ETV Bharat / state

ನಾಳೆ ಭಾರತ್ ಬಂದ್‌ಗೆ ಕರೆ: ಬೆಂಗಳೂರಿನಲ್ಲಿ ಪೊಲೀಸ್ ಸರ್ಪಗಾವಲು - Bharat Bund updates

ಬೆಂಗಳೂರಿಗೆ ವಿವಿಧ ಜಿಲ್ಲೆಗಳಿಂದ ಅಪಾರ ಸಂಖ್ಯೆಯಲ್ಲಿ ರೈತರು ಆಗಮಿಸುವ ಕಾರಣ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಎಚ್ಚರಿಕೆ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆಗೆ ವ್ಯವಸ್ಥೆ ಮಾಡಲಾಗುತ್ತಿದೆ.

Bharat Bund
ಭಾರತ್ ಬಂದ್​ಗೆ ಖಾಕಿ ಸರ್ಪಗಾವಲು
author img

By

Published : Sep 26, 2021, 3:03 PM IST

ಬೆಂಗಳೂರು: ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತಪರ ಸಂಘಟನೆಗಳು ನಾಳೆ ಭಾರತ್ ಬಂದ್​ಗೆ ಕರೆ ಕೊಟ್ಟಿವೆ. ಈ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ನಗರದೆಲ್ಲೆಡೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗುತ್ತಿದೆ‌.

ಬೆಂಗಳೂರಿನಲ್ಲಿಯೂ ವಿವಿಧ ಸಂಘಟನೆಗಳು ಬಂದ್​ಗೆ ಕರೆ ಕೊಟ್ಟಿವೆ. ಟೌನ್​ಹಾಲ್‌ನಿಂದ ಮೈಸೂರು ಬ್ಯಾಂಕ್​ವರೆಗೂ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ. ಕೋಡಿಹಳ್ಳಿ ಚಂದ್ರಶೇಖರ್, ಕುರುಬೂರು ಶಾಂತಕುಮಾರ್ ಸೇರಿದಂತೆ ವಿವಿಧ ರೈತ-ದಲಿತ ಸಂಘಟನೆಗಳ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಬೆಂಗಳೂರಿಗೆ ವಿವಿಧ ಜಿಲ್ಲೆಗಳಿಂದ ಅಪಾರ ಸಂಖ್ಯೆಯಲ್ಲಿ ರೈತರು ಆಗಮಿಸುವ ಕಾರಣ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಎಚ್ಚರಿಕೆ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆಗೆ ವ್ಯವಸ್ಥೆ ಮಾಡಲಾಗುತ್ತಿದೆ.

ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮಾರ್ಗದರ್ಶನದಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ 12 ಡಿಸಿಪಿಗಳು, ಎಸಿಪಿಗಳು, 100ಕ್ಕೂ ಹೆಚ್ಚು ಇನ್ಸ್​ಪೆಕ್ಟರ್​ಗಳು, 200ಕ್ಕೂ ಹೆಚ್ಚು ಸಬ್ ಇನ್ಸ್​ಪೆಕ್ಟರ್​ಗಳು ಹಾಗೂ ಕಾನ್​ಸ್ಟೇಬಲ್​ಗಳು ಸೇರಿದಂತೆ 4 ಸಾವಿರಕ್ಕೂ ಹೆಚ್ಚು ಪೊಲೀಸರ ಸರ್ಪಗಾವಲು ಹಾಕಲಾಗಿದೆ.

ಹೊಯ್ಸಳ, ಚೀತಾ ವಾಹನಗಳ ಮೂಲಕ ನಿರಂತರ ಗಸ್ತು ‌ತಿರುಗಾಟ ನಡೆಯಲಿದೆ. ಪ್ರತಿ ವಿಭಾಗದಲ್ಲಿಯೂ ಆಯಾ ಡಿಸಿಪಿಗಳ ನೇತೃತ್ವದಲ್ಲಿ ಭದ್ರತೆ ಇರಲಿದೆ. 30ಕ್ಕೂ ಹೆಚ್ಚು ಕೆಎಸ್​ಆರ್​ಪಿ ತುಕಡಿಗಳು, 30ಕ್ಕೂ ಹೆಚ್ಚು ಸಿಎಆರ್​ ತುಕಡಿ ನಿಯೋಜಿಸಲಾಗಿದೆ. ಇದರ ಜೊತೆಗೆ ವಾಟರ್ ಜೆಟ್ ಇರಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ರೈತರಿಂದ ಭಾರತ್ ಬಂದ್​: ನಾಳೆ ಏನಿರುತ್ತೆ, ಏನಿರಲ್ಲ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.