ETV Bharat / state

ಒಂಟಿಯಾಗಿ ಓಡಾಡುವ ಹೆಣ್ಣು ಮಕ್ಕಳನ್ನು ಚುಡಾಯಿಸಿದರೆ ಕಠಿಣ ಕ್ರಮ: ಕಮಲ್‌ ಪಂತ್ ಎಚ್ಚರಿಕೆ - ನಗರ ಪೊಲೀಸ್ ಆಯುಕ್ತ ಕಮಲ್‌ ಪಂತ್ ಹೇಳಿಕೆ

ಅಪ್ರಾಪ್ತರು ಬೈಕ್‌ಗಳಲ್ಲಿ ವೀಲಿಂಗ್ ಮಾಡುತ್ತಿದ್ದು, ಅಪಘಾತಗಳಿಗೆ ಕಾರಣವಾಗುತ್ತಿದೆ. ಅಪ್ರಾಪ್ತ ಯುವಕರು ವೀಲಿಂಗ್ ಮಾಡಿ ಸಿಕ್ಕಿಬಿದ್ದರೆ ಅವರ ಪೋಷಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಕಮಲ್‌ ಪಂತ್ ಖಡಕ್​​ ಎಚ್ಚರಿಕೆ ನೀಡಿದರು.

ನಗರ ಪೊಲೀಸ್ ಆಯುಕ್ತ ಕಮಲ್‌ ಪಂತ್
ನಗರ ಪೊಲೀಸ್ ಆಯುಕ್ತ ಕಮಲ್‌ ಪಂತ್
author img

By

Published : Feb 26, 2022, 9:04 PM IST

ಬೆಂಗಳೂರು: ಒಂಟಿಯಾಗಿ ಓಡಾಡುವ ಹೆಣ್ಣು ಮಕ್ಕಳನ್ನು ಚುಡಾಯಿಸಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಕಮಲ್‌ ಪಂತ್ ಎಚ್ಚರಿಕೆ ನೀಡಿದ್ದಾರೆ. ನಗರದ ಆಗ್ನೇಯ ವಿಭಾಗದ ಯಲಹಂಕ ಉಪನಗರ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡಿದ್ದ ಮಾಸಿಕ ಜನಸಂಪರ್ಕ ದಿನ ಕಾರ್ಯಕ್ರಮದಲ್ಲಿ, ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸಿದ ಆಯುಕ್ತರು, ಹೆಣ್ಣು ಮಕ್ಕಳನ್ನು ಚುಡಾಯಿಸುತ್ತಾರೆ ಎನ್ನುವ ಸಾಕಷ್ಟು ದೂರು ಕೇಳಿ ಬಂದಿವೆ. ಈ ಬಗ್ಗೆ ಪೊಲೀಸರಿಗೆ ತಕ್ಷಣ ಮಾಹಿತಿ ನೀಡಿದರೆ ಹೊಯ್ಸಳ ಪೊಲೀಸರು ಕ್ಷಣಾರ್ಧದಲ್ಲಿ ಸ್ಥಳಕ್ಕೆ ಬರುತ್ತಾರೆ ಎಂದು ತಿಳಿಸಿದರು.

ಇದನ್ನೂ ಓದಿ : ಉಕ್ರೇನ್‌ನಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳನ್ನು ಹೊತ್ತ ಮೊದಲ ವಿಮಾನ ಮುಂಬೈಗೆ ಆಗಮನ

ಅಪ್ರಾಪ್ತರು ಬೈಕ್‌ಗಳಲ್ಲಿ ವೀಲಿಂಗ್ ಮಾಡುತ್ತಿದ್ದು, ಅಪಘಾತಗಳಿಗೆ ಕಾರಣವಾಗುತ್ತಿದೆ. ಅಪ್ರಾಪ್ತ ಯುವಕರು ವೀಲಿಂಗ್ ಮಾಡಿ ಸಿಕ್ಕಿಬಿದ್ದರೆ ಅವರ ಪೋಷಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಖಡಕ್​​ ಎಚ್ಚರಿಕೆ ನೀಡಿದರು.

ನಗರದಲ್ಲಿ ಗಸ್ತು ಹೆಚ್ಚಳ: ನಗರದಲ್ಲಿ ಗಸ್ತು ಹೆಚ್ಚಿಸಲಾಗಿದೆ. ಹೊಯ್ಸಳ ಪೊಲೀಸರು ದಿನದ 24 ಗಂಟೆಯೂ ರೌಂಡ್ಸ್ ನಲ್ಲಿರುತ್ತಾರೆ. ಸಾರ್ವಜನಿಕರಿಗೆ ಯಾರಿಂದ ಏನೇ ತೊಂದರೆಯಾದರೂ ಕಂಟ್ರೋಲ್‌ರೂಂಗೆ ತಿಳಿಸಿದರೆ ತಕ್ಷಣ ಹೊಯ್ಸಳ ಪೊಲೀಸರು ನಿಮ್ಮ ನೆರವಿಗೆ ಧಾವಿಸುತ್ತಾರೆ ಎಂದು ಆಯುಕ್ತರು ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.