ಬೆಂಗಳೂರು: ಪಿಎಸ್ಐ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಸಿಐಡಿಯಿಂದ ಇಂದು ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಸಿಐಡಿ ಚಾರ್ಜ್ ಶೀಟ್ ಸಲ್ಲಿಸಿದೆ.
3,065 ಪುಟಗಳ ಚಾರ್ಜ್ ಶೀಟ್ನಲ್ಲಿ 202 ವಿಟ್ನೆಸ್ಗಳು, 330 ದಾಖಲಾತಿಗಳನ್ನು 30 ಆರೋಪಿಗಳ ವಿರುದ್ಧ ಸೇರಿಸಲಾಗಿದೆ. ಅಮಾನತುಗೊಂಡಿರುವ ಎಡಿಜಿಪಿ ಅಮೃತ್ ಪಾಲ್ ಸೇರಿದಂತೆ ಕೆಲ ಅರೋಪಿಗಳನ್ನು ಬಿಟ್ಟು ಉಳಿದ ಅರೋಪಿಗಳ ಮೇಲೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಅಮೃತ್ ಪಾಲ್ ವಿರುದ್ಧದ ದೋಷಾರೋಪಣ ಪಟ್ಟಿ ಸಲ್ಲಿಕೆ ಮಾಡಲು ಸಾಕಷ್ಟು ಕಾಲಾವಕಾಶ ಇದ್ದು, ಹೆಚ್ಚಿನ ಮಾಹಿತಿಯನ್ನು ಸಿಐಡಿ ಕಲೆ ಹಾಕುತ್ತಿದೆ.
ಇದನ್ನೂ ಓದಿ: ಉಳ್ಳಾಲದಲ್ಲಿ ಮಲತಂದೆಯಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ!
ಸದ್ಯ ಸಂಪೂರ್ಣ ತನಿಖೆ ಮುಗಿದವರ ವಿರುದ್ಧ ಮಾತ್ರ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಎಫ್ಐಆರ್ ನಲ್ಲಿ ಹೆಸರಿದ್ದು, ಅರೆಸ್ಟ್ ಆಗದೇ ಇರುವ ಅರೋಪಿಗಳು ಹಾಗೂ ಕೊನೆ ಹಂತದಲ್ಲಿ ಬಂಧಿತರಾಗಿರುವ ಅರೋಪಿಗಳ ವಿರುದ್ಧ ಚಾರ್ಜ್ ಶೀಟ್ನಲ್ಲಿ ಸೇರಿಸಲಾಗಿಲ್ಲ ಎಂದು ತಿಳಿದುಬಂದಿದೆ.