ETV Bharat / state

ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ಪ್ರಗತಿಯ ವರದಿ ಕೇಳಿದ ಹೈಕೋರ್ಟ್ - ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ವಿಚಾರ

ರಾಜ್ಯದಲ್ಲಿ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ಗುರುತಿಸುವ ಹಾಗೂ ತೆರವು ಮಾಡುವ ಸಂಬಂಧ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ಈವರೆಗೆ ಕೈಗೊಂಡಿರುವ ಕ್ರಮಗಳ ಕುರಿತು 2 ವಾರಗಳಲ್ಲಿ ವರದಿ ನೀಡಬೇಕೆಂದು ಹೈಕೋರ್ಟ್ ತಿಳಿಸಿದೆ.

High Court
ಹೈಕೋರ್ಟ್
author img

By

Published : Nov 10, 2020, 5:56 PM IST

ಬೆಂಗಳೂರು : ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಈವರೆಗೆ ನೀಡಿರುವ ನಿರ್ದೇಶನಗಳ ಪಾಲನೆಗೆ ಕೈಗೊಂಡ ಕ್ರಮಗಳ ಕುರಿತು 2 ವಾರದಲ್ಲಿ ವರದಿ ಸಲ್ಲಿಸುವಂತೆ ಹೈಕೋರ್ಟ್, ಸರ್ಕಾರ ಹಾಗೂ ಬಿಬಿಎಂಪಿಗೆ ನಿರ್ದೇಶಿಸಿದೆ.

ಸಾರ್ವಜನಿಕ ಪ್ರದೇಶಗಳಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ದೇವಸ್ಥಾನ, ಮಸೀದಿ, ಚರ್ಚ್ ಸೇರಿದಂತೆ ಧಾರ್ಮಿಕ ಕಟ್ಟಡಗಳನ್ನು ತೆರವು ಮಾಡಬೇಕೆಂದು 2018ರ ಜನವರಿ 31 ರಂದು ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನದ ಮೇರೆಗೆ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಕೆಲಕಾಲ ವಾದ ಆಲಿಸಿದ ಪೀಠ, ಕಳೆದ ಮಾರ್ಚ್ 4 ರಂದು ನೀಡಿದ್ದ ನಿರ್ದೇಶನದಂತೆ ರಾಜ್ಯದಲ್ಲಿ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ಗುರುತಿಸುವ ಹಾಗೂ ತೆರವು ಮಾಡುವ ಸಂಬಂಧ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ಈವರೆಗೆ ಕೈಗೊಂಡಿರುವ ಕ್ರಮಗಳ ಕುರಿತು 2 ವಾರಗಳಲ್ಲಿ ವರದಿ ನೀಡಬೇಕು. ಹಾಗೆಯೇ ಬಿಬಿಎಂಪಿ ವ್ಯಾಪ್ತಿಯ 8 ವಲಯಗಳಲ್ಲಿ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ತೆರವು ಮಾಡಲು ಪಾಲಿಕೆ ಕೈಗೊಂಡಿರುವ ಕ್ರಮಗಳ ಕುರಿತು ವರದಿಯನ್ನು ಪ್ರಮಾಣಪತ್ರದೊಂದಿಗೆ ಸಲ್ಲಿಸಬೇಕು ಎಂದು ನಿರ್ದೇಶಿಸಿ, ವಿಚಾರಣೆಯನ್ನು ಡಿಸೆಂಬರ್ 14ಕ್ಕೆ ಮುಂದೂಡಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.