲು ಸೇರಿದ್ದು, ರಾಜ್ಯ ಸರ್ಕಾರ ಪಿ.ಎಸ್.ವಸ್ತ್ರದ ಅವರನ್ನು 2022ರ ಡಿಸೆಂಬರ್ 13 ರಂದು ಮಠಕ್ಕೆ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿತ್ತು. ಅವರು 2022ರ ಡಿಸೆಂಬರ್ 15ರಂದು ಅಧಿಕಾರ ಸ್ವೀಕರಿಸಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ ಮುರುಘಾ ಶ್ರೀ ವಿರುದ್ಧದ ಷಡ್ಯಂತ್ರ.. ಆರೋಪಿ ಬಸವರಾಜನ್​ಗೆ ಜಾಮೀನು

ಆರೋಪಿ ಬಸವರಾಜನ್​ಗೆ ಜಾಮೀನು: ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಸಂಬಂಧ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಸುಳ್ಳು ಕೇಸು ದಾಖಲಿಸಲು ಕ್ರಿಮಿನಲ್ ಸಂಚು ರೂಪಿಸಿದ ಆರೋಪದಡಿ ಬಂಧನಕ್ಕೆ ಒಳಗಾಗಿದ್ದ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಹಾಗೂ ಮಾಜಿ ಶಾಸಕ ಎಸ್.ಕೆ.ಬಸವರಾಜನ್​ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಇದಕ್ಕೂ ಮುನ್ನ, ಬಾಲಕಿಯರ ಆರೋಪದ ಹಿನ್ನೆಲೆಯಲ್ಲಿ ಪೋಕ್ಸೋ ಪ್ರಕರಣದನ್ವಯ ಮುರುಘಾ ಶ್ರೀಗಳನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಮುರುಘಾ ಶ್ರೀ ವಿರುದ್ಧ ಮತ್ತೊಂದು ದೂರು ದಾಖಲು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.