ETV Bharat / state

ದೇವಸ್ಥಾನಗಳಿಗೆ ಹೊರಡಿಸಿದ್ದ ಸುತ್ತೋಲೆ ವಾಪಸ್ : ಸಚಿವ ಆರಗ ಜ್ಞಾನೇಂದ್ರ - tempal issued criculer canceld home minister in bengalore

ಸಾವಿರಾರು ವರ್ಷಗಳಿಂದ ದೇವಸ್ಥಾನ ಮತ್ತು ಮನೆಗಳಲ್ಲಿ ಪೂಜೆ, ಪುನಸ್ಕಾರ ಮಾಡುವಾಗ ಶಂಖ ಊದುವುದು, ಗಂಟೆ ಬಾರಿಸುವುದು, ಜಾಗಟೆ ಬಾರಿಸುವುದು ನಡೆದುಕೊಂಡು ಬಂದಿರುವ ಸಂಪ್ರದಾಯ. ಸಾವಿರಾರು ವರ್ಷಗಳಿಂದಲೂ ಈ ಬಗ್ಗೆ ಯಾರೂ ಕೂಡ ತಕರಾರು ತೆಗೆದಿರಲಿಲ್ಲ. ಈಗ ಏಕಾಏಕಿ ಆಕ್ಷೇಪ ಏಕೆ ಎಂದು ಸಿ. ಟಿ ರವಿ ಪ್ರಶ್ನಿಸಿದರು....

araga-jnanendra
ಅರಗ ಜ್ಞಾನೇಂದ್ರ
author img

By

Published : Feb 16, 2022, 5:44 PM IST

ಬೆಂಗಳೂರು : ದೇವಸ್ಥಾನಗಳಲ್ಲಿ ಗಂಟೆ, ಜಾಗಟೆ, ಶಂಖ ಊದುವುದರಿಂದ ಶಬ್ದ ಮಾಲಿನ್ಯ ಉಂಟಾಗುತ್ತದೆ ಎಂಬ ಬಗ್ಗೆ ತಾನೇ ಹೊರಡಿಸಿದ್ದ ಸುತ್ತೋಲೆಯನ್ನು ಧಾರ್ಮಿಕ ದತ್ತಿ ಇಲಾಖೆಯು ವಾಪಸ್ ಪಡೆದಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ವಿಧಾನಸಭೆಯಲ್ಲಿ ತಿಳಿಸಿದರು.

ಅಧಿವೇಶನದ ಶೂನ್ಯವೇಳೆಯಲ್ಲಿ ಬಿಜೆಪಿ ಶಾಸಕ ಸಿ.ಟಿ.ರವಿ ಮತ್ತು ರವಿಸುಬ್ರಹ್ಮಣ್ಯ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಅವರು, ಈಗಾಗಲೇ ಧಾರ್ಮಿಕ ದತ್ತಿ ಇಲಾಖೆ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲಾಗಿದೆ. ಈ ಬಗ್ಗೆ ಯಾರಿಗೂ ಗೊಂದಲ ಬೇಡ ಎಂದು ಸ್ಪಷ್ಟಪಡಿಸಿದರು.

ಯಾವ ಧಾರ್ಮಿಕ ಕೇಂದ್ರಗಳಲ್ಲಿ ಮುಂಜಾನೆ ಈ ರೀತಿಯ ಶಬ್ದ ಉಂಟಾಗುತ್ತಿತ್ತೋ ಅಂತಹ ಎಲ್ಲಾ ಧಾರ್ಮಿಕ ಕೇಂದ್ರಗಳಿಗೂ ನೋಟಿಸ್ ನೀಡಲಾಗಿತ್ತು. ಇದು ಯಾವುದೇ ಒಂದು ಧರ್ಮ ಅಥವಾ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಆದೇಶ ನೀಡಿರಲಿಲ್ಲ. ಇದರಿಂದ ಕೆಲವು ಗೊಂದಲ ಉಂಟಾಗಿದ್ದರಿಂದ ಈಗ ಆದೇಶವನ್ನು ವಾಪಸ್ ಪಡೆಯಲಾಗಿದೆ ಎಂದರು.

ಇದಕ್ಕೂ ಮುನ್ನ ಶಾಸಕ ಸಿ.ಟಿ.ರವಿ ಮಾತನಾಡಿ, ಸಾವಿರಾರು ವರ್ಷಗಳಿಂದ ದೇವಸ್ಥಾನ ಮತ್ತು ಮನೆಗಳಲ್ಲಿ ಪೂಜೆ, ಪುನಸ್ಕಾರ ಮಾಡುವಾಗ ಶಂಖ ಊದುವುದು, ಗಂಟೆ ಬಾರಿಸುವುದು, ಜಾಗಟೆ ಬಾರಿಸುವುದು ನಡೆದುಕೊಂಡು ಬಂದಿರುವ ಸಂಪ್ರದಾಯ.

ಸಾವಿರಾರು ವರ್ಷಗಳಿಂದಲೂ ಈ ಬಗ್ಗೆ ಯಾರೂ ಕೂಡ ತಕರಾರು ತೆಗೆದಿರಲಿಲ್ಲ. ಈಗ ಏಕಾಏಕಿ ಆಕ್ಷೇಪ ಇದೆ. ಇದರ ಹಿಂದೆ ಯಾವುದಾದರೂ ಪಿತೂರಿ ಇದೆಯೇ ಎಂದು ಪ್ರಶ್ನಿಸಿದರು.

ಇದಕ್ಕೆ ದನಿಗೂಡಿಸಿದ ಶಾಸಕ ರವಿ ಸುಬ್ರಹ್ಮಣ್ಯ, ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನ ಸೇರಿದಂತೆ ಮತ್ತಿತರ ದೇವಸ್ಥಾನಗಳಿಗೆ ಕೆಲವು ಅಧಿಕಾರಿಗಳು ಏಕಾಏಕಿ ಬಂದು ಶಬ್ದ ಮಾಲಿನ್ಯ ಉಂಟಾಗುತ್ತಿದೆ ಎಂದು ನೋಟಿಸ್ ಕೊಟ್ಟಿದ್ದಾರೆ. ಇದಕ್ಕೆ ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆದಿತ್ತೇ ಎಂದು ಪ್ರಶ್ನಿಸಿದರು. ಮಧ್ಯೆ ಪ್ರವೇಶಿಸಿದ ಜೆಡಿಎಸ್‍ ಸದಸ್ಯ ಶಿವಲಿಂಗೇಗೌಡ ಅವರು, ಸರ್ಕಾರ ನಡೆಸುತ್ತಿರುವವರೇ ನೀವು, ಪಿತೂರಿ ಎಲ್ಲಿಂದ ಬರುತ್ತದೆ ಎಂದು ಕೇಳಿದರು.

ಇದನ್ನೂ ಓದಿ: ಈಶ್ವರಪ್ಪ ಅಪ್ಪಟ ದೇಶ ಭಕ್ತ, ಅದರಲ್ಲಿ ಅನುಮಾನ ಬೇಡ.. ಸಿ ಟಿ ರವಿ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.