ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕಾಗಿ ಪೊಲೀಸ್ ಇಲಾಖೆ ಜೊತೆಗೆ ಸಿವಿಲ್ ಡಿಫೆನ್ಸ್ ಸಿಬ್ಬಂದಿ ಸಾಥ್ ನೀಡಲಿದ್ದಾರೆ.
ಬೆಳಗಾವಿ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ಹೋಂಗಾರ್ಡ್ಸ್‌ಗಳನ್ನು ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ನಗರದಲ್ಲಿ ಮಾಸ್ಕ್ ಕಾರ್ಯಾಚರಣೆ ಸೇರಿ ಹಲವು ಕೆಲಸಗಳಿಗೆ ಬಳಸಿಕೊಳ್ಳಲು, ಪೊಲೀಸರ ಜೊತೆ ಹೆಚ್ಚಿನ ಸಿಬ್ಬಂದಿ ಬೇಕಾಗಿದ್ದಾರೆ. ಪ್ರಮುಖವಾಗಿ ಕೊರೊನಾ ಸಂದರ್ಭದಲ್ಲಿ ಹೆಚ್ಚಿನ ಸಿಬ್ಬಂದಿ ಅಗತ್ಯವಿದೆ. ಹೀಗಾಗಿ ಸಿವಿಲ್ ಡಿಫೆನ್ಸ್ ನೇಮಕ ಮಾಡಿಕೊಳ್ಳಲು ಪೊಲೀಸ್ ಇಲಾಖೆ ನಿರ್ಧರಿಸಿದೆ.
ಇದನ್ನೂ ಓದಿ: ನೀತಿ ಸಂಹಿತೆ ಜಾರಿಯಲ್ಲಿದ್ದು, ಯಾವುದೇ ಭರವಸೆ ನೀಡಲು ಸಾಧ್ಯವಿಲ್ಲ: ಸಚಿವ ಸವದಿ