ETV Bharat / state

ಜನವರಿ 3ರಿಂದ 'ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ' ಕಾರ್ಯಕ್ರಮ

ಜ.3ರಿಂದ ಡಿಸಿಎಂ ಅಧ್ಯಕ್ಷತೆಯಲ್ಲಿ ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ' ಕಾರ್ಯಕ್ರಮ

author img

By ETV Bharat Karnataka Team

Published : Jan 2, 2024, 8:28 AM IST

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಾಗರಿಕರ ಅಹವಾಲು, ಕುಂದು-ಕೊರತೆಗಳನ್ನು ಆಲಿಸುವ ಸಲುವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಜ.3ರಿಂದ "ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ" ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ನಾಗರಿಕರು ಸರಕಾರಿ ಕಚೇರಿಗಳಿಗೆ ಬರುವ ಬದಲು ಅವರ ಮನೆ ಬಾಗಿಲಲ್ಲೇ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಪಾಲಿಕೆ ವ್ಯಾಪ್ತಿಯ 8 ವಲಯಗಳಲ್ಲಿ 28 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯಲಿದೆ. ವಲಯವಾರು 2 ಅಥವಾ 3 ವಿಧಾನಸಭಾ ಕ್ಷೇತ್ರಗಳನ್ನು ಒಟ್ಟುಗೂಡಿಸಿ ಕಾರ್ಯಕ್ರಮ ನಡೆಸಲಾಗುತ್ತದೆ. ಮೊದಲನೇ ಹಂತದಲ್ಲಿ ಮಹದೇವಪುರ, ಯಲಹಂಕ ಹಾಗೂ ಪೂರ್ವ ವಲಯ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಎರಡನೇ ಹಂತದಲ್ಲಿ ಉಳಿದ ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ.

ನಾಗರಿಕರು ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಿ ತಮ್ಮ ಅಹವಾಲು, ಸಮಸ್ಯೆಗಳನ್ನು ನಿವೇದಿಸಿಕೊಳ್ಳಬಹುದಾಗಿದೆ. ಅಲ್ಲಿ ಕುಳಿತುಕೊಳ್ಳಲು ಆಸನಗಳು, ಕುಡಿಯುವ ನೀರು, ತಾತ್ಕಾಲಿಕ ಶೌಚಾಲಯಗಳು ಹಾಗೂ ಮಧ್ಯಾಹ್ನ ಲಘು ಉಪಹಾರದ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ವಿದ್ಯುತ್, ಜನರೇಟರ್ ವ್ಯವಸ್ಥೆ ಸೇರಿದಂತೆ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಬಂದ ದೂರುಗಳನ್ನು ಸಮಗ್ರ ಸಾರ್ವಜನಿಕ ಕುಂದುಕೊರತೆಗಳ ಪರಿಹಾರ ವ್ಯವಸ್ಥೆ ಸಾಫ್ಟ್​ವೇರ್​ನಲ್ಲಿ ದಾಖಲಿಸಲು ಪಾಲಿಕೆ ಸಿಬ್ಬಂದಿಗಳಿಗೆ ಈಗಾಗಲೇ ತರಬೇತಿ ನೀಡಲಾಗಿದೆ. ನಾಗರಿಕರ ಸಂಪೂರ್ಣ ವಿವರ ಹಾಗೂ ನಾಗರಿಕರಿಂದ ಬಂದಂತಹ ದೂರುಗಳು ಯಾವ ಇಲಾಖೆಗೆ ಸಂಬಂಧಿಸಿದ್ದು ಎಂಬುದನ್ನು ಸಾಫ್ಟ್​ವೇರ್​ನಲ್ಲಿ ದಾಖಲಿಸಲು ವೈ-ಫೈ, ಗಣಕಯಂತ್ರ, ಪ್ರಿಂಟರ್ ಹಾಗೂ ಸ್ಕ್ಯಾನರ್​ಗಳ ವ್ಯವಸೆಯೊಂದಿಗೆ 15 ಕೌಂಟರ್ ಗಳನ್ನು ಸ್ಥಾಪಿಸಲಾಗಿದೆ.

ಸಹಾಯ ಕೇಂದ್ರ ನಿರ್ಮಾಣ: ಕಾರ್ಯಕ್ರಮದ ಸ್ಥಳದಲ್ಲಿ ನಾಗರಿಕರಿಗೆ ಅನುಕೂಲವಾಗಲು ಸಹಾಯ ಕೇಂದ್ರ (ಹೆಲ್ಪ್ ಡೆಸ್ಕ್)ಅನ್ನು ಸ್ಥಾಪಿಸಲಾಗಿದೆ. ಅಲ್ಲದೆ ನಾಗರಿಕರಿಗೆ ಮಾಹಿತಿ ಒದಗಿಸುವ ನಾಮಫಲಕ (ಸೈನೇಜ್)ಗಳನ್ನು ಅಳವಡಿಸಲಾಗಿದೆ.

ನಾಗರಿಕರಿಗೆ ಟೋಕನ್ ವ್ಯವಸ್ಥೆ: ಕಾರ್ಯಕ್ರಮದಲ್ಲಿ ನಾಗರಿಕರು ಅಹವಾಲುಗಳನ್ನು ನೀಡಲು ಅನುವಾಗಲೆಂದು ಟೋಕನ್​ಗಳನ್ನು ಪಡೆಯಲು 10 ಕೌಂಟರ್​ಗಳ ವ್ಯವಸ್ಥೆ ಮಾಡಲಾಗಿದೆ. ವಿಕಲಚೇತನರು ಹಾಗೂ ಹಿರಿಯ ನಾಗರಿಕರಿಗೆ ಪ್ರತ್ಯೇಕ ಕೌಂಟರ್ ವ್ಯವಸ್ಥೆಯನ್ನು ಮಾಡಲಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​ರನ್ನು ಕೂಡ ನೇರವಾಗಿ ಭೇಟಿಯಾಗಲು ವ್ಯವಸ್ಥೆ ಕಲ್ಪಿಸಲಾಗಿದ್ದು ಆಯಾ ಕ್ಷೇತ್ರದ ಶಾಸಕರನ್ನೂ ಆಹ್ವಾನಿಸಲಾಗಿದೆ.

ಒಂದೇ ಸೂರಿನಡಿ ವಿವಿಧ ಇಲಾಖೆಗಳು: ನಾಗರಿಕರ ಸಮಸ್ಯೆಗಳನ್ನು ಒಂದೇ ಸೂರಿನಡಿ ಬಗೆಹರಿಸುವ ನಿಟ್ಟಿನಲ್ಲಿ ಎಲ್ಲಾ ಪ್ರಮುಖ ಇಲಾಖೆಗಳಾದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಸ್ಕಾಂ, ಜಲಮಂಡಳಿ, ಬಿಎಂಆರ್‌ಸಿಎಲ್(ಮೆಟ್ರೋ), ಕೊಳಗೇರಿ ಅಭಿವೃದ್ಧಿ ಮಂಡಳಿ, ಪೊಲೀಸ್ ಇಲಾಖೆ, ಬಿಎಂಟಿಸಿ, ಕಂದಾಯ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆಗಳ ಅಧಿಕಾರಿಗಳು ಸ್ಥಳದಲ್ಲೇ ಉಪಸ್ಥಿತರಿರಲಿದ್ದಾರೆ.

ಕೆ.ಆರ್.ಪುರ, ಮಹದೇವಪುರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಜ.3ರಂದು ಕೆ.ಆರ್ ಪುರದ ಐಟಿಐ ಕ್ರೀಡಾಂಗಣದಲ್ಲಿ. ಜ.5ರಂದು ಯಲಹಂಕ, ಬ್ಯಾಟರಾಯನಪುರ, ದಾಸರಹಳ್ಳಿ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಯಲಹಂಕ ನ್ಯೂ ಟೌನ್‌ನ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ. ಜ.6ರಂದು ಹೆಬ್ಬಾಳ, ಶಿವಾಜಿನಗರ, ಪುಲಕೇಶಿನಗರ ವಿಧಾನಸಭಾ ಕ್ಷೇತ್ರಗಳಿಗೆ ಶಿವನ್ ಚೆಟ್ಟಿ ಗಾರ್ಡನ್‌ನ ಆರ್.ಬಿ.ಎ.ಎನ್.ಎಮ್.ಎಸ್ ಹೈಸ್ಕೂಲ್ ಮೈದಾನದಲ್ಲಿ 'ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ' ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: 'ಯುವನಿಧಿ'ಗೆ 7 ದಿನದಲ್ಲಿ 19,800 ಅರ್ಜಿ: ಯಾವ ಜಿಲ್ಲೆಯಲ್ಲಿ ಎಷ್ಟು ನೋಂದಣಿ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.