ಬೆಂಗಳೂರು : ಬೆಸ್ಕಾಂ ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಕಂಬಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಎಲ್ಲಾ ಒಎಫ್‌ಸಿ ಕೇಬಲ್, ಡೇಟಾ ಕೇಬಲ್ ಹಾಗೂ ಡಿಶ್ ಕೇಬಲ್ ಗಳನ್ನು ಒಂದು ವಾರದೊಳಗೆ ತೆರವುಗೊಳಿಸಲು ಸಂಬಂಧಿಸಿದ ಇಂಟರ್ ನೆಟ್ ಸೇವಾ ಕಂಪನಿಗಳು, ಟಿವಿ ಕೇಬಲ್ ಆಪರೇಟರ್ ಗಳಿಗೆ ಬೆಸ್ಕಾಂ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಬೆಸ್ಕಾಂ ವಿದ್ಯುತ್ ಕಂಬಗಳ ಮೇಲೆ ಅನಧಿಕೃತವಾಗಿ ಒಎಫ್‌ಸಿ ಕೇಬಲ್ ಹಾಗೂ ಇನ್ನಿತರ ಕೇಬಲ್ ಗಳನ್ನು ಅಳವಡಿಸಿದ್ದ ಪರಿಣಾಮ ವಿದ್ಯುತ್ ಕಂಬ ಉರುಳಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪಾದಚಾರಿಗಳು ಗಾಯಗೊಂಡಿದ್ದು, ಸುರಕ್ಷತೆ ದೃಷ್ಠಿಯಿಂದ ಬೆಸ್ಕಾಂ ಅನಧಿಕೃತ ಕೇಬಲ್ಗಳನ್ನು ತೆರವುಗೊಳಿಸಲು ನಿರ್ಧರಿಸಿದೆ.
ಜೊತೆಗೆ ಒಎಫ್‌ಸಿ, ಇಂಟರ್ ನೆಟ್ ಡೇಟಾ ಕೇಬಲ್ ಹಾಗೂ ಡಿಶ್ ಕೇಬಲ್ ಗಳನ್ನು ಒಂದು ವಾರದೊಳಗೆ ತೆರವುಗೊಳಿಸಲು ಸಂಬಂಧಪಟ್ಟ ಇಂಟರ್ ನೆಟ್ ಕಂಪನಿಗಳು ಹಾಗೂ ಡಿಶ್ ಕೇಬಲ್ ಅಪರೇಟರ್ಗಳು ತಪ್ಪಿದ್ದಲ್ಲಿ, ಬೆಸ್ಕಾಂ ಅವುಗಳನ್ನು ತೆರವುಗೊಳಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ಬೆಸ್ಕಾಂ ಎಚ್ಚರಿಕೆ ರವಾನಿಸಿದೆ.
ಇದನ್ನೂ ಓದಿ : ಬೆಂಗಳೂರು: ವಿದ್ಯುತ್ ಕಂಬ ಉರುಳಿಬಿದ್ದು ಕಾಲೇಜು ವಿದ್ಯಾರ್ಥಿನಿಗೆ ಗಂಭೀರ ಗಾಯ