ಬೆಂಗಳೂರು: ಬಸವನಗುಡಿಯ ಶ್ರೀ ಗುರು ರಾಘವೇಂದ್ರ ಕೋ ಆಪರೇಟಿವ್ ಸಹಕಾರ ಬ್ಯಾಂಕ್ನಲ್ಲಿ ನಡೆದ ಭಾರಿ ಅವ್ಯಹಾರ ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದೆ.
ನಗರದ 15 ಕಡೆ ಶ್ರೀ ಗುರು ರಾಘವೇಂದ್ರ ಕೋ ಆಪರೇಟಿವ್ನಲ್ಲಿ ಸುಳ್ಳು ದಾಖಲೆ ನೀಡಿ ಕೋಟಿ - ಕೋಟಿ ಸಾಲ ಪಡೆದವರು ಹಾಗೂ ಸಿಬ್ಬಂದಿ, ಅಧಿಕಾರಿಗಳ ಮೇಲೆ ಹಲಸೂರು, ರಾಜಾಜಿನಗರ, ಸದಾಶಿವನಗರ, ಜಯನಗರ ಸೇರಿದಂತೆ ಹದಿನೈದು ಕಡೆಗಳಲ್ಲಿ ಸಿಐಡಿ ಆರ್ಥಿಕ ಅಪರಾಧ ವಿಭಾಗದ ಅಧಿಕಾರಿಗಳು ದಾಳಿ ಮುಂದುವರೆಸಿದ್ದಾರೆ.
ಬ್ಯಾಂಕ್ನಲ್ಲಿ ಕೋಟಿ ಕೋಟಿ ಅವ್ಯಹಾರ ನಡೆದಿರುವ ಕಾರಣ ಇತ್ತೀಚೆಗೆ ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿತ್ತು. ನಂತರ ಪ್ರಕರಣ ಸಿಐಡಿಗೆ ವರ್ಗಾವಣೆಯಾಗಿ ತನಿಖೆ ಮುಂದುವರೆಸಿದಾಗ ಶ್ರೀ ಗುರು ರಾಘವೇಂದ್ರ ಕೋ ಆಪರೇಟಿವ್ ಮಾಜಿ ಸಿಇಒ ವಾಸುದೇವ್ ಮಯ್ಯ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು.
ಹೀಗಾಗಿ ಪ್ರಕರಣ ಗಂಭೀರವಾಗಿ ಪರಿಗಣಿಸಿ ಡೆತ್ ನೋಟ್ನಲ್ಲಿರುವ ಅಂಶ ಹಾಗೂ ಬ್ಯಾಂಕ್ ವಿರುದ್ದ ಆರೋಪ ಕೇಳಿ ಬಂದು ಎಸಿಬಿ ಪ್ರಕರಣ ದಾಖಲಿಸಿ ತನಿಖೆ ನಡಿಸಿದ ಮಾಹಿತಿ ಮೇರೆಗೆ ಸಿಐಡಿ ದಾಳಿ ಮುಂದುವರೆಸಲಾಗಿದೆ.
ಪ್ರಕರಣದ ಹಿನ್ನೆಲೆ:
ಬಸವನಗುಡಿ ಶಾಖೆಯ ಶ್ರೀ ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕಿನಲ್ಲಿ ಅಗತ್ಯ ಭದ್ರತೆ ಕೈಗೊಳ್ಳದೇ 27 ಮಂದಿಗೆ 921 ಕೋಟಿ ಸಾಲ ನೀಡಿರುವ ಮಾಹಿತಿ ಆರ್ಬಿಐ ಮತ್ತು ಎಸಿಬಿ ತನಿಖೆಯಿಂದ ಬಯಲಾಗಿತ್ತು. ಬ್ಯಾಂಕ್ಗೆ ಸಂಬಂಧಪಟ್ಟ ಅಧಿಕಾರಿಗಳ ಮನೆಯಲ್ಲಿ ಅಕ್ರಮ ಆಸ್ತಿ ಪತ್ತೆಯಾಗಿತ್ತು.