ETV Bharat / state

ಹಲವು ತಿಂಗಳಿಂದ ಸಿಗದ ವೇತನ; ಇಂದಿರಾ ಕ್ಯಾಂಟೀನ್‌ ಸ್ವಚ್ಚತಾ ಸಿಬ್ಬಂದಿಯ ಗೋಳು ಕೇಳೋರಿಲ್ಲ - ಬಿಬಿಎಂಪಿ

ಇಂದಿರಾ ಕ್ಯಾಂಟೀನ್​ಗೆ ಊಟಕ್ಕೆ ಬರುವವರು ಬಡವರು. ಅವರಿಗೆ ತೊಂದರೆ ಆಗಬಾರದು ಎಂಬ ಮಾನವೀಯತೆ ನಮಗಿದೆ. ಹೀಗಾಗಿ ನಮಗೆ ವೇತನ ಇಲ್ಲದಿದ್ದರೂ ಕೆಲಸ ಮುಂದುವರೆಸಿದ್ದೇವೆ ಎನ್ನುತ್ತಾರೆ ಸ್ವಚ್ಚತಾ ಸಿಬ್ಬಂದಿ.

Indira Canteen
ಇಂದಿರಾ ಕ್ಯಾಂಟೀನ್​
author img

By

Published : May 29, 2023, 6:36 AM IST

ಬೆಂಗಳೂರು: ನಗರ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್‌ಗಳಲ್ಲಿ ಹಲವು ವರ್ಷಗಳಿಂದ ದುಡಿಯುತ್ತಿರುವ ಸ್ವಚ್ಚತಾ ಸಿಬ್ಬಂದಿಗೆ ವೇತನ ಬಿಡುಗಡೆಯಾಗದೇ ಅವರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು ಸುಮಾರು 175 ಇಂದಿರಾ ಕ್ಯಾಂಟೀನ್ ಪೈಕಿ 163 ಚಾಲ್ತಿಯಲ್ಲಿವೆ. ಈ ಕ್ಯಾಂಟೀನ್​ಗಳಲ್ಲಿ ಕಾರ್ಯ ನಿರ್ವಹಿಸುವ ಸ್ವಚ್ಚತಾ ಸಿಬ್ಬಂದಿಗೆ ಮೂರು ತಿಂಗಳಿನಿಂದ ವೇತನ ಬಿಡುಗಡೆ ಆಗಿಲ್ಲ. ಇದರಿಂದ ಜೀವನ ನಿರ್ವಹಣೆ ಕಷ್ಟಕರವಾಗಿದೆ ಎಂದು ಸಿಬ್ಬಂದಿ ಅಳಲು ತೋಡಿಕೊಂಡಿದ್ದಾರೆ.

ವೇತನ ಸಮಸ್ಯೆಯಿಂದ ತಮ್ಮ ಮನೆಯಲ್ಲಿ ಹಣಕಾಸಿನ ತೊಂದರೆ ಇದ್ದರೂ ಸಹ ಹಲವರು ಪ್ರತಿ ದಿನ ಕೆಲಸಕ್ಕೆ ಬರುತ್ತಿದ್ದಾರೆ. ವೇತನ ಬರಬಹುದೆಂಬ ನಿರೀಕ್ಷೆಯಲ್ಲಿ ಜಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. ಹಲವು ಮಂದಿ ಕೈ ಸಾಲ ಮಾಡಿ ಜೀವನ ನಡೆಸುತ್ತಿದ್ದಾರೆ. ಇದರಿಂದ ಹೊರಬರಲು ಹಲವು ಮಂದಿ ಕೆಲಸ ಬಿಟ್ಟು ಹೋಗಿದ್ದಾರೆ ಎಂದು ಸಿಬ್ಬಂದಿ ತಿಳಿಸಿದರು. ಕ್ಯಾಂಟಿನ್‌ಗಳಿಗೆ ದಿನಸಿ ಪದಾರ್ಥ ಹಾಗೂ ತರಕಾರಿ ಸರಬರಾಜು, ಪಾತ್ರೆ ಸ್ವಚ್ಚ ಮಾಡುವವರ ಗೋಳು ಹೇಳತೀರದು. ಅವರು ಕೂಡ ಬಾಕಿ ವೇತನಕ್ಕಾಗಿ ಕಾಯುತ್ತಿದ್ದಾರೆ ಎಂದು ಪರಿಸ್ಥಿ ವಿವರಿಸಿದರು.

ಇಂದಿರಾ ಕ್ಯಾಂಟೀನ್ ಪುನಾರಂಭಿಸಲು ಸೂಚನೆ: ಕಾಂಗ್ರೆಸ್‌ನ ಮಹತ್ವಾಕಾಂಕ್ಷೆಯ ಯೋಜನೆ ಆಗಿದ್ದ ಇಂದಿರಾ ಕ್ಯಾಂಟೀನ್​ಗಳಿಗೆ ಹಿಂದಿನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅನುದಾನ ಪೂರೈಕೆ ನಿಲ್ಲಿಸಿತ್ತು. ಅದಕ್ಕೆ ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್‌ ಆಕ್ಷೇಪ ವ್ಯಕ್ತಪಡಿಸಿತ್ತು. ಮತ್ತೆ ಕಾಂಗ್ರೆಸ್​​ 2023 ರ ಚುನಾವಣೆಯಲ್ಲಿ ಬಹುಮತ ಪಡೆದು ಅಧಿಕಾರಕ್ಕೆ ಬರುತ್ತಿದ್ದಂತೆ ಇಂದಿರಾ ಕ್ಯಾಂಟೀನ್ ಪುನಾರಂಭಿಸುವಂತೆ ಬಿಬಿಎಂಪಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಸೂಚನೆ ನೀಡಿದೆ.

ಬಿಬಿಎಂಪಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್​ಗಳಿಗೆ ಮರು ಜೀವ ಬಂದಿದ್ದು, ಇದೀಗ ದಿನಕ್ಕೊಂದು ರುಚಿಕರ ಆಹಾರ ಜನರಿಗೆ ದೊರಕುವಂತೆ ಮಾಡಲು ಬೆಂಗಳೂರು ಮಹಾನಗರ ಪಾಲಿಕೆ ಮುಂದಾಗಿದೆ. ಇಂದಿರಾ ಕ್ಯಾಂಟೀನ್ ಗುಣಮಟ್ಟ ಹಾಗೂ ಆಹಾರ ಬಗೆಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಬಿಬಿಎಂಪಿ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸಲು ನಿರ್ಧರಿಸಿದೆ. ಇದರಲ್ಲಿ ಹತ್ತಕ್ಕೂ ಹೆಚ್ಚು ರುಚಿಕರ ಆಹಾರ ಪಟ್ಟಿ ಸಿದ್ದಪಡಿಸಿಕೊಂಡಿದೆ. ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಬಗೆ ಬಗೆಯ ಆಹಾರ ಕ್ಯಾಂಟೀನ್ ನಲ್ಲಿ ದೊರಕಬೇಕು. ಈ ನಿಟ್ಟಿನಲ್ಲಿ ವಿವಿಧ ಖಾದ್ಯಗಳನ್ನು ಕಡಿಮೆ ದರದಲ್ಲಿ ನೀಡಬಹುದು ಎಂದು ಪಾಲಿಕೆ ಪ್ರಸ್ತಾವನೆಯಲ್ಲಿ ಉಲ್ಲೇಖ ಮಾಡಲು ತೀರ್ಮಾನಿಸಿದೆ.

ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು ಅಂದಾಜು 175 ಇಂದಿರಾ ಕ್ಯಾಂಟೀನ್ ಪೈಕಿ 163 ಇಂದಿರಾ ಕ್ಯಾಂಟೀನ್ ಚಾಲ್ತಿಯಲ್ಲಿವೆ. ಸದ್ಯ ಕ್ಯಾಂಟೀನ್ ಮರುಜೀವ ನೀಡುವ ಯೋಜನೆಯ ಹಿನ್ನೆಲೆಯಲ್ಲಿ ನಗರದ ಬಹುತೇಕ ಕಡೆಗಳಲ್ಲಿ ಕ್ಯಾಂಟೀನ್ ಆವರಣಗಳನ್ನು ಸ್ವಚ್ಛಗೊಳಿಸಲಾಗುತ್ತಿದೆ. ವಲಯ ಆಯುಕ್ತರು, ಜಂಟಿ ಆಯುಕ್ತರು, ಅಭಿಯಂತರರು, ಆರೋಗ್ಯಾಧಿಕಾರಿಗಳು ವಲಯವಾರು ಇಂದಿರಾ ಕ್ಯಾಂಟೀನ್ ಸ್ಥಿತಿಗತಿ ಪರಿಶೀಲಿಸುತ್ತಿದ್ದಾರೆ.

ಇದನ್ನೂಓದಿ:ಸಾರಿಗೆ ಸಚಿವರಾಗಲು ಒಪ್ಪಿದ ರಾಮಲಿಂಗರೆಡ್ಡಿ; ಡಿ.ಕೆ.ಸೋದರರ ಮನವೊಲಿಕೆ ಪ್ರಯತ್ನ ಸಫಲ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.