ETV Bharat / state

ಹೇಮಗಿರಿ ಕೋ-ಆಪರೇಟಿವ್ ಸೊಸೈಟಿ ಹಗರಣ ಸಿಐಡಿ ತನಿಖೆಗೆ : ಹೈಕೋರ್ಟ್​​ಗೆ ಸರ್ಕಾರದ ಮಾಹಿತಿ

author img

By

Published : Jun 25, 2021, 4:20 PM IST

2019ರ ಆಗಸ್ಟ್ 10ರಂದು ಕಾಮಾಕ್ಷಿಪಾಳ್ಯ ಠಾಣೆಯಲ್ಲಿನ ಪ್ರಕರಣನ್ನು ಸಿಐಡಿ ಆರ್ಥಿಕ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಆದರೆ, ನಿರೀಕ್ಷಿತ ಪ್ರಗತಿ ಕಂಡು ಬಂದಿಲ್ಲ. ಹೀಗಾಗಿ, ಸೊಸೈಟಿ ಅವ್ಯವಹಾರ ಪ್ರಕರಣವನ್ನು ತನಿಖೆ ಮಾಡಲು ವಿಶೇಷ ತನಿಖಾ ತಂಡ ರಚಿಸಬೇಕು. ಕೆಪಿಐಡಿ ಕಾಯಿದೆ ಪ್ರಕಾರ ನಿರ್ದೇಶಕರ ಆಸ್ತಿ ಜಪ್ತಿಗೆ ಸಕ್ಷಮ ಪ್ರಾಧಿಕಾರ ರೂಪಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ..

court
court

ಬೆಂಗಳೂರು : ಹೇಮಗಿರಿ ಮಲ್ಟಿ ಪರ್ಪಸ್ ಕೋ-ಆಪರೇಟಿವ್ ಸೊಸೈಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದ ನಾಲ್ಕು ಕೇಸುಗಳನ್ನು ತನಿಖೆ ನಡೆಸಲು ಸಿಐಡಿಗೆ ವಹಿಸಿದ್ದೇವೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್​​ಗೆ ಮಾಹಿತಿ ನೀಡಿದೆ. ಸೊಸೈಟಿಯ ಅವ್ಯವಹಾರ ತನಿಖೆ ಕೋರಿ ಠೇವಣಿದಾರರಾದ ಲಕ್ಕಪ್ಪಖಾನಗೌಡರ್ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರದ ಪರ ವಕೀಲರು ಈ ಮಾಹಿತಿ ನೀಡಿದರು.

ಪ್ರಕರಣಕ್ಕೆ ಸಂಬಂಧಿಸಿದ ನಾಲ್ಕು ಕೇಸುಗಳ ತನಿಖೆಯನ್ನು ಸಿಐಡಿಗೆ ವಹಿಸಿ, ಆದೇಶ ಹೊರಡಿಸಲಾಗಿದೆ. ಸೊಸೈಟಿಗೆ ಸೇರಿದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ವಿವರಿಸಿ, ಆ ಸಂಬಂಧಿತ ಆದೇಶದ ಪ್ರತಿಯನ್ನು ಪೀಠಕ್ಕೆ ಸಲ್ಲಿಸಿದರು. ಜೊತೆಗೆ, ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖಾ ವರದಿಯನ್ನೂ ಸಲ್ಲಿಸಿದರು.

ವರದಿಗಳನ್ನು ಪರಿಶೀಲಿಸಿದ ಪೀಠ, ಪ್ರಕರಣಗಳನ್ನು ತನಿಖೆ ಮಾಡುತ್ತಿರುವ ಅಧಿಕಾರಿ ಕೂಡಲೇ ತಲೆ ಮರೆಸಿಕೊಂಡಿರುವ 6 ಆರೋಪಿಗಳ ಪತ್ತೆಗೆ ಕ್ರಮಕೈಗೊಳ್ಳಬೇಕು, ತನಿಖಾ ಪ್ರಗತಿ ವರದಿಯನ್ನು ಆಗಸ್ಟ್ 6ರೊಳಗೆ ಸಲ್ಲಿಸಬೇಕೆಂದು ಸೂಚಿಸಿತು. ಹಾಗೆಯೇ, ಸೊಸೈಟಿಯಲ್ಲಿ ದೊಡ್ಡ ಸಂಖ್ಯೆಯ ಹೂಡಿಕೆದಾರು ಇರುವುದನ್ನು ಗಮನದಲ್ಲಿ ಇಟ್ಟುಕೊಂಡು ಸಕ್ಷಮ ಪ್ರಾಧಿಕಾರವು ಕರ್ನಾಟಕ ಠೇವಣಿದಾರರ ಹಿತರಕ್ಷಣಾ ಕಾಯ್ದೆಯ ಅನ್ವಯ ಕ್ರಮಗಳನ್ನು ಜರುಗಿಸಬೇಕು ಎಂದು ನಿರ್ದೇಶಿಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಪಿ.ಪಿ. ಹೆಗಡೆ ವಾದಿಸಿ, ಸೊಸೈಟಿಗೆ ಸೇರಿದ ಎಲ್ಲ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿಲ್ಲ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಸೊಸೈಟಿಗೆ ಸೇರಿದ ಆಸ್ತಿಗಳ ಬಗ್ಗೆ ವಿವರ ಇದ್ದರೆ ಅದನ್ನು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸಿ. ಪ್ರಾಧಿಕಾರ ಅವುಗಳನ್ನು ಪರಿಶೀಲಿಸಿ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ನಿರ್ದೇಶಿಸಿತು.

ಪ್ರಕರಣದ ಹಿನ್ನೆಲೆ :

2006ರಲ್ಲಿ ಸ್ಥಾಪನೆಯಾದ ಹೇಮಗಿರಿ ಕೋ-ಆಪರೇಟಿವ್ ಸೊಸೈಟಿ 2018ರವರೆಗೆ ರಾಜ್ಯದ ಸಾವಿರಾರು ಜನರಿಂದ ಪಿಗ್ಮಿ, ನಿಶ್ಚಿತ ಠೇವಣಿ, ಖಾಯಂ ಠೇವಣಿ ಮತ್ತಿತರೆ ರೂಪದಲ್ಲಿ ನೂರಾರು ಕೋಟಿ ರೂಪಾಯಿ ಸಂಗ್ರಹಿಸಿದೆ. ಆದರೆ, ಅವಧಿ ಮುಗಿದರೂ ಹಣ ಹಿಂದಿರುಗಿಸದ ಹಿನ್ನೆಲೆ ಠೇವಣಿದಾರರು, ಸೊಸೈಟಿ, ಮತ್ತಿತರ ನಿರ್ದೇಶಕರ ವಿರುದ್ಧ 2018ರ ನ.27ರಂದು ಶಿವಮೊಗ್ಗದ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ 2019 ಆಗಸ್ಟ್‌ 22ರಂದು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ, 2019ರ ಆ.30ರಂದು ಚಿತ್ರದುರ್ಗದ ಹಿರಿಯೂರು ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದಾರೆ.

2019ರ ಆಗಸ್ಟ್ 10ರಂದು ಕಾಮಾಕ್ಷಿಪಾಳ್ಯ ಠಾಣೆಯಲ್ಲಿನ ಪ್ರಕರಣನ್ನು ಸಿಐಡಿ ಆರ್ಥಿಕ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಆದರೆ, ನಿರೀಕ್ಷಿತ ಪ್ರಗತಿ ಕಂಡು ಬಂದಿಲ್ಲ. ಹೀಗಾಗಿ, ಸೊಸೈಟಿ ಅವ್ಯವಹಾರ ಪ್ರಕರಣವನ್ನು ತನಿಖೆ ಮಾಡಲು ವಿಶೇಷ ತನಿಖಾ ತಂಡ ರಚಿಸಬೇಕು. ಕೆಪಿಐಡಿ ಕಾಯಿದೆ ಪ್ರಕಾರ ನಿರ್ದೇಶಕರ ಆಸ್ತಿ ಜಪ್ತಿಗೆ ಸಕ್ಷಮ ಪ್ರಾಧಿಕಾರ ರೂಪಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಇದನ್ನೂ ಓದಿ:ಅಪ್ಪ ತೀರೋದ.. ಕುಟುಂಬಕ್ಕೆ ಮಗಳೇ ಆಧಾರಸ್ತಂಭ: ಓದು ನಿಲ್ಲಿಸಿ ಭೂತಾಯಿ ಸೇವೆಗೆ ನಿಂತ ಗಟ್ಟಿಗಿತ್ತಿ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.