ಬೆಂಗಳೂರು: ಚಿತ್ರದುರ್ಗ ಮುರುಘಾ ಮಠ ಸ್ವಾಮೀಜಿ ವಿರುದ್ಧದ ಆರೋಪ ಗಂಭೀರ ಸ್ವರೂಪದ್ದಾಗಿದೆ. ಪೊಲೀಸರು ಯಾವುದೇ ಒತ್ತಡಕ್ಕೊಳಗಾಗದೇ ಸಂತ್ರಸ್ತ ವಿದ್ಯಾರ್ಥಿನಿಯರ ದೂರಿನ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಸತ್ಯಸಂಗತಿಯನ್ನು ಬಹಿರಂಗಗೊಳಿಸಬೇಕು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಹಾಗೆಯೇ ಮುರುಘಾ ಮಠದ ಶ್ರೀಗಳ ಬಂಧನ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಶ್ರೀಗಳ ಬಂಧನದ ಬಗ್ಗೆ ನಾನು ಚರ್ಚೆ ಮಾಡದಿರುವುದೇ ಸೂಕ್ತ. ಸರ್ಕಾರ ಜವಾಬ್ದಾರಿಯುತವಾಗಿ ಏನೇನು ತೀರ್ಮಾನ ಮಾಡಬೇಕೋ ಮಾಡಲಿ ಎಂದು ಹೇಳಿದರು.
-
ಚಿತ್ರದುರ್ಗದ
— Siddaramaiah (@siddaramaiah) September 2, 2022 " class="align-text-top noRightClick twitterSection" data="
ಮುರುಘಾ ಮಠದ ಸ್ವಾಮಿಗಳ ವಿರುದ್ಧದ ಆರೋಪ ಗಂಭೀರ ಸ್ವರೂಪದ್ದಾಗಿದೆ.
ಪೊಲೀಸರು ಯಾವುದೇ ಒತ್ತಡಕ್ಕೊಳಗಾಗದೆ ಸಂತ್ರಸ್ತ ವಿದ್ಯಾರ್ಥಿನಿಯರ ದೂರಿನ ಬಗ್ಗೆ ನಿಷ್ಪಕ್ಷಪಾತವಾಗಿ
ತನಿಖೆ ನಡೆಸಿ ಸತ್ಯಸಂಗತಿಯನ್ನು ಬಹಿರಂಗಗೊಳಿಸಬೇಕು.
">ಚಿತ್ರದುರ್ಗದ
— Siddaramaiah (@siddaramaiah) September 2, 2022
ಮುರುಘಾ ಮಠದ ಸ್ವಾಮಿಗಳ ವಿರುದ್ಧದ ಆರೋಪ ಗಂಭೀರ ಸ್ವರೂಪದ್ದಾಗಿದೆ.
ಪೊಲೀಸರು ಯಾವುದೇ ಒತ್ತಡಕ್ಕೊಳಗಾಗದೆ ಸಂತ್ರಸ್ತ ವಿದ್ಯಾರ್ಥಿನಿಯರ ದೂರಿನ ಬಗ್ಗೆ ನಿಷ್ಪಕ್ಷಪಾತವಾಗಿ
ತನಿಖೆ ನಡೆಸಿ ಸತ್ಯಸಂಗತಿಯನ್ನು ಬಹಿರಂಗಗೊಳಿಸಬೇಕು.ಚಿತ್ರದುರ್ಗದ
— Siddaramaiah (@siddaramaiah) September 2, 2022
ಮುರುಘಾ ಮಠದ ಸ್ವಾಮಿಗಳ ವಿರುದ್ಧದ ಆರೋಪ ಗಂಭೀರ ಸ್ವರೂಪದ್ದಾಗಿದೆ.
ಪೊಲೀಸರು ಯಾವುದೇ ಒತ್ತಡಕ್ಕೊಳಗಾಗದೆ ಸಂತ್ರಸ್ತ ವಿದ್ಯಾರ್ಥಿನಿಯರ ದೂರಿನ ಬಗ್ಗೆ ನಿಷ್ಪಕ್ಷಪಾತವಾಗಿ
ತನಿಖೆ ನಡೆಸಿ ಸತ್ಯಸಂಗತಿಯನ್ನು ಬಹಿರಂಗಗೊಳಿಸಬೇಕು.
ಈ ರೀತಿಯ ಘಟನೆ ನಡೆಯಬಾರದಿತ್ತು ಎನ್ನುವುದು ನನ್ನ ಅಭಿಪ್ರಾಯ. ಇವೆಲ್ಲ ತುಂಬಾ ಸೂಕ್ಷ್ಮ ವಿಚಾರ. ಮೊದಲೇ ನಮ್ಮ ರಾಜ್ಯ ಭಾವನಾತ್ಮಕ, ಆಚಾರ ವಿಚಾರಗಳನ್ನ ಇಟ್ಟುಕೊಂಡಿದೆ. ಇಂತಹ ವಿಚಾರಗಳಲ್ಲಿ ನಾವು ಚರ್ಚೆ ಮಾಡದೇ ಇರುವುದೇ ಸೂಕ್ತ. ಸರ್ಕಾರದ ಮಟ್ಟದಲ್ಲಿ ಏನು ತನಿಖೆ ಮಾಡಬೇಕೋ ಮಾಡಲಿ. ತನಿಖೆ ವಿಳಂಬದ ಬಗ್ಗೆ ಸರ್ಕಾರಕ್ಕೆ ಸಂಬಂಧಿಸಿದ್ದು, ಈ ಬಗ್ಗೆ ನಾನು ಹೆಚ್ಚು ಚರ್ಚೆ ಮಾಡಲ್ಲ ಎಂದರು.
ಮುರುಘಾ ಶ್ರೀಗಳ ಬಂಧನ ವಿಚಾರದಲ್ಲಿ ಸತ್ಯಾಸತ್ಯತೆ ಹೊರಗಡೆ ಬರಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಅಭಿಪ್ರಾಯಪಟ್ಟಿದ್ದಾರೆ. ಜೆಡಿಎಸ್ನ ಪಂಚರತ್ನ ರಥ ಯಾತ್ರೆ ಕಾರ್ಯಕ್ರಮದ ಕುರಿತು ಚರ್ಚಿಸಲು ಇಂದು ಪಕ್ಷದ ಕಚೇರಿ ಜೆಪಿ ಭವನದಲ್ಲಿ ಕರೆದಿರುವ ಸಭೆಗೂ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಕ್ಕಳ ಹೇಳಿಕೆ ಏನಿದೆ, ಬಸವರಾಜ್, ಅವರ ಪತ್ನಿ ಪಾತ್ರ ಏನಿದೆ, ಇದೆಲ್ಲದರ ಬಗ್ಗೆ ತನಿಖೆಯಾಗಲಿ ಎಂದರು.
ಇನ್ನು ಮುರುಘಾ ಶ್ರೀಗಳ ಬಗ್ಗೆ ಮಾತಾಡುವುದಾದರೆ ಅವರು ಪರಿವರ್ತನೆ ಮಾಡುತ್ತಿದ್ದರು. ಅಡ್ಡಪಲ್ಲಕ್ಕಿ ಮಾಡಿಸಿಕೊಳ್ಳದ ಸ್ವಾಮೀಜಿ ಅವರು. ದಲಿತರು, ಹಿಂದುಳಿದವರನ್ನು ಸ್ವಾಮೀಜಿಗಳನ್ನಾಗಿ ಮಾಡಿದವರು. ಹಾಗಾಗಿ, ಸತ್ಯಾಸತ್ಯತೆ ಹೊರಗಡೆ ಬರಬೇಕು. ಅವರು ತಪ್ಪು ಮಾಡಿದ್ದಾರೋ ಇಲ್ಲವೂ ಎಂಬುದರ ಬಗ್ಗೆ ಕೂಲಂಕಷವಾಗಿ ತನಿಖೆ ಆಗಬೇಕು. ಸರ್ಕಾರ ವಿಚಾರಣೆ ಮಾಡಿದೆ.
ಸತ್ಯಾಸತ್ಯತೆ ಜನರ ಮುಂದೆ ತರುವುದು ಅವಶ್ಯಕತೆ ಇದೆ ಎಂದು ಹೇಳಿದರು. ಇತಿಹಾಸ ಇರುವ ಮಠ ಇದು. ಈ ಮಠಕ್ಕೆ ಮೂರು ಸಾವಿರ ಶಾಖಾ ಮಠಗಳು ಇವೆ. ಹಾಗಾಗಿ, ಈ ಪರಂಪರೆಗೆ ಕಳಂಕ ಬರಬಾರದು. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ಆಗಲಿ ಎಂದರು.
ಬೇರೆ ರಾಜ್ಯಕ್ಕೆ ವರ್ಗಾಯಿಸಲು ಬಿಎಸ್ಪಿ ಪಟ್ಟು: ಮುರುಘಾ ಮಠದ ಶಿವಮೂರ್ತಿ ಶರಣರ ಪ್ರಕರಣವನ್ನು ಬೇರೆ ರಾಜ್ಯಕ್ಕೆ ವರ್ಗಾಯಿಸಿ ತನಿಖೆ ನಡೆಸಬೇಕೆಂದು ಬಹುಜನ ಸಮಾಜ ಪಾರ್ಟಿ(ಬಿಎಸ್ಪಿ) ಒತ್ತಾಯಿಸಿದೆ. ಬಿಎಸ್ಪಿ ರಾಜ್ಯ ಸಂಯೋಜಕ ಮಾರಸಂದ್ರ ಮುನಿಯಪ್ಪ ಪ್ರಕಟಣೆ ಹೊರಡಿಸಿದ್ದು, ಬಂಧಿತ ಆರೋಪಿ ಮುರುಘಾ ಶರಣರು ಬಹಳ ಪ್ರಭಾವಶಾಲಿ ಆಗಿರುವುದರಿಂದಾಗಿ, ಅವರ ವಿರುದ್ಧ ದಾಖಲಾಗಿರುವ ಈ ಪ್ರಕರಣದ ವಿಚಾರಣೆಯನ್ನು ತಮಿಳುನಾಡು ಅಥವಾ ಕೇರಳ ರಾಜ್ಯಕ್ಕೆ ವರ್ಗಾಯಿಸಬೇಕೆಂದು ಒತ್ತಾಯಿಸಿದ್ದಾರೆ.
ಈ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಸರ್ಕಾರ ತೋರಿದ ವಿಳಂಬ ಧೋರಣೆಯಿಂದಾಗಿ ತನಿಖೆಯು ನಿಷ್ಪಕ್ಷಪಾತವಾಗಿ ನಡೆಯುವ ಬಗ್ಗೆ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಬಹಳ ಅಘಾತಕಾರಿ ವಿಷಯವೇನೆಂದರೆ, ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಆರೋಪಿ ಪರ ವಕಾಲತ್ತು ವಹಿಸಿ ಶ್ರೀಗಳು ನಿರಪರಾಧಿ ಎಂಬಂತೆ ತನಿಖೆಯ ಪ್ರಾರಂಭ ಹಂತದಲ್ಲೇ ಹೇಳಿರುವುದು ತನಿಖೆಯನ್ನು ದಿಕ್ಕುತಪ್ಪಿಸುವ ಕ್ರಮವಾಗಿದೆ. ಇವರ ವರ್ತನೆಯು ಸಂವಿಧಾನಕ್ಕೆ ಎಸಗಿದ ಅಪಚಾರವಾಗಿದೆ ಎಂದು ಅವರು ಟೀಕಿಸಿದ್ದಾರೆ.
(ಇದನ್ನೂ ಓದಿ: ಮುರುಘಾ ಶ್ರೀಗಳ ಆರೋಗ್ಯದಲ್ಲಿ ಏರುಪೇರು: ಐಸಿಯು ವಾರ್ಡ್‌ಗೆ ದಾಖಲು)